Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. "ಪ್ರವಾದಿ ಮುಹಮ್ಮದರು ಶಾಂತಿ, ಸೌಹಾರ್ದ,...

"ಪ್ರವಾದಿ ಮುಹಮ್ಮದರು ಶಾಂತಿ, ಸೌಹಾರ್ದ, ಮಾನವೀಯತೆಯ ಸಂದೇಶ ಸಾರಿದ ಮಹಾನ್ ಚೇತನ"

ಗೃಹ ಸಚಿವ ಎಂ.ಬಿ.ಪಾಟೀಲ್

ವಾರ್ತಾಭಾರತಿವಾರ್ತಾಭಾರತಿ9 Feb 2019 9:31 PM IST
share
ಪ್ರವಾದಿ ಮುಹಮ್ಮದರು ಶಾಂತಿ, ಸೌಹಾರ್ದ, ಮಾನವೀಯತೆಯ ಸಂದೇಶ ಸಾರಿದ ಮಹಾನ್ ಚೇತನ

ವಿಜಯಪುರ,ಫೆ.9: ಇಸ್ಲಾಂ ಶಾಂತಿಯನ್ನು ಬಯಸುವ ಹಾಗೂ ಶಾಂತಿಯ ಆಶಯ ಹೊಂದಿದ ಧರ್ಮ ಎಂದು ಗೃಹ ಸಚಿವ ಎಂ.ಬಿ.ಪಾಟೀಲ್ ಹೇಳಿದರು.

ವಿಜಯಪುರದ ದರಬಾರ ಹೈಸ್ಕೂಲ್ ಮೈದಾನದಲ್ಲಿ ಪ್ರವಾದಿ ಮುಹಮ್ಮದ್ (ಸ.ಅ) ಅವರ ಹೆಸರಿನಲ್ಲಿ ಹಮ್ಮಿಕೊಳ್ಳಲಾಗಿದ್ದ ವಿಶ್ವ ಶಾಂತಿ ಸಮ್ಮೇಳನ ಉದ್ಘಾಟಿಸಿ ಮಾತನಾಡಿದ ಅವರು, ಇಸ್ಲಾಂನ ಶಬ್ದವನ್ನು ಅವಲೋಕಿಸುವುದಾದರೆ ಇಸ್ಲಾಂ ಎಂದರೆ ಸಲಾಮ್, ಸಲಾಮ್‍ನ ಅರ್ಥವೇ ಶಾಂತಿ. ಹೀಗಾಗಿ ಶಾಂತಿ ಎಂದರೆ ಇಸ್ಲಾಂ, ಇಸ್ಲಾಂ ಎಂದರೆ ಶಾಂತಿ ಎಂದರು.

ಸೌಹಾರ್ದತೆ, ದಯೆ, ಒಗ್ಗಟ್ಟು, ಪ್ರೀತಿ, ಬದ್ಧತೆ ಇಸ್ಲಾಂ ಧರ್ಮದ ಆಶಯಗಳಾಗಿವೆ. ಪ್ರವಾದಿ ಮುಹಮ್ಮದ್ (ಸ.ಅ) ಅವರು ಜಗತ್ತಿಗೆ ಶಾಂತಿ, ಸೌಹಾರ್ದತೆ, ಮಾನವೀಯತೆಯ ಸಂದೇಶವನ್ನು ಸಾರಿದ ಮಹಾನ್ ಚೇತನ. ಅವರ ಆದರ್ಶಗಳನ್ನು ಅಳವಡಿಸಿಕೊಂಡು ಬದುಕಬೇಕಿದೆ. ಎಲ್ಲೆಡೆ ಶಾಂತಿ ನೆಲಸಬೇಕು ಎಂಬುದು ಪ್ರವಾದಿ ಮುಹಮ್ಮದ್ (ಸ.ಅ) ಅವರ ಆಶಯವಾಗಿತ್ತು ಎಂದು ಹೇಳಿದರು.

ಗಳಿಕೆಯ ಒಂದು ಭಾಗವನ್ನು ಬಡವರಿಗೆ ನೀಡುವಂತೆ ಇಸ್ಲಾಂ ಸೂಚನೆ ನೀಡಿದೆ. ನಿರ್ಗತಿಕರ, ಅನಾಥರ ಜೀವನದಲ್ಲಿ ಬೆಳಕನ್ನು ತೋರಿ ಅವರ ಜೀವನ ಉಜ್ವಲವಾಗಿ ಶ್ರಮಿಸುವಂತೆ ಇಸ್ಲಾಂ ಪ್ರೇರಣೆ ನೀಡುತ್ತದೆ ಎಂದರು. 

ಸರ್ವಜನಾಂಗದ ಶಾಂತಿಯ ತೋಟವಾಗಬೇಕು ಎಂಬ ಹಿರಿಯರ ಆಶಯವನ್ನು ಈಡೇರಿಸುವ ಸಂಕಲ್ಪ ಮಾಡಬೇಕಾಗಿದೆ. ಮುಸ್ಲಿಂ ಬಾಂಧವರೊಡನೆ ಅವಿನಾಭಾವ ಸಂಬಂಧ ಹೊಂದಿದ್ದೇನೆ. ನೀರಾವರಿ ಸಚಿವನಾಗಿ ಐತಿಹಾಸಿಕ ಕೆರೆ ತುಂಬುವ ಯೋಜನೆ, ಐತಿಹಾಸಿಕ ಬಾವಡಿಗಳ ಪುನಶ್ಚೇತನ ಕಾರ್ಯ ಕೈಗೊಂಡಿರುವುದು ತೃಪ್ತಿ ತಂದಿದೆ. ವಿದ್ಯುತ್ಛಕ್ತಿ ಇಲ್ಲದ, ಪ್ರಸ್ತುತ ಜಿಲ್ಲೆಯ ಜನಸಂಖ್ಯೆಗಿಂತ ಹತ್ತು ಪಟ್ಟು ಜನಸಂಖ್ಯೆ ಇದ್ದ ಸಂದರ್ಭದಲ್ಲಿ ಆದಿಲ್‍ ಶಾ ಅರಸರು ಸಮರ್ಪಕವಾಗಿ ಕುಡಿಯುವ ನೀರು ಒದಗಿಸುತ್ತಿದ್ದರು ಎಂದು ಸ್ಮರಿಸಿದರು.  

ಕೆಟ್ಟವರು ಎಲ್ಲ ಧರ್ಮದಲ್ಲಿಯೂ ಇದ್ದಾರೆ. ಕೆಟ್ಟ ಕಾರ್ಯಗಳನ್ನು ಮಾಡುವವರಿಗೆ ಯಾವುದೇ ಧರ್ಮವಿಲ್ಲ. ಕೆಟ್ಟದ್ದು ಮಾಡುವುದೇ ಅವರ ಧರ್ಮ. ಹೀಗಾಗಿ ಅಂತಹ ವ್ಯಕ್ತಿಗಳ ಬಗ್ಗೆ ತಲೆ ಕೆಡಿಸಿಕೊಳ್ಳದೇ, ಮಹಾತ್ಮರ ಆದರ್ಶಗಳನ್ನು ಅನುಸರಿಸಿ ಜೀವನದಲ್ಲಿ ಮುನ್ನಡೆಯಬೇಕು ಎಂದು ಕರೆ ನೀಡಿದರು.

ಕಲಬುರ್ಗಿಯ ಹಝ್ರತ್ ಖ್ವಾಜಾ ಬಂದೇನವಾಜ್ ದರ್ಗಾದ ಸಜ್ಜಾದೆ ನಶೀನ್ ಡಾ.ಸೈಯ್ಯದ್ ಖುಸ್ರೋ ಹುಸೇನಿ, ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್, ಸರ್ಕಾರದ ನವದೆಹಲಿ ಪ್ರತಿನಿಧಿ ಸೈಯ್ಯದ್ ಮೊಹೀದ್ ಅಲ್ತಾಪ್ ಮಾತನಾಡಿದರು.

ಕಾರ್ಯಕ್ರಮದ ಸಂಘಟಕ, ಕರ್ನಾಟಕ ಅಹ್ಲೆ ಸುನ್ನತ್ ಜಮಾತ್‍ನ ರಾಜ್ಯಾಧ್ಯಕ್ಷ ಹಝ್ರತ್ ಸೈಯ್ಯದ್ ತನ್ವೀರ್ ಪೀರ್ ಹಾಶ್ಮೀ, ಖ್ವಾಜಾ ಅಮೀನ್ ದರ್ಗಾದ ಸಜ್ಜಾದೆ ನಶೀನ್ ಸೈಯ್ಯದ್ ಗೇಸುದರಾಜ್, ಸೈಯ್ಯದ್ ತಾಜುದ್ದೀನ್ ಪೀರ್, ಪ್ರೊ.ವಾಜೀದ ಪೀರ್, ಮೌಲಾನಾ ಮುಹಮ್ಮದ್‍ ಅಲಿ, ನವದೆಹಲಿಯ ಉಲಮಾ ಮಶಾಯಿಕ್ ಬೋರ್ಡ್ ಅಧ್ಯಕ್ಷ ಸೈಯ್ಯದ್ ಮುಹಮ್ಮದ್ ಅಶ್ರಫುಲ್ ಅಲ್ ಜೀಲಾನಿ, ಮೌಲಾನಾ ಸೈಯ್ಯದ್ ಆಲಿ ಮುಸ್ತಫಾ, ಕಾಂಗ್ರೆಸ್ ಮುಖಂಡ ಅಬ್ದುಲ್‍ ಹಮೀದ್ ಮುಶ್ರೀಪ್, ಜಿಲ್ಲಾ ವಕ್ಫ್ ಸಲಹಾ ಮಂಡಳಿ ಅಧ್ಯಕ್ಷ ಉಸ್ಮಾನ್ ಪಟೇಲ್, ಉಪಾಧ್ಯಕ್ಷ ಸೈಯ್ಯದ್ ಆಸೀಫುಲ್ಲಾ ಖಾದ್ರಿ, ರವಿಕುಮಾರ ಚೌಹಾಣ್ ಸೇರಿ ಅನೇಕರು ಸಮಾರಂಭದಲ್ಲಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X