ಆಂಧ್ರಕ್ಕೆ ಪ್ರಧಾನಿ: ಕಪ್ಪು ಬಾವುಟ ಪ್ರದರ್ಶಿಸಿ ಎಂದ ಚಂದ್ರಬಾಬು ನಾಯ್ಡು
ಅಮರಾವತಿ, ಫೆ. 9: ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯಕ್ಕೆ ಭೇಟಿ ನೀಡುವ ಸಂದರ್ಭ ಗಾಂಧಿ ಮಾದರಿಯಲ್ಲಿ ಪ್ರತಿಭಟನೆ ನಡೆಸುವಂತೆ ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಶನಿವಾರ ಟಿಡಿಪಿ ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ.
ಟೆಲಿಕಾನ್ಫರೆನ್ಸ್ ಮೂಲಕ ಪಕ್ಷದ ನಾಯಕರೊಂದಿಗೆ ಮಾತನಾಡಿದ ಅವರು, ‘‘ನಾಳೆ ಕರಾಳ ದಿನ. ನರೇಂದ್ರ ಮೋದಿ ಅವರು ಆಂಧ್ರಪ್ರದೇಶಕ್ಕೆ ಮಾಡಿದ ಅನ್ಯಾಯ ಸಾಬೀತುಪಡಿಸಲು ಇಲ್ಲಿಗೆ ಆಗಮಿಸುತ್ತಿದ್ದಾರೆ. ಮೋದಿ ಅವರು ರಾಜ್ಯ ಹಾಗೂ ಸಾಂವಿಧಾನಿಕ ಸಂಸ್ಥೆಗಳನ್ನು ಶಿಥಿಲಗೊಳಿಸುತ್ತಿದ್ದಾರೆ. ಪ್ರಧಾನ ಮಂತ್ರಿ ಅವರ ಕಚೇರಿ ರಫೇಲ್ ಒಪ್ಪಂದದ ಮಧ್ಯ ಪ್ರವೇಶಿಸಿರುವುದು ದೇಶಕ್ಕೆ ಮಾಡಿದ ಅಗೌರವ.’’ ಎಂದರು. ಹಳದಿ ಹಾಗೂ ಕಪ್ಪು ಬಣ್ಣದ ಶರ್ಟ್ ಹಾಗೂ ಬಲೂನ್ ಬಳಸಿ ನಾವು ಗಾಂಧಿ ಮಾರ್ಗದಲ್ಲಿ ಮೋದಿ ಅವರ ವಿರುದ್ಧ ಪ್ರತಿಭಟನೆ ನಡೆಸಬೇಕಿದೆ ಎಂದು ಅವರು ಹೇಳಿದರು.
Next Story