Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸೀರತ್ ಶಿಕ್ಷಕರ ಪ್ರಬಂಧ ಸ್ಪರ್ಧೆ:...

ಸೀರತ್ ಶಿಕ್ಷಕರ ಪ್ರಬಂಧ ಸ್ಪರ್ಧೆ: ವಿಜೇತರಿಗೆ ಬಹುಮಾನ ವಿತರಣೆ

ವಾರ್ತಾಭಾರತಿವಾರ್ತಾಭಾರತಿ9 Feb 2019 6:10 PM IST
share
ಸೀರತ್ ಶಿಕ್ಷಕರ ಪ್ರಬಂಧ ಸ್ಪರ್ಧೆ: ವಿಜೇತರಿಗೆ ಬಹುಮಾನ ವಿತರಣೆ

ಮಂಗಳೂರು, ಫೆ.9: ಸಮಾಜದಲ್ಲಿ ಇಂದು ಎಲ್ಲಾ ಧರ್ಮಗಳನ್ನು ಅಧ್ಯಯನ ನಡೆಸಬೇಕಾದ ಅಗತ್ಯವಿದೆ ಎಂದು ಹಿರಿಯ ಸಾಹಿತಿ ಏರ್ಯ ಲಕ್ಷಿ್ಮೀ ನಾರಾಯಣ ಆಳ್ವ ಅಭಿಪ್ರಾಯಿಸಿದ್ದಾರೆ.

ಅವರು ಇಂದು ನಗರದ ಐಎಂಎ ಸಭಾಂಗಣದಲ್ಲಿ ‘ಪ್ರವಾದಿ ಮುಹಮ್ಮದ್(ಸ): ಮಾನವ ಕುಲದ ಶ್ರೇಷ್ಠ ಮಾರ್ಗದರ್ಶಕ’ ಸೀರತ್ ಅಭಿಯಾನದ ಅಂಗವಾಗಿ ದ.ಕ ಜಿಲ್ಲೆಯ ಶಿಕ್ಷಕ/ಶಿಕ್ಷಕಿಯರಿಗಾಗಿ ನಡೆದ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಭಾರತವು ಜಾತ್ಯತೀತ ರಾಷ್ಟ್ರವಾಗಿದ್ದು, ಎಲ್ಲಾ ಧರ್ಮಗಳ ನಡುವೆ ಬೆಳೆದ ನನಗೆ ಜಾತಿ, ಧರ್ಮಗಳನ್ನು ಮೀರಿ ಬೆಳೆಯಲು ಸಾಧ್ಯವಾಗಿದೆ. ಮಾತ್ರವಲ್ಲದೆ, ಕುರ್‌ಆನ್, ಬೈಬಲ್, ಭಗದ್ಗೀತೆ ಮೊದಲಾದ ಧರ್ಮ ಗ್ರಂಥಗಳನ್ನು ಓದಿದ ಕಾರಣಕ್ಕಾಗಿ ಮಾನವೀಯತೆ ಎಲ್ಲಾ ಧರ್ಮಗಲ್ಲಿ ಸಂದೇಶ ಎಂಬ ಅರಿವಿದೆ ಎಂದರು.

ಮಂಗಳೂರು ಯುನಿವರ್ಸಿಟಿ ಕಾಲೇಜಿನ ಪ್ರಾಂಶುಪಾಲ ಡಾ. ಉದಯ್ ಕುಮಾರ್ ಇರ್ವತ್ತೂರು ಮಾತನಾಡಿ, ಇಂದು ಸಮಾಜದಲ್ಲಿ ಅಭಿವ್ಯಕ್ತಿ ಸ್ವಾತಂತ್ರವನ್ನು ಹತ್ತಿಕ್ಕುವ ಪ್ರಯತ್ನಗಳು ನಡೆಯುತ್ತಿದ್ದು, ನಾವು ಮಾತನಾಡುವುದನ್ನು ಒತ್ತಡ ಪೂರ್ವಕವಾಗಿ ಹೇರಲಾಗುವ ಪರಿಸ್ಥಿತಿ ಇರುವುದು ಆತಂಕಕಾರಿ, ಇತರ ಧರ್ಮಗಳ ಸಂದೇಶಗಳನ್ನು ಅರಿತುಕೊಳ್ಳುವಲ್ಲಿ ಇಂತಹ ಕಾರ್ಯಕ್ರಮಗಳ ಅತ್ಯವಿದೆ ಎಂದು ಅವರು ಹೇಳಿದರು.

‘ಪ್ರವಾದಿ ಮುಹಮ್ಮದ್ ನನ್ನ ದೃಷ್ಟ್ಟಿಯಲ್ಲಿ’ ಎಂಬ ವಿಷಯದಲ್ಲಿ ನಡೆಸಲಾದ ಪ್ರಬಂಧ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನವನ್ನು ಉಳಾಯಿಬೆಟ್ಟು ಸರಕಾರಿ ಹಿ.ಪ್ರಾ. ಶಾಲೆಯ ಚೇತನ್ ಕೊಪ್ಪ ಪಡೆದಿದ್ದು, ಅವರಿಗೆ ಹಿರಿಯ ಸಾಹಿತಿ ಏರ್ಯ ಲಕ್ಷ್ಮೀನಾರಾಯಣ ಆಳ್ವ ಅವರು 25,000 ರೂ.ಗಳ ಬಹುಮಾನ ಹಾಗೂ ಪ್ರಮಾಣಪತ್ರ ವಿತರಿಸಿದರು.

ದ್ವಿತೀಯ ಬಹುಮಾನವಾಗಿ 15,000 ರೂ. ನಗದು ಹಾಗೂ ಪ್ರಮಾಣ ಪತ್ರವನ್ನು ಕೃಷ್ಣಾಪುರ 5ನೆ ಬ್ಲಾಕ್‌ನ ಸರಕಾರಿ ಹೈಸ್ಕೂಲ್ ಮಂಜುಳಾ ಪಡೆದಿದ್ದು, ಪುತ್ತೂರು ಕುಂಬ್ರ ಸರಕಾರಿ ಪಿಯು ಕಾಲೇಜಿನ ಸುಲೇಮಾನ್ ಕೆ. ತೃತೀಯ ಬಹುಮಾನವಾಗಿ 10000 ರೂ. ನಗದು ಹಾಗೂ ಪ್ರಮಾಣ ಪತ್ರ ಸ್ವೀಕರಿಸಿದರು.

ಈ ಸಂದರ್ಭ 11 ಮಂದಿಗೆ ತಲಾ 2000 ರೂ. ನಗದು ಹಾಗೂ ಪ್ರಮಾಣಪತ್ರವನ್ನು ಸಮಾಧಾಕರ ಬಹುಮಾನವಾಗಿ ನೀಡಲಾಯಿತು.
ಸೀರತ್ ಅಭಿಯಾನ ಸ್ವಾಗತ ಸಮಿತಿಯ ಅಧ್ಯಕ್ಷ ಡಾ. ಸಿ.ಪಿ. ಹಬೀಬ್ ರೆಹ್ಮಾನ್ ಅಧ್ಯಕ್ಷತೆ ವಹಿಸಿದ್ದರು. ಶಾಂತಿ ಪ್ರಕಾಶನದ ವ್ಯವಸ್ಥಾಪಕ ಮುಹಮ್ಮದ್ ಕುಂಞಿ ಪ್ರಾಸ್ತಾವಿಕವಾಗಿ ಮಾತನಾಡಿ, ಸ್ವಾಗತಿಸಿದರು.

ಬ್ಯಾರೀಸ್ ವೆಲ್ಪೇರ್ ಫೋರಂ ಅಬುಧಾಬಿ ಘಟಕದ ಅಧ್ಯಕ್ಷ ಮುಹಮ್ಮದ್ ಅಲಿ ಉಚ್ಚಿಲ್, ಜಮಾಅತೆ ಇಸ್ಲಾಮಿ ಹಿಂದ್‌ನ ಕರ್ನಾಟಕ ರಾಜ್ಯ ಕಾರ್ಯದರ್ಶಿ ಕೆ.ಎಂ. ಅಶ್ರಫ್, ಸ್ವಾಗತ ಸಮಿತಿಯ ಸದಸ್ಯರಾದ ಕೆ.ಎಂ. ಶರೀಫ್, ನಾಝಿಮ್ ಮೊದಲಾದವರು ಉಪಸ್ಥಿತರಿದ್ದರು.
ಮುಹಮ್ಮದ್ ತುಂಬೆ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X