Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಹೆಬ್ರಿ: ಮಕ್ಕಳಿಬ್ಬರಿಗೆ ವಿಷ ಉಣಿಸಿ...

ಹೆಬ್ರಿ: ಮಕ್ಕಳಿಬ್ಬರಿಗೆ ವಿಷ ಉಣಿಸಿ ಕೊಲೆಗೈದು, ತಾನೂ ಆತ್ಮಹತ್ಯೆ ಮಾಡಿಕೊಂಡ ತಾಯಿ

ವಾರ್ತಾಭಾರತಿವಾರ್ತಾಭಾರತಿ10 Feb 2019 8:46 PM IST
share
ಹೆಬ್ರಿ: ಮಕ್ಕಳಿಬ್ಬರಿಗೆ ವಿಷ ಉಣಿಸಿ ಕೊಲೆಗೈದು, ತಾನೂ ಆತ್ಮಹತ್ಯೆ ಮಾಡಿಕೊಂಡ ತಾಯಿ

ಹೆಬ್ರಿ, ಫೆ.10: ಮಹಿಳೆಯೊಬ್ಬರು ತನ್ನಿಬ್ಬರು ಮಕ್ಕಳಿಗೆ ವಿಷ ಉಣಿಸಿ ಕೊಲೆಗೈದು, ತಾನೂ ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಮುನಿಯಾಲು ಸಮೀಪದ ಚಟ್ಕಲ್‌ ಪಾದೆಯ ಮಾತಿಬೆಟ್ಟು ಎಂಬಲ್ಲಿ ನಡೆದಿದೆ.

ಮೃತರನ್ನು ಮಾಂತಿಬೆಟ್ಟು ನಿವಾಸಿ ಸಂತೋಷ್ ಎಂಬವರ ಪತ್ನಿ ದೀಪಾ (35) ಹಾಗೂ ಮಕ್ಕಳಾದ ಪ್ರಿಯಾ (6) ಮತ್ತು ಶ್ರೇಯಾ(9) ಎಂದು ಗುರುತಿಸಲಾಗಿದೆ.

ಮೂಲತಃ ಶಿವಮೊಗ್ಗದ ಮಂಜುನಾಥ್ ಎಂಬವರು ಕಳೆದ ಹಲವು ವರ್ಷಗಳಿಂದ ಮಾತಿಬೆಟ್ಟುವಿನಲ್ಲಿ ಕೋಳಿ ಫಾರಂ ಉದ್ಯಮ ನಡೆಸುತ್ತಿದ್ದು, ಇವರೊಂದಿಗೆ ಇವರ ಮಗ ಸಂತೋಷ್ ಕೂಡ ಕುಟುಂಬದೊಂದಿಗೆ ಇಲ್ಲೇ ವಾಸವಾದ್ದರು.

ಹಲವು ಸಮಯದಿಂದ ಗರ್ಭಕೋಶದ ತೊಂದರೆಯಿಂದಾಗಿ ಹೊಟ್ಟೆನೋವಿನಿಂದ ಬಳಲುತ್ತಿದ್ದ ದೀಪಾ ಮಾನಸಿಕವಾಗಿ ನೊಂದಿದ್ದರು. ಇದೇ ವಿಚಾರದಲ್ಲಿ ಜೀವನದಲ್ಲಿ ಜಿಗುಪ್ಸೆಗೊಂಡ ಅವರು, ನಾನು ಬದುಕುವುದಿಲ್ಲ, ನಾನಿಲ್ಲದೆ ನನ್ನ ಮಕ್ಕಳಿಗೆ ಬದುಕಲು ಕಷ್ಟವಾಗಬಹುದೆಂದು ತಿಳಿದು ಮಕ್ಕಳಾದ ಪ್ರಿಯಾ ಹಾಗೂ ಶ್ರೇಯಾ ಎಂಬವರನ್ನು ಕೊಲ್ಲುವ ಉದ್ದೇಶದಿಂದ ಮನೆಯಲ್ಲಿ ಫೆ. 9ರಂದು ರಾತ್ರಿ ವೇಳೆ ಊಟದಲ್ಲಿ ವಿಷ ಪಾಷಣವನ್ನು ಬೆರೆಸಿ ಮಕ್ಕಳಿಗೆ ನೀಡಿದ್ದರು. ಬಳಿಕ ದೀಪಾ ಕೂಡ ವಿಷ ಪಾಷಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ಇದರಿಂದ ತೀವ್ರವಾಗಿ ಅಸ್ವಸ್ಥಗೊಂಡ ಮೂವರನ್ನು ಮನೆಯವರು ಆಸ್ಪತ್ರೆಗೆ ದಾಖಲಿಸಿದ್ದು, ಇದರಲ್ಲಿ ದೀಪಾ ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗ್ಗೆ 10 ಗಂಟೆಗೆ ಮೃತಪಟ್ಟರು. ಬೆಳಗ್ಗೆ 11.15ರ ಸುಮಾರಿಗೆ ಚಿಕಿತ್ಸೆಯಲ್ಲಿದ್ದ ಪ್ರಿಯಾ ಹಾಗೂ ಅದರ ನಂತರ ಶ್ರೇಯ ಆಸ್ಪತ್ರೆಯಲ್ಲಿ ಮೃತಪಟ್ಟರೆಂದು ಪೊಲೀಸರು ತಿಳಿಸಿದ್ದಾರೆ.

ಮಕ್ಕಳಿಬ್ಬರು ಹೆಬ್ರಿಯ ಅಮೃತಭಾರತಿ ವಿದ್ಯಾಲಯದ ವಿದ್ಯಾರ್ಥಿಗಳಾಗಿದ್ದು, ಶ್ರೇಯಾ ಮೂರನೆ ತರಗತಿ ಹಾಗೂ ಪ್ರಿಯಾ ಎಲ್‌ಕೆಜಿಯಲ್ಲಿ ಕಲಿಯುತ್ತಿದ್ದರು. ಈ ಮೂವರ ಮೃತದೇಹವನ್ನು ಮರಣೋತ್ತರ ಪರೀಕ್ಷೆಯ ಬಳಿಕ ಮನೆಯವರು ಶಿವಮೊಗ್ಗಕ್ಕೆ ತೆಗೆದುಕೊಂಡು ಹೋಗಿದ್ದಾರೆ ಎಂದು ತಿಳಿದುಬಂದಿದೆ. ಈ ಬಗ್ಗೆ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X