Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. 'ಸಮುದಾಯದ ಸಾಧಕರಿಂದ ಸಮಾಜಕ್ಕೆ ಗೌರವ' :...

'ಸಮುದಾಯದ ಸಾಧಕರಿಂದ ಸಮಾಜಕ್ಕೆ ಗೌರವ' : ಪ್ರೊ.ಭಾಸ್ಕರ ರೈ ಕುಕ್ಕುವಳ್ಳಿ

ನಾಸಿಕ್ ಬಂಟರ ಸಂಘದ 13ನೇ ವಾರ್ಷಿಕೋತ್ಸವ

ವಾರ್ತಾಭಾರತಿವಾರ್ತಾಭಾರತಿ10 Feb 2019 11:26 PM IST
share
ಸಮುದಾಯದ ಸಾಧಕರಿಂದ ಸಮಾಜಕ್ಕೆ ಗೌರವ : ಪ್ರೊ.ಭಾಸ್ಕರ ರೈ ಕುಕ್ಕುವಳ್ಳಿ

ಮಂಗಳೂರು, ಫೆ. 10: 'ವ್ಯಕ್ತಿಯೊಬ್ಬ ಸತತ ಪರಿಶ್ರಮದಿಂದ ಎಷ್ಟೇ ಸಂಪತ್ತು, ಸ್ಥಾನ-ಮಾನ,ಕೀರ್ತಿ ಸಂಪಾದಿಸಿದರೂ ಅದರಿಂದ ವೈಯಕ್ತಿಕ ಏಳ್ಗೆ ಸಾಧ್ಯ; ಹೊರತು ಸಮಾಜಕ್ಕೆ ದೊಡ್ಡ ಲಾಭವಾಗದು. ಆದರೆ ನಿಸ್ವಾರ್ಥ ಭಾವದಿಂದ ತನ್ನ ಸಮುದಾಯದ ಅಭಿವೃದ್ಧಿಗೆ ಕಿಂಚಿತ್ತಾದರೂ ದುಡಿದಾಗ ಆತ ಜನರಿಂದ  ಗುರುತಿಸಲ್ಪಡುತ್ತಾನೆ. ಅಂತಹ ಸಾಧಕರಿಂದ ಸಮಾಜಕ್ಕೆ ಗೌರವ ಪ್ರಾಪ್ತವಾಗುವುದು' ಎಂದು ವೀರರಾಣಿ ಅಬ್ಬಕ್ಕ ರಾಷ್ಟ್ರೀಯ ಪ್ರತಿಷ್ಠಾನದ ಪ್ರಧಾನ ಕಾರ್ಯದರ್ಶಿ, ಲೇಖಕ ಪ್ರೊ.ಭಾಸ್ಕರ ರೈ ಕುಕ್ಕುವಳ್ಳಿ ಹೇಳಿದ್ದಾರೆ.

ನಗರದ ಶಾಲಿಮಾರ್ ಸಾಲ್ಖೇಡ್ಕರ್ ನಾಟ್ಯ ಮಂದಿರದಲ್ಲಿ ಇತ್ತೀಚೆಗೆ ಜರಗಿದ ನಾಸಿಕ್ ಬಂಟರ ಸಂಘದ13 ನೇ ವಾರ್ಷಿಕೋತ್ಸವದಲ್ಲಿ ಪ್ರಧಾನ ಅತಿಥಿಯಾಗಿ ಅವರು ಮಾತನಾಡಿದರು.

' ತವರೂರಿಂದ ಬರಿಗೈಯಲ್ಲಿ ಹೋದ ಮಂದಿ ಹೊರನಾಡಲ್ಲಿ ಹೊಟ್ಟೆ ಪಾಡಿಗಾಗಿ ದುಡಿದು ತಮ್ಮ ಸಂಪಾದನೆಯ ಒಂದು ಭಾಗವನ್ನು ತಾಯ್ನಾಡಿನ ಸಂಸ್ಕೃತಿಯ ಪ್ರಸರಣಕ್ಕಾಗಿ ವಿನಿಯೋಗಿಸುತ್ತಿರುವುದು ಶ್ಲಾಘನೀಯ. ತಾವು ಹೋದಲ್ಲೆಲ್ಲಾ ಸಂಘಟನೆಗಳ ಮೂಲಕ ತಮ್ಮ ಮೂಲ ನೆಲೆಗಳನ್ನು ಗಟ್ಟಿಗೊಳಿಸಿ ಒಗ್ಗಟ್ಟಿನಿಂದ ಬಾಳುವ ಬಂಟ ಬಂಧುಗಳು ಇತರರಿಗೆ ಮಾದರಿಯಾಗಿದ್ದಾರೆ' ಎಂದವರು ನುಡಿದರು.

ಶಾಶ್ವತ ಯೋಜನೆ ರೂಪಿಸಿ

ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಪುಣೆ ಬಂಟರ ಸಂಘದ ಅಧ್ಯಕ್ಷ ಇನ್ನ ಕುರ್ಕಿಲಬೆಟ್ಟು ಸಂತೋಷ್ ಶೆಟ್ಟಿ ಅವರು ' ಸಂಘ ಸಂಸ್ಥೆಗಳು ಕೇವಲ ಉತ್ಸವಾಚರಣೆಗಳಿಂದ ತೃಪ್ತಿ ಪಟ್ಟುಕೊಂಡರೆ ಸಾಲದು. ಎಲ್ಲರೂ ಒಂದೇ ಮನಸ್ಸಿನಿಂದ ದುಡಿದು ತಮ್ಮವರ ಸಾಮಾಜಿಕ ಹಾಗೂ ಶೈಕ್ಷಣಿಕ ಪ್ರಗತಿಗೆ ಬೇಕಾದ ಶಾಶ್ವತ ಯೋಜನೆಗಳನ್ನು ರೂಪಿಸಬೇಕು' ಎಂದರು. ವರ್ಷದ ಹಿಂದೆ ಪುಣೆ ಬಂಟರ ಭವನ ನಿರ್ಮಾಣವಾದ ಬಗ್ಗೆ ತಮ್ಮ ಸ್ವಾನುಭವವನ್ನು ಅವರು ವಿವರಿಸಿದರು. ನಾಸಿಕ್ ಬಂಟರ ಸಂಘದ ಅಧ್ಯಕ್ಷ ಇ.ಭಾಸ್ಕರ ಶೆಟ್ಟಿ ಸಭೆಯ ಅಧ್ಯಕ್ಷತೆ ವಹಿಸಿದ್ದರು.

ಸಮ್ಮಾನ

ಇದೇ ಸಂದರ್ಭದಲ್ಲಿ ಅತಿಥಿಗಳಾದ ಪ್ರೊ.ಭಾಸ್ಕರ ರೈ ಕುಕ್ಕುವಳ್ಳಿ ಮತ್ತು ಸಂತೋಷ್ ಶೆಟ್ಟಿ ಅವರನ್ನು ಸಂಘದ ವತಿಯಿಂದ ಸನ್ಮಾನಿಸಲಾಯಿತು. ರವಿರಾಜ ಶೆಟ್ಟಿ ಮತ್ತು ಲಾವಣ್ಯ ಶೆಟ್ಟಿ ಅಭಿನಂದನಾ ಪತ್ರ ವಾಚಿಸಿದರು. ಸಂಘದ ಸ್ಥಾಪಕಾಧ್ಯಕ್ಷ  ಲಿಂಗಪ್ಪ ಶೆಟ್ಟಿ, ಪೂರ್ವಾಧ್ಯಕ್ಷರುಗಳಾದ ರಾಜ ಗೋಪಾಲ್ ಶೆಟ್ಟಿ, ಕರುಣಾಕರ ಶೆಟ್ಟಿ, ಮಹಿಳಾ ವಿಭಾಗದ ಅಧ್ಯಕ್ಷೆ ಪ್ರೇಮಾ ಜೆ.ಶೆಟ್ಟಿ ಉಪಸ್ಥಿತರಿದ್ದರು.

ಬಂಟರ ಸಂಘದ ಅಧ್ಯಕ್ಷ ಭಾಸ್ಕರ ಶೆಟ್ಟಿ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ಅಶಿತ್ ಶೆಟ್ಟಿ ಪ್ರಸ್ತಾವನೆಗೈದು ವಂದಿಸಿದರು. ಪ್ರದೀಪ್ ರೈ ಮತ್ತು ಸುಚಿತ್ರ ರೈ  ನಿರೂಪಿಸಿದರು. ಪ್ರತಿ ರೈ, ಪ್ರಭಾ ಆರ್.ಶೆಟ್ಟಿ, ಅಮಿತ್ ಶೆಟ್ಟಿ ಸಹಕರಿಸಿದರು.

ಸಾಂಸ್ಕೃತಿಕ ವೈವಿಧ್ಯ

ಸಾಂಸ್ಕೃತಿಕ ಕಾರ್ಯಕ್ರಮಗಳ ಅಂಗವಾಗಿ ಶ್ರೀಕಟೀಲು ತಂಡ, ಕುಶಿ ಡಿ.ಶೆಟ್ಟಿ, ಹರ್ಷಿತ ಆಳ್ವ, ರಕ್ಷಾ ಶೆಟ್ಟಿ ಮತ್ತು ಬಳಗದಿಂದ ವೈವಿಧ್ಯಮಯ ನೃತ್ಯ ಪ್ರದರ್ಶನವಿತ್ತು. ಅಲ್ಲದೆ ಐರೋಲಿ ತುಳುಕೂಟದವರಿಂದ 'ಭೂತಾಳಪಾಂಡ್ಯ' ನಾಟಕ ಹಾಗೂ ನಟಸಾಮ್ರಾಟ್ ನಾಸಿಕ್ ತಂಡದಿಂದ ಪುಣ್ಯಕೋಟಿ ಕಥೆಯನ್ನಾಧರಿಸಿದ 'ಸತ್ಯಮೇವ ಜಯತೇ' ಯಕ್ಷಗಾನ ಜರಗಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X