ಮಂಗಳೂರು ವಿಮಾನ ನಿಲ್ದಾಣದಲ್ಲಿ ವಿದೇಶಿ ಕರೆನ್ಸಿ ವಶ
ಮಂಗಳೂರು, ಫೆ.10: ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ 7.65 ಲಕ್ಷ ರೂ. ಮೌಲ್ಯದ ವಿದೇಶಿ ಕರೆನ್ಸಿಗಳನ್ನು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ರವಿವಾರ ಪತ್ತೆ ಮಾಡಿದ್ದಾರೆ.
ದುಬೈಗೆ ಪ್ರಯಾಣ ಬೆಳೆಸಲು ಬಂದಿದ್ದ ಪ್ರಯಾಣಿಕರೊಬ್ಬರು ಲಗೇಜು ಪರಿಶೀಲನೆ ನಡೆಸುತ್ತಿದ್ದಾಗ ಅವರ ಬ್ಯಾಗ್‌ನಲ್ಲಿ 7.65 ಲಕ್ಷ ರೂ. ಮೌಲ್ಯದ ವಿದೇಶಿ ಕರೆನ್ಸಿ ಪತ್ತೆಯಾಗಿದೆ. ಯುಎಸ್ ಡಾಲರ್, ಯುರೋ, ದಿರಾಮ್ಸ್ ನೋಟುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Next Story





