ಲೋಕಸಭಾ ಚುನಾವಣೆ: ಅಭ್ಯರ್ಥಿಗಳ ಆಯ್ಕೆಗೆ ವೀಕ್ಷಕರಿಂದ ಅಭಿಪ್ರಾಯ ಸಂಗ್ರಹ
ಮಂಗಳೂರು, ಫೆ.9: ಮುಂದಿನ ಲೋಕಸಭಾ ಚುನಾವಣೆಯಲ್ಲಿ ಉತ್ತರ ಕನ್ನಡ, ಉಡುಪಿ-ಚಿಕ್ಕಮಗಳೂರು, ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಕಣಕ್ಕಿಳಿಸುವ ಅಭ್ಯರ್ಥಿಗಳ ಆಯ್ಕೆಗಾಗಿ ಶನಿವಾರ ದ.ಕ.ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಪಕ್ಷದ ಹೈಕಮಾಂಡ್‌ನಿಂದ ನಿಯುಕ್ತರಾದ ವೀಕ್ಷಕರು ಅಭಿಪ್ರಾಯ ಸಂಗ್ರಹಿಸಿದರು.
ಎಐಸಿಸಿ ಕಾರ್ಯದರ್ಶಿಗಳಾದ ವಿಷ್ಣುನಾಥನ್, ಮಾಣಿಕಂ ಟಾಗೋರ್, ಮಧು ಯಕ್ಷಿ ಗೌಡ್ ಪಕ್ಷದ ಜಿಲ್ಲಾ ಪ್ರಮುಖರು, ವಿವಿಧ ಘಟಕಗಳ ಪದಾಧಿಕಾರಿ ಗಳು, ಕಾಂಗ್ರೆಸ್ ಪಕ್ಷದಿಂದ ಆಯ್ಕೆಗೊಂಡ ಜನಪ್ರತಿನಿಧಿಗಳಿಂದ ಮಾಹಿತಿ ಪಡೆದುಕೊಂಡರು. ಬಳಿಕ ಮಾತನಾಡಿದ ಅವರು ಇಲ್ಲಿ ಸಂಗ್ರಹಿಸಲಾದ ಅಭಿಪ್ರಾಯವನ್ನು ಪಕ್ಷದ ಹೈಕಮಾಂಡ್‌ಗೆ ಕಳುಹಿಸಿಕೊಡಲಾಗುವುದು ಮತ್ತು ಅಲ್ಲಿ ಅಂತಿಮ ಆಯ್ಕೆ ನಡೆಯಲಿದೆ ಎಂದರು.
ಈ ಸಂದರ್ಭ ಮಾಜಿ ಸಚಿವರಾದ ರಮಾನಾಥ ರೈ, ವಿನಯ ಕುಮಾರ್ ಸೊರಕೆ, ಪ್ರಮೋದ್ ಮದ್ವರಾಜ್, ಮೋಟಮ್ಮ, ಮಾಜಿ ಶಾಸಕರಾದ ಗೋಪಾಲ್ ಭಂಡಾರಿ, ಜೆ.ಆರ್ ಲೋಬೊ, ಮುಖ್ಯಮಂತ್ರಿಗಳ ಸಂಸದೀಯ ಕಾರ್ಯದರ್ಶಿ ಹಾಗೂ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ, ವಿಧಾನ ಪರಿಷತ್ ಸದಸ್ಯ ಹಾಗೂ ದ.ಕ.ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ. ಹರೀಶ್ ಕುಮಾರ್, ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಜನಾದರ್ನ ತೋನ್ಸೆ, ಚಿಕ್ಕಮಗಳೂರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ. ವಿಜಯ್ ಕುಮಾರ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಯೂ ಆಗಿರುವ ದ.ಕ. ಜಿಲ್ಲಾ ಉಸ್ತುವಾರಿ ಯು.ಬಿ ವೆಂಕಟೇಶ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಜಿ.ಎ. ಬಾವ, ಕೆಪಿಸಿಸಿ ಕಾರ್ಯದರ್ಶಿಗಳಾದ ಸವಿತಾ ರಮೇಶ್, ಭರತ್ ಮುಂಡೋಡಿ, ಎಂ.ಎಸ್. ಮುಹಮ್ಮದ್, ದೇವಿ ಪ್ರಸಾದ್ ಶೆಟ್ಟಿ, ಕಳ್ಳಿಗೆ ತಾರನಾಥ ಶೆಟ್ಟಿ, ನವೀನ್ ಡಿಸೋಜ, ಮೂರು ಜಿಲ್ಲೆಗಳ ವಿವಿಧ ಬ್ಲಾಕ್‌ಗಳ ಕಾಂಗ್ರೆಸ್ ಅಧ್ಯಕ್ಷರು, ಜಿಲ್ಲಾ ಕಾಂಗ್ರೆಸ್ ಮುಂಚೂಣಿ ಘಟಕದ ಅಧ್ಯಕ್ಷರು, ಕೆಪಿಸಿಸಿ ಪದಾಧಿಕಾರಿಗಳು ಮತ್ತಿತರ ನಾಯಕರುಗಳು ಉಪಸ್ಥಿತರಿದ್ದರು.







