ಪ್ರತ್ಯೇಕ ಪ್ರಕರಣದಡಿ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
ಬಂಟ್ವಾಳ, ಫೆ. 10: ಪ್ರತ್ಯೇಕ ಪ್ರಕರಣಗಳಿಗೆ ಸಂಬಂಧಿಸಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಟ್ವಾಳ ನಗರ ಠಾಣಾ ಪೊಲೀಸರು ಬಂಧಿಸಿ, ನ್ಯಾಯಾಲಕ್ಕೆ ಹಾಜರುಪಡಿಸಿದ್ದಾರೆ.
ಇಕ್ಬಾಲ್ ಯಾನೆ ಮಟನ್ ಇಕ್ಬಾಲ್ ಬಂಧಿತ ಆರೋಪಿ. ಈತ ಮಾರಣಾಂತಿಕ ಹಲ್ಲೆ, ದೊಂಬಿ, ಸರಕಾರದ ಕೆಲಸಕ್ಕೆ ಅಡ್ಡಿ ಸಹಿತ ಇತರ ಪ್ರಕರಣಗಳಿಗೆ ಸಂಬಂಧಿಸಿದಂತೆ ನ್ಯಾಯಾಲಯದಿಂದ ಜಾಮೀನಿನಲ್ಲಿ ಬಿಡುಗಡೆಗೊಂಡಿದ್ದರು. ನಂತರ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದು, ಈ ಬಗ್ಗೆ ಖಚಿತ ಮಾಹಿತಿಯ ಮೇರೆಗೆ ಬಿಮೂಡ ಗ್ರಾಮದ ಪರ್ಲಿಯಾ ಎಂಬಲ್ಲಿ ಆರೋಪಿತನನ್ನು ವಶಕ್ಕೆ ಪಡೆದು, ನ್ಯಾಯಾಲಯಕ್ಕೆ ಹಾಜರು ಪಡಿಸಿ ನ್ಯಾಯಾಂಗ ಬಂಧನ ವಿಧಿಸಿಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Next Story





