ಹಿಂಸಾತ್ಮಕ ರೂಪ ಪಡೆದ ಗುಜ್ಜರ್ ಮೀಸಲಾತಿ ಪ್ರತಿಭಟನೆ: ಪೊಲೀಸ್ ವಾಹನಗಳಿಗೆ ಬೆಂಕಿ

ಜೈಪುರ, ಫೆ.10: ಶೈಕ್ಷಣಿಕ ಕ್ಷೇತ್ರ ಮತ್ತು ಉದ್ಯೋಗಗಳಲ್ಲಿ ಮೀಸಲಾತಿಗೆ ಆಗ್ರಹಿಸಿ ಗುಜ್ಜರ್ ಸಮುದಾಯ ನಡೆಸುತ್ತಿರುವ ಪ್ರತಿಭಟನೆ ಹಿಂಸಾತ್ಮಕ ರೂಪ ಪಡೆದುಕೊಂಡಿದ್ದು, ಪೊಲೀಸ್ ವಾಹನಕ್ಕೆ ಬೆಂಕಿ ಹಚ್ಚಲಾಗಿದೆ.
ಆಗ್ರಾ-ಮೊರೆನಾ ಹೆದ್ದಾರಿಯನ್ನು ತಡೆದ ಪ್ರತಿಭಟನಕಾರರಲ್ಲಿ ಕೆಲವು ದುಷ್ಕರ್ಮಿಗಳು 8ರಿಂದ 10 ಸುತ್ತು ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
ಪೊಲೀಸ್ ವಾಹನಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಕಾರರು, ರಸ್ತೆ ತಡೆ ನಡೆಸಿದರು. ಪ್ರತಿಭಟನಕಾರರು ಕಲ್ಲುತೂರಾಟ ನಡೆಸಿದ್ದು, ಒಬ್ಬರು ಸೈನಿಕರು ಗಾಯಗೊಂಡಿದ್ದಾರೆ. ಪ್ರತಿಭಟನಕಾರರನ್ನು ನಿಯಂತ್ರಿಸಲು ಪೊಲೀಸರು ಅಶ್ರುವಾಯು ಪ್ರಯೋಗಿಸಿದ್ದಾರೆ.
Next Story





