ತೃಣಮೂಲ ಕಾಂಗ್ರೆಸ್ ಶಾಸಕನ ಗುಂಡಿಕ್ಕಿ ಹತ್ಯೆ
ಪಶ್ಚಿಮ ಬಂಗಾಳ, ಫೆ.9: ಇಲ್ಲಿನ ನಾದಿಯಾ ಜಿಲ್ಲೆಯ ತೃಣಮೂಲ ಕಾಂಗ್ರೆಸ್ ಶಾಸಕನನ್ನು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆಗೈದಿರುವ ಬಗ್ಗೆ ವರದಿಯಾಗಿದೆ. ಸತ್ಯಜಿತ್ ವಿಶ್ವಾಸ್ ಮೃತಪಟ್ಟ ಶಾಸಕ ಎಂದು ಗುರುತಿಸಲಾಗಿದೆ.
ಕೃಷ್ಣಗಂಜ್ ಶಾಸಕರಾಗಿದ್ದ ವಿಶ್ವಾಸ್ ಸರಸ್ವತಿ ಪೂಜಾ ಕಾರ್ಯಕ್ರಮಕ್ಕೆ ತೆರಳುವಾಗ ಈ ಘಟನೆ ನಡೆದಿದೆ. ಕೂಡಲೇ ಅವರನ್ನು ಸಮೀಪದ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಅವರು ಮೃತಪಟ್ಟಿದ್ದಾರೆ.
Next Story