Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಇಸ್ಲಾಮ್ ಬಗ್ಗೆ ‘ಸತ್ಯ ಮನ ಮನೆಗೆ’...

ಇಸ್ಲಾಮ್ ಬಗ್ಗೆ ‘ಸತ್ಯ ಮನ ಮನೆಗೆ’ ಅಭಿಯಾನ: ಯಾಸೀನ್ ಮಲ್ಪೆ

ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟದಿಂದ ಗಣ್ಯರ ಸಮಾವೇಶ

ವಾರ್ತಾಭಾರತಿವಾರ್ತಾಭಾರತಿ12 Feb 2019 8:33 PM IST
share
ಇಸ್ಲಾಮ್ ಬಗ್ಗೆ ‘ಸತ್ಯ ಮನ ಮನೆಗೆ’ ಅಭಿಯಾನ: ಯಾಸೀನ್ ಮಲ್ಪೆ

ಬ್ರಹ್ಮಾವರ, ಫೆ.12: ಇಸ್ಲಾಮ್ ಹಾಗೂ ಮುಸ್ಲಿಮರ ಕುರಿತ ಅಪ್ರಪಚಾರದ ವಿರುದ್ಧ ಸತ್ಯವನ್ನು ತಲುಪಿಸುವ ನಿಟ್ಟಿನಲ್ಲಿ ‘ಸತ್ಯ ಮನ ಮನೆಗೆ’ ಎಂಬ ಅಭಿಯಾನವನ್ನು ನಡೆಸಲು ಉದ್ದೇಶಿಸಲಾಗಿದೆ ಎಂದು ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟದ ಅಧ್ಯಕ್ಷ ಯಾಸೀನ್ ಮಲ್ಪೆ ತಿಳಿಸಿದ್ದಾರೆ.

ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟದ ವತಿಯಿಂದ ಮಂಗಳವಾರ ಬ್ರಹ್ಮಾವರ ಧರ್ಮಾವರ ಆಡಿಟೋರಿಯಂನಲ್ಲಿ ಆಯೋಜಿಸಲಾದ ಗಣ್ಯರ ಸಮಾವೇಶದಲ್ಲಿ ಅವರು ವಿಷಯ ಮಂಡನೆ ಮಾಡಿದರು. ಈ ಬಗ್ಗೆ ಮಸೀದಿ ಅಧ್ಯಕ್ಷರು, ಖತೀಬರು ಹೆಚ್ಚಿನ ಆಸಕ್ತಿ ವಹಿಸಬೇಕು. ಜಿಲ್ಲೆಯ ಸುಮಾರು 100 ಮಸೀದಿಗಳ ತಲಾ 5 ಮಂದಿಯ ತಂಡವನ್ನು ರಚಿಸಿ ಸುಮಾರು ಒಂದು ಲಕ್ಷ ಮಂದಿಯನ್ನು ತಲುಪುವ ಗುರಿ ಹೊಂದಲಾಗಿದೆ ಎಂದರು.

ರಾಜ್ಯದಲ್ಲಿ ಜಿಲ್ಲಾಡಳಿತದ ವತಿಯಿಂದ ಮೂರು ತಿಂಗಳಿಗೊಮ್ಮೆ ಮುಸ್ಲಿಮ್ ಸಮುದಾಯದ ಕುಂದು ಕೊರತೆ ಸಭೆಯನ್ನು ನಡೆಸಬೇಕು ಮತ್ತು ಮಸೀದಿ ಮತ್ತು ಮದ್ರಸ ನಿರ್ಮಾಣಕ್ಕೆ ಇರುವ ಕಠಿಣ ಕಾನೂನುಗಳನ್ನು ಸರಳೀಕರಣ ಗೊಳಿಸಬೇಕೆಂದು ಒತ್ತಾಯಿಸಿ ಒಕ್ಕೂಟದ ನಿಯೋಗವು ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡಿ ಮನವಿ ಸಲ್ಲಿಸಲಾಗುವುದು ಎಂದು ಅವರು ಹೇಳಿದರು.

ಸಮಾವೇಶವನ್ನು ಕುದ್ರೋಳಿ ಜಾಮೀಯ ಮಸೀದಿಯ ಖತೀಬ್ ಮುಫ್ತಿ ಅಬ್ದುಲ್ ಮನ್ನಾನ್ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಒಕ್ಕೂಟದ ಹಿರಿಯ ಉಪಾಧ್ಯಕ್ಷ ಹಾಜಿ ಅಬ್ದುಲ್ಲಾ ಪರ್ಕಳ ಒಕ್ಕೂಟದ ವಾರ್ಷಿಕ ವಾರ್ತಾ ಸಂಚಯವನ್ನು ಬಿಡುಗಡೆಗೊಳಿಸಿದರು. ಬೆಂಗಳೂರಿನ ಡಾ. ತಾಹಾ ಮತೀನ್ ಸಮಾ ರೋಪ ಭಾಷಣ ಮಾಡಿದರು.

ಮುಸ್ಲಿಮ್ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ, ಮಾಜಿ ಮೇಯರ್ ಅಶ್ರಫ್ ಮಂಗಳೂರು, ಯುನಿವೆಫ್ ಅಧ್ಯಕ್ಷ ರಫೀಯುದ್ದೀನ್ ಕುದ್ರೋಳಿ, ಉದ್ಯಮಿ ಜಲೀಲ್ ಸಾಹೇಬ್ ಉದ್ಯಾವರ, ವಕ್ಫ್ ಸಲಹಾ ಮಂಡಳಿಯ ಜಿಲ್ಲಾಧ್ಯಕ್ಷ ಇಬ್ರಾಹಿಂ ಮಟಪಾಡಿ, ಮೌಲಾನ ಉಬೇದುಲ್ಲಾ ನದ್ವಿ, ಮಂಗಳೂರು ಐಲ್ಯಾಂಡ್ ಇಸ್ಲಾಮಿಕ್ ಫೌಂಡೇಶನ್‌ನ ಇರ್ಫಾನ್ ಭಾಗವಹಿಸಿದ್ದರು.

ಭಟ್ಕಳದ ಅಂಜುಮಾನ್ ಹಮಿ ಎ ಮುಸ್ಲಿಮೀನ್ ಇದರ ಪ್ರಾದೇಶಿಕ ಕಾರ್ಯದರ್ಶಿ ಇಸಾಕ್ ಶಾಬಂದ್ರಿ, ಮಜ್ಲೀಸ್ ಇ ಇಸ್ಲಾಹೊ ತಂಜ್ಲೀಮ್‌ನ ಕಾರ್ಯದರ್ಶಿ ಮೌಲಾನ ಯಾಸೀರ್ ನದ್ವಿ, ಉತ್ತರ ಕನ್ನಡ ಮುಸ್ಲಿಮ್ ಯುನೈಟೆಡ್ ಫಾರಂನ ಪ್ರಧಾನ ಕಾರ್ಯದರ್ಶಿ ಮೌಸೀನ್ ಕಾಝಿ, ತೀರ್ಥ ಹಳ್ಳಿ ಮುಸ್ಲಿಮ್ ಒಕ್ಕೂಟದ ಅಧ್ಯಕ್ಷ ಸುಲೈಮಾನ್ ಸಾಹೇಬ್ ಹಾಗೂ ಉಡುಪಿ ಜಿಲ್ಲೆಯ ಮಸೀದಿಗಳ ಖತೀಬರು, ಅಧ್ಯಕ್ಷರು, ಸಮುದಾಯದ ಸಂಘ ಸಂಸ್ಥೆಗಳ ಅಧ್ಯಕ್ಷರು, ಗಣ್ಯ ವ್ಯಕ್ತಿಗಳು ಉಪಸ್ಥಿತರಿದ್ದರು.

ಕುಂಜಾಲು ನೂರು ಮಸೀದಿಯ ಖತೀಬ್ ಮೌಲಾನ ಮುಹಮ್ಮದ್ ಶಫೀಕ್ ನಿಝಾಮಿ ಕುರ್ ಆನ್ ಪಠಿಸಿದರು. ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಮೌಲಾ ಪ್ರಾಸ್ತಾವಿಕವಾಗಿ ಮಾತನಾಡಿದರು. ಮಾಜಿ ಪ್ರಧಾನ ಕಾರ್ಯದರ್ಶಿ ಹುಸೈನ್ ಕೋಡಿಬೆಂಗ್ರೆ ಜಿಲ್ಲಾ ಪದಾಧಿಕಾರಿಗಳನ್ನು ಹಾಗೂ ಆಯಾ ತಾಲೂಕಿನ ಅಧ್ಯಕ್ಷರು ತಾಲೂಕು ಪದಾಧಿಕಾರಿಗಳನ್ನು ಪರಿಚಯ ಮಾಡಿದರು. ಇಕ್ಬಾಲ್ ಶಂಸುದ್ದೀನ್ ಕಟಪಾಡಿ ವಂದಿಸಿದರು. ಅನ್ವರ್ ಅಲಿ ಕಾಪು ಕಾರ್ಯಕ್ರಮ ನಿರೂಪಿಸಿದರು.

ಮಸೀದಿಗಳು ಸಮುದಾಯದ ಕೇಂದ್ರಗಳಾಗಲಿ

ಮಸೀದಿಗಳು ಕೇವಲ ನಮಾಝಿಗೆ ಸೀಮಿತವಾಗಿರದೆ ಸಾಮಾಜಿಕ ಕಾರ್ಯ ಕ್ರಮಗಳನ್ನು ನಡೆಸುವ ಸಮುದಾಯದ ಕೇಂದ್ರಗಳಾಗಬೇಕು. ಈ ನಿಟ್ಟಿನಲ್ಲಿ ಒಕ್ಕೂಟವು ಜಿಲ್ಲೆಯ ಆರು ತಾಲೂಕಿನಿಂದ ತಲಾ ಆರರಂತೆ ಒಟ್ಟು 30 ಮಸೀದಿಗಳನ್ನು ಆಯ್ಕೆ ಮಾಡಲಿದ್ದು, ಒಕ್ಕೂಟದ ತಂಡ ಈ ಮಸೀದಿಗಳಿಗೆ ಭೇಟಿ ನೀಡಿ ಸಮುದಾಯದ ಶೈಕ್ಷಣಿಕ, ಸಾಮಾಜಿಕ, ಆರ್ಥಿಕ ಅಬ್ಯುದಯಕ್ಕಾಗಿ ಬೇಕಾದ ಕಾರ್ಯಕ್ರಮಗಳನ್ನು ನಡೆಸುವ ಕುರಿತು ಮಾಹಿತಿಗಳನ್ನು ನೀಡಲಿದೆ ಎಂದು ಒಕ್ಕೂಟದ ಜಿಲ್ಲಾಧ್ಯಕ್ಷ ಯಾಸೀನ್ ಮಲ್ಪೆ ತಿಳಿಸಿದರು.

ಮಸೀದಿಗಳು ತಮ್ಮ ಜಮಾಅತ್ ವ್ಯಾಪ್ತಿಯಲ್ಲಿರುವ ಬಡವರು, ವಿಧವೆ ಯರು, ಪದವೀಧರರು, ನಿರುದ್ಯೋಗಿಗಳು ಸೇರಿದಂತೆ ವಿವಿಧ ವರ್ಗಗಳ ಜನರ ಬಗ್ಗೆ ಡಾಟಾ ಸಂಗ್ರಹಿಸಿ ಇಡುವ ನಿಟ್ಟಿನಲ್ಲಿ ಒಕ್ಕೂಟದಿಂದ ಅರ್ಜಿ ಫಾರಂ ಗಳನ್ನು ಒದಗಿಸಲಾಗುವುದು. ಮುಂದೆ ಸಮುದಾಯವನ್ನು ರಾಜಕೀಯವಾಗಿ ಪ್ರಬಲಗೊಳಿಸಲು ಸಮಾವೇಶಗಳನ್ನು ನಡೆಸಲು ಉದ್ದೇಶಿಸಲಾಗಿದೆ. ಮತ ದಾರರ ಪಟ್ಟಿಯಲ್ಲಿ ಇಲ್ಲದವರ ಹಾಗೂ ಹೊಸಬರ ಹೆಸರು ಸೇರ್ಪಡೆಗೆ ಮಸೀದಿಗಳು ುುತುವರ್ಜಿ ವಹಿಸಬೇಕು ಎಂದರು.

ಫೆ.15ರಂದು ಬಾನುಲಿ ರೈತ ದಿನಾಚರಣೆ
ಶಿರ್ವ, ಫೆ.12: ಪ್ರಸಾರ ಭಾರತಿ, ಭಾರತೀಯ ಸಾರ್ವಜನಿಕ ಪ್ರಸಾರ ಸೇವೆ, ಆಕಾಶವಾಣಿ ಮಂಗಳೂರು ಹಾಗೂ ರೋಟರಿ ಕ್ಲಬ್ ಶಿರ್ವ, ಉಡುಪಿ ಜಿಲ್ಲಾ ಕೃಷಿಕ ಸಂಘಗಳ ಸಹಭಾಗಿತ್ವದಲ್ಲಿ ಬಾನುಲಿ ರೈತ ದಿನಾಚರಣೆಯನ್ನು ಫೆ.15 ರಂದು ಪೂರ್ವಾಹ್ನ 9:30ಕ್ಕೆ ಬಂಟಕಲ್ಲು ಶಿವ ರ್ ರೋಟರಿ ಸಭಾಂಗಣದಲ್ಲಿ ಜರಗಲಿದೆ.
 ಕಾರ್ಯಕ್ರಮವನ್ನು ಉಡುಪಿ ಜಿಲ್ಲಾ ಜಂಟಿ ಕೃಷಿ ನಿರ್ದೇಶಕ ಡಾ.ಎಚ್. ಕೆಂಪೇಗೌಡ ಉದ್ಘಾಟಿಸಲಿದ್ದು, ಅಧ್ಯಕ್ಷತೆಯನ್ನು ಶಿರ್ವ ರೋಟರಿ ಅಧ್ಯಕ್ಷ ದಯಾನಂದ ಕೆ.ಶೆಟ್ಟಿ ವಹಿಸಲಿರುವರು. ಮಂಗಳೂರು ಸಾವಯವ ಕೃಷಿಕ ಗ್ರಾಹಕ ಬಳಗದ ಅಧ್ಯಕ್ಷ ಅಡ್ಡೂರು ಕೃಷ್ಣ ರಾವ್ ದಿಕ್ಸೂಚಿ ಬಾಷಣ ಮಾಡಲಿರು ವರು ಎಂದು ಸ್ಥಳೀಯ ಕಾರ್ಯಕ್ರಮ ಸಂಯೋಜಕ ರಾಘವೇಂದ್ರ ನಾಯಕ್ ಶಿರ್ವ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X