ಉಡುಪಿ ಕೆಥೊಲಿಕ್ ಸಭಾದಿಂದ ಜಾರ್ಜ್ ಫೆರ್ನಾಂಡಿಸ್‌ಗೆ ಶ್ರದ್ಧಾಂಜಲಿ

ಉಡುಪಿ, ಫೆ.10: ಇತ್ತೀಚೆಗೆ ನಿಧನರಾದ ಮಾಜಿ ಕೇಂದ್ರ ಸಚಿವ ಜಾರ್ಜ್ ಫೆರ್ನಾಂಡಿಸ್ ಅವರಿಗೆ ಕೆಥೋಲಿಕ್ ಸಭಾ ಉಡುಪಿ ಪ್ರದೇಶದ ವತಿಯಿಂದ ಶ್ರದ್ಧಾಂಜಲಿ ಸಭೆಯನ್ನು ರವಿವಾರ ಸಂಸ್ಥೆಯ ಕಚೇರಿಯಲ್ಲಿ ಆಯೋಜಿಸ ಲಾಗಿತ್ತು.
ಉಡುಪಿ ಶೋಕಮಾತಾ ಇಗರ್ಜಿಯ ಧರ್ಮಗುರು ವಂ.ವಲೇರಿಯನ್ ಮೆಂಡೊನ್ಸಾ ಮಾತನಾಡಿ, ಜಾರ್ಜ್ ಫೆರ್ನಾಂಡಿಸ್ ತನ್ನನ್ನು ಸಮಾಜಕ್ಕಾಗಿ ಆರ್ಪಿಸಿದ ಮಹಾನ್ ನೇತಾರ. ಅವರು ಪ್ರತಿಯೊಬ್ಬರಿಗೂ ಆದರ್ಶಪ್ರಾಯ ರಾಗಿದ್ದಾರೆ ಎಂದರು.
ಕೆಪಿಸಿಸಿ ಕಾರ್ಯದರ್ಶಿ ವೆರೋನಿಕಾ ಕರ್ನೆಲಿಯೊ, ಮಾಜಿ ಜಿಪಂ ಅಧ್ಯಕ್ಷ ಜೆರಾಲ್ಡ್ ಫೆರ್ನಾಂಡಿಸ್ ನುಡಿನಮನ ಸಲ್ಲಿಸಿ, ಜಾರ್ಜ್ ಫೆರ್ನಾಂಡಿಸ್ ದೇಶ ಹಾಗೂ ರಾಜ್ಯಕ್ಕೆ ನೀಡಿದ ಸೇವೆಯನ್ನು ಸ್ಮರಿಸಿದರು. ಸಭೆಯ ಅಧ್ಯಕ್ಷತೆಯನ್ನು ಕೆಥೊಲಿಕ್ ಸಭಾ ಉಡುಪಿ ಪ್ರದೇಶ್ ಇದರ ಅಧ್ಯಕ್ಷ ಆಲ್ವಿನ್ ಕ್ವಾಡ್ರಸ್ ವಹಿಸಿದ್ದರು.
ಕೆಥೊಲಿಕ್ ಸಭಾ ಉಡುಪಿ ಪ್ರದೇಶ್ ಇದರ ನಿಕಟಪೂರ್ವ ಅಧ್ಯಕ್ಷ ವಲೇರಿಯನ್ ಫೆರ್ನಾಂಡಿಸ್, ಕಾರ್ಯದರ್ಶಿ ಮೆಕ್ಷಿಮ್ ಡಿಸೋಜ, ನಿಯೋ ಜಿತ ಅಧ್ಯಕ್ಷ ಮೇರಿ ಡಿಸೋಜ, ಉಡುಪಿ ಧರ್ಮಪ್ರಾಂತ್ಯದ ಪಾಲನಾ ಮಂಡಳಿಯ ಕಾರ್ಯದರ್ಶಿ ಅಲ್ಫೋನ್ಸ್ ಡಿಕೋಸ್ತಾ, ಉಪಾಧ್ಯಕ್ಷ ರೋಬರ್ಟ್ ಮಿನೇಜಸ್, ಕೋಶಾಧಿಕಾರಿ ಜೆರಾಲ್ಡ್ ರೊಡ್ರಿಗಸ್ ಮೊದಲಾದವರು ಉಪಸ್ಥಿತರಿದ್ದರು.





