Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. 'ಜನಪದ ಸಂಸ್ಕೃತಿಯ ನಂಟು...

'ಜನಪದ ಸಂಸ್ಕೃತಿಯ ನಂಟು ಕಡಿದುಕೊಳ್ಳುತ್ತಿರುವ ಭಾರತೀಯರು'

‘ಸಾಹಿತ್ಯ ಮತ್ತು ಪರಿಸರ’ ಕುರಿತ ವಿಚಾರ ಸಂಕಿರಣದಲ್ಲಿ ಡಾ.ಚಂದ್ರಶೇಖರ ಕಂಬಾರ

ವಾರ್ತಾಭಾರತಿವಾರ್ತಾಭಾರತಿ11 Feb 2019 11:02 PM IST
share
ಜನಪದ ಸಂಸ್ಕೃತಿಯ ನಂಟು ಕಡಿದುಕೊಳ್ಳುತ್ತಿರುವ ಭಾರತೀಯರು

ಮಂಗಳೂರು, ಫೆ.11: ನಮ್ಮ ಪೂರ್ವಜರು ಸಾವಿರಾರು ವರ್ಷಗಳಿಂದ ಇತಿಹಾಸದ ಜೊತೆ ನಂಟು ಬೆಸೆದುಕೊಂಡು ಬದುಕಿದ್ದರು. ಭಾರತದಲ್ಲಿ ಆಂಗ್ಲರು ಅನುಷ್ಠಾನಗೊಳಿಸಿದ ಇಂಗ್ಲಿಷ್ ಶಿಕ್ಷಣ ಪದ್ಧತಿಯು ಭಾರತೀಯರನ್ನು ಇತಿಹಾಸದಿಂದ ಬೇರ್ಪಡಿಸಿದಂತಾಗಿದೆ. ಪರಿಣಾಮವಾಗಿ ಭಾರತೀಯರು ಜನಪದ ಸಂಸ್ಕೃತಿಯ ನಂಟನ್ನೂ ಕಡಿದುಕೊಳ್ಳುತ್ತಿದ್ದಾರೆ ಎಂದು ಕೇಂದ್ರ ಸಾಹಿತ್ಯ ಅಕಾಡಮಿ ಅಧ್ಯಕ್ಷ ಡಾ.ಚಂದ್ರಶೇಖರ ಕಂಬಾರ ಹೇಳಿದರು.

ನಗರದ ಸಂತ ಅಲೋಶಿಯಸ್ ಕಾಲೇಜಿನ ಇಂಗ್ಲಿಷ್ ಮತ್ತು ಕನ್ನಡ ವಿಭಾಗಗಳ ಸಹಯೋಗದಲ್ಲಿ ಸೋಮವಾರ ಆರಂಭವಾದ ‘ಸಾಹಿತ್ಯ ಮತ್ತು ಪರಿಸರ’ ಕುರಿತ ಎರಡು ದಿನಗಳ ವಿಚಾರ ಸಂಕಿರಣ ಉದ್ಘಾಟಿಸಿ ಅವರು ಮಾತನಾಡಿದರು.

ಭಾರತೀಯರು ಎಲ್ಲ ಕ್ಷೇತ್ರಗಳಲ್ಲೂ ಪರಿಸರವನ್ನು ಕೇಂದ್ರವಾಗಿ ಇಟ್ಟುಕೊಂಡು ಚಿಂತನೆ ನಡೆಸುತ್ತಿದ್ದರು. ಆದರೆ, ಇಂಗ್ಲಿಷ್ ಶಿಕ್ಷಣ ಭಾರತೀಯರಿಗೆ ಪ್ರಶ್ನಿಸುವುದನ್ನು ಮರೆಸಿದೆ. ಕೃಷಿಯ ಬಗೆಗಿನ ಜ್ಞಾನವೂ ಅರಿಸ್ಟಾಟಲ್‌ನಿಂದಲೇ ಆರಂಭವಾಯಿತು ಎಂಬ ನಂಬಿಕೆ ಬೆಳೆದಿದೆ. ಪೂರ್ವಜರು ಕಟ್ಟಿಕೊಟ್ಟ ಅಗಾಧ ಜ್ಞಾನಕ್ಕೆ ಬೆಲೆಯೇ ಇಲ್ಲದಂತಹ ಸ್ಥಿತಿ ನಿರ್ಮಾಣವಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಸಂತ ಅಲೋಶಿಯಸ್ ಕಾಲೇಜಿನ ಪ್ರಾಂಶುಪಾಲ ಡಾ.ಪ್ರವೀಣ್ ಮಾರ್ಟಿಸ್ ಮಾತನಾಡಿ, ಪರಿಸರ ಮತ್ತು ಸಾಮಾಜಿಕ ನ್ಯಾಯದಂತಹ ವಿಚಾರಗಳ ಬಗ್ಗೆ ಜಾಗೃತಿ ಮೂಡಿಸುವುದು ಶಿಕ್ಷಣ ಸಂಸ್ಥೆಗಳ ಕರ್ತವ್ಯವಾಗಿದೆ. ಪರಿಸರ ಎಂದಿಗೂ ವಿಶ್ರಮಿಸುವುದಿಲ್ಲ; ಮನುಷ್ಯ ಜೀವಿಯಂತೆ ಒಬ್ಬಂಟಿ ಎಂದು ಭಾವಿಸುವುದಿಲ್ಲ. ಅಭಿವೃದ್ಧಿಯ ಹೆಸರಿನಲ್ಲಿ ಪರಿಸರದ ಮೇಲಾಗುತ್ತಿರುವ ದಾಳಿಗಳು ಅತಿಯಾಗುತ್ತಿರುವುದು ಆತಂಕಕಾರಿ ವಿಷಯ ಎಂದು ಹೇಳಿದರು.

ಅಲೋಶಿಯಸ್ ಸಮೂಹ ಸಂಸ್ಥೆಗಳ ನಿರ್ದೇಶಕ ಡಯನಿಷಿಯಸ್ ವಾಜ್ ಮಾತನಾಡಿದರು. ಹೈದರಾಬಾದ್ ವಿಶ್ವವಿದ್ಯಾಲಯದ ಇಂಗ್ಲಿಷ್ ಪ್ರಾಧ್ಯಾಪಕ ಪ್ರೊ.ಪ್ರಮೋದ್ ಕೆ.ನಾಯರ್ ದಿಕ್ಸೂಚಿ ಭಾಷಣ ಮಾಡಿದರು. ಸಂತ ಅಲೋಶಿಯಸ್ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥೆ ಡಾ.ಸರಸ್ವತಿ ಅವರ ‘ಅಮೃತ ಘಳಿಗೆ’ ನಾಟಕ ಕೃತಿಯನ್ನು ಚಂದ್ರಶೇಖರ ಕಂಬಾರ ಲೋಕಾರ್ಪಣೆಗೊಳಿಸಿದರು. ಕಾಲೇಜಿನ ಇಂಗ್ಲಿಷ್ ವಿಭಾಗದ ಮುಖ್ಯಸ್ಥ ಡಾ.ಮೆಲಿಸಾ ಎಂ. ಗೋವಿಯಸ್ ಮತ್ತು ವಿಚಾರ ಸಂಕಿರಣದ ಸಂಯೋಜಕ ಎನ್.ಗಿರೀಶ್ ಉಪಸ್ಥಿತರಿದ್ದರು.

ಅಲೋಶಿಯಸ್ ಸಾಹಿತ್ಯ ಹಬ್ಬದ ಪ್ರಯುಕ್ತ ನಾಟಕಕಾರ, ಕವಿ, ರಂಗ ನಿರ್ದೇಶಕ ರಘುನಂದನ ನೇತೃತ್ವದಲ್ಲಿ ಬುಧವಾರದಿಂದ ಶುಕ್ರವಾರದವರೆಗೆ ರಂಗಭೂಮಿ ಮತ್ತು ಕಲೆಗೆ ಸಂಬಂಧಿಸಿದ ಕಾರ್ಯಾಗಾರವನ್ನೂ ಹಮ್ಮಿಕೊಳ್ಳಲಾಗಿದೆ. ವ್ಯಂಗ್ಯಚಿತ್ರಕಾರ ಸತೀಶ್ ಆಚಾರ್ಯ ಅವರಿಂದ ಶನಿವಾರ ಸಂಪಾದಕೀಯ ವ್ಯಂಗ್ಯಚಿತ್ರಗಳ ರಚನೆ ಕುರಿತು ಕಾರ್ಯಾಗಾರ ನಡೆಯಲಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X