Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. 2 ಸಾವಿರ ಮುಖ ಬೆಲೆಯ ನಕಲಿ ನೋಟು ಸಾಗಣೆ:...

2 ಸಾವಿರ ಮುಖ ಬೆಲೆಯ ನಕಲಿ ನೋಟು ಸಾಗಣೆ: ಆರೋಪಿಗೆ ಜಾಮೀನು ನಿರಾಕರಿಸಿದ ಹೈಕೋರ್ಟ್

ವಾರ್ತಾಭಾರತಿವಾರ್ತಾಭಾರತಿ10 Feb 2019 9:40 PM IST
share
2 ಸಾವಿರ ಮುಖ ಬೆಲೆಯ ನಕಲಿ ನೋಟು ಸಾಗಣೆ: ಆರೋಪಿಗೆ ಜಾಮೀನು ನಿರಾಕರಿಸಿದ ಹೈಕೋರ್ಟ್

ಬೆಂಗಳೂರು, ಫೆ.10: ಪಾಕಿಸ್ತಾನದಿಂದ ಭಾರತದೊಳಕ್ಕೆ 2 ಸಾವಿರ ಮುಖ ಬೆಲೆಯ ನಕಲಿ ನೋಟುಗಳನ್ನು ಸಾಗಿಸಿ, ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಚಲಾವಣೆ ಮಾಡುತ್ತಿದ್ದ ಆರೋಪದಡಿ ನ್ಯಾಯಾಂಗ ಬಂಧನದಲ್ಲಿರುವ ಪ್ರಮುಖ ಆರೋಪಿಗೆ ಹೈಕೋರ್ಟ್ ಜಾಮೀನು ನಿರಾಕರಿಸಿದೆ.

ಈ ಕುರಿತಂತೆ 73 ವರ್ಷದ ಆರೋಪಿ ಮೊಹಮದ್ ಸಜ್ಜಾದ್ ಸಲ್ಲಿಸಿದ್ದ ಮೇಲ್ಮನವಿಯನ್ನು ನ್ಯಾಯಮೂರ್ತಿ ಕೆ.ಎನ್.ಫಣೀಂದ್ರ ಮತ್ತು ನ್ಯಾಯಮೂರ್ತಿ ಕೆ.ನಟರಾಜನ್ ಅವರಿದ್ದ ವಿಭಾಗೀಯ ನ್ಯಾಯಪೀಠ ತಿರಸ್ಕರಿಸಿದೆ. ಈ ಪ್ರಕರಣ ಅತ್ಯಂತ ಗಂಭೀರ ಸ್ವರೂಪದ್ದು, ಎನ್‌ಐಎ(ರಾಷ್ಟ್ರೀಯ ತನಿಖಾ ಸಂಸ್ಥೆ) ಇದರ ತನಿಖೆ ನಡೆಸುತ್ತಿದೆ. ಹೀಗಾಗಿ, ಆರೋಪಿ ತಾನು ಗಂಭೀರ ಸ್ವರೂಪದ ಅಂಗವೈಕಲ್ಯದಿಂದ ಬಳಲುತ್ತಿದ್ದೇನೆ. ಹೀಗಾಗಿ, ಜಾಮೀನು ನೀಡಬೇಕು ಎಂಬ ಅಂಶವನ್ನು ಪರಿಗಣಿಸಲು ಆಗದು ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ.

ವಿಚಾರಣೆ ವೇಳೆ ಎನ್‌ಐಎ ಪರ ವಕೀಲ ಪಿ.ಪ್ರಸನ್ನಕುಮಾರ್ ಅವರು, ದೇಶದಲ್ಲಿನ ನಕಲಿ ನೋಟುಗಳ ಚಲಾವಣೆ ಪತ್ತೆಗೆ ಎನ್‌ಐಎ ಮುಂಬೈ ವಿಭಾಗ ತನಿಖೆ ನಡೆಸಿದೆ. ಈ ತನಿಖೆಯ ವೇಳೆ ಆರೋಪಿಯನ್ನು ಬೆಂಗಳೂರಿನಲ್ಲಿ 2018ರ ಆ.8ರಂದು ಬಂಧಿಸಲಾಗಿದೆ. ಆತನಿಂದ 2 ಸಾವಿರ ಮುಖಬೆಲೆಯ 4 ಲಕ್ಷ ಮೊತ್ತದ ನಕಲಿ ನೋಟುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ನ್ಯಾಯಪೀಠಕ್ಕೆ ತಿಳಿಸಿದರು. ಈತ 2013ರಿಂದ 2018ರ ಅವಧಿಯಲ್ಲಿ ಬೆಂಗಳೂರಿಗೆ 12ಕ್ಕೂ ಹೆಚ್ಚು ಬಾರಿ ಭೇಟಿ ಕೊಟ್ಟಿದ್ದಾನೆ ಮತ್ತು ದೇಶದಾದ್ಯಂತ ಹರಡಿರುವ ನಕಲಿ ನೋಟುಗಳ ಚಲಾವಣೆಯ ತಂಡದ ಪ್ರಮುಖ ಸದಸ್ಯನಾಗಿದ್ದಾನೆ. ಆರೋಪಿಗಳ ಜಾಲವು ಪರಸ್ಪರ ನಡೆಸಿರುವ ಮೊಬೈಲ್ ಪೋನುಗಳ ಸಂಭಾಷಣೆ, ನಕಲಿ ನೋಟುಗಳನ್ನು ಅಸಲಿ ನೋಟುಗಳಿಗೆ ಬದಲಾಯಿಸಿ ಮೊತ್ತವನ್ನು ಬ್ಯಾಂಕ್ ಖಾತೆಗಳಿಗೆ ಭರ್ತಿ ಮಾಡಿದ ದಾಖಲೆಗಳು ತನಿಖಾಧಿಕಾರಿ ಬಳಿ ಇವೆ. ಇದು ದೇಶದ ಅರ್ಥ ವ್ಯವಸ್ಥೆಗೆ ಧಕ್ಕೆ ತರುವ ಕೃತ್ಯವಾಗಿದ್ದು, ಜಾಮೀನು ನೀಡಬಾರದು ಎಂದು ಮನವಿ ಮಾಡಿದರು.

ಇದನ್ನು ಮಾನ್ಯ ಮಾಡಿದ ನ್ಯಾಯಪೀಠ, ಈ ಮೊದಲು ನಗರದ ಎನ್‌ಐಎ ವಿಶೇಷ ನ್ಯಾಯಾಲಯ ಜಾಮೀನು ತಿರಸ್ಕರಿಸಿದ್ದ ಆದೇಶವನ್ನು ಎತ್ತಿ ಹಿಡಿದಿದೆ. ಆರೋಪಿಯ ವಿರುದ್ಧ ಭಾರತೀಯ ದಂಡ ಸಂಹಿತೆ ಕಲಂ 120ಬಿ ಮತ್ತು 489 ಬಿ ಹಾಗೂ 489 ಸಿ ಅನುಸಾರ ಪ್ರಕರಣ ದಾಖಲಿಸಲಾಗಿದೆ.

22 ಲಕ್ಷ ಮೊತ್ತದ ನಕಲಿ ನೋಟುಗಳ ಚಲಾವಣೆ: ಪಾಕಿಸ್ತಾನದಲ್ಲಿ ನಕಲಿ ನೋಟುಗಳ ಮುದ್ರಣ ಮಾಡಲಾಗುತ್ತದೆ. ಅವುಗಳನ್ನು ಬಾಂಗ್ಲಾಕ್ಕೆ ರವಾನಿಸಿ ಅಲ್ಲಿಂದ ಪಶ್ಚಿಮ ಬಂಗಾಲದ ಮಾಲ್ಡಾ ಮತ್ತು ಫರಕ್ಕಾ ಮೂಲಕ ಭಾರತದೊಳಕ್ಕೆ ತಂದು ದೇಶದ ವಿವಿಧೆಡೆ ಸರಬರಾಜು ಮಾಡುತ್ತಿದೆ ಎಂಬುದು ಎನ್‌ಐಎ ಆರೋಪ.

ರಾಜ್ಯದಲ್ಲಿ ಬೆಂಗಳೂರು, ಬೆಳಗಾವಿ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ನಕಲಿ ನೋಟುಗಳ ಚಲಾವಣೆಯ ವ್ಯವಸ್ಥಿತ ಜಾಲವಿದೆ. ಸಜ್ಜಾದ್ ಈತನಕ ರಾಜ್ಯದಲ್ಲಿ ಅಂದಾಜು 22 ಲಕ್ಷ ಮೊತ್ತದ ನಕಲಿ ನೋಟುಗಳನು ಚಲಾವಣೆ ಮಾಡಿರುವ ಆರೋಪವಿದೆ ಎನ್ನುತ್ತಾರೆ ವಕೀಲ ಪಿ.ಪ್ರಸನ್ನಕುಮಾರ್.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X