Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಜಿಲ್ಲೆಯ ದಮನಿತ ಮಹಿಳೆಯರಿಗೆ ಸಲಹಾ...

ಜಿಲ್ಲೆಯ ದಮನಿತ ಮಹಿಳೆಯರಿಗೆ ಸಲಹಾ ಸಮಿತಿ/ಕೋಶ ರಚನೆ: ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ

ವಾರ್ತಾಭಾರತಿವಾರ್ತಾಭಾರತಿ12 Feb 2019 9:07 PM IST
share
ಜಿಲ್ಲೆಯ ದಮನಿತ ಮಹಿಳೆಯರಿಗೆ ಸಲಹಾ ಸಮಿತಿ/ಕೋಶ ರಚನೆ: ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ

ಉಡುಪಿ, ಫೆ.12: ಜಿಲ್ಲೆಯ ಲೈಂಗಿಕ ಕಾರ್ಯಕರ್ತೆಯರ (ದಮನಿತ ಮಹಿಳೆ ಯರ) ಜೀವನಮಟ್ಟ ಸುಧಾರಿಸಲು ಮತ್ತು ಅವರ ನಿಸ್ಸಾಹಾಯಕತೆಯನ್ನು ಹೋಗಲಾಡಿಸಿ ಜೀವನಮಟ್ಟ ಸುಧಾರಿಸಲು ಹಾಗೂ ಪುರ್ನವಸತಿ ಕಾರ್ಯಕ್ರಮಗಳನ್ನು, ಯೋಜನೆಗಳನ್ನು ಅನುಷ್ಠಾನಗೊಳಸಲು ಜಿಲ್ಲಾ ಮಟ್ಟದ ಸಲಹಾ ಸಮಿತಿ/ಕೋಶ ರಚಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ತಿಳಿಸಿದ್ದಾರೆ.

ಮಂಗಳವಾರ ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಲೈಂಗಿಕ ಕಾರ್ಯಕರ್ತೆಯರ ಅಧ್ಯಯನ ಸಮಿತಿ ಸಲ್ಲಿಸಿರುವ ಶಿಪಾರಸ್ಸುಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಜಿಲ್ಲಾಮಟ್ಟದ ಸಲಹಾ ಸಮಿತಿ/ಕೋಶ ರಚಿಸುವ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ಪ್ರಸ್ತುತ ಇರುವ ಲೈಂಗಿಕ ಕಾರ್ಯಕರ್ತೆಯರ ನಿಖರ ಅಂಕಿ ಅಂಶ ಇಲ್ಲದ ಕಾರಣ, ಇವರ ಬಗ್ಗೆ ಅಂಕಿ ಅಂಶ ಸಂಗ್ರಹಣೆಯನ್ನು ಸ್ವಯಂಸೇವಾ ಸಂಸ್ಥೆಯ ಮೂಲಕ ಮಾಡಿಸುವಂತೆ ಮತ್ತು ಸಮಾಜಶಾಸ್ತ್ರ ವಿದ್ಯಾರ್ಥಿಗಳ ಮೂಲಕ ಸಹ ಮಾಹಿತಿ ಸಂಗ್ರಹಿಸುವಂತೆ ಜಿಲ್ಲಾಧಿಕಾರಿ ತಿಳಿಸಿದರು.

ಲೈಂಗಿಕ ಕಾರ್ಯಕರ್ತೆಯರು ತಮ್ಮ ಮಾಹಿತಿಯನ್ನು ಮಹಿಳಾ ಮತ್ತು ಮಕ್ಕಳ ಅಭಿವೃಧ್ದಿ ಇಲಾಖೆಗೆ ಖುದ್ದು ಭೇಟಿಯಾಗಿ ನೀಡಬಹುದು ಅಥವಾ ಪತ್ರ ಮೂಲಕ ಸಹ ತಲುಪಿಸಬಹುದು. ದಮನಿತ ಮಹಿಳೆಯರು ನೀಡಿದ ಮಾಹಿತಿ ಗಳನ್ನು ಗೌಪ್ಯವಾಗಿಡಲಾಗುವುದು ಹಾಗೂ ಸರಕಾರದಿಂದ ನೀಡಲಾಗುವ ಎಲ್ಲಾ ಸೌಲಭ್ಯಗಳನ್ನು ಒದಗಿಸಲಾಗುವುದು ಎಂದರು.

ದಮನಿತ ಮಹಿಳೆಯ ಜೀವನಮಟ್ಟವನ್ನು ಸಮಗ್ರವಾಗಿ ಸುಧಾರಿಸಲು ಎಲ್ಲಾ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯ ನಿರ್ವಹಿಸಿ, ದಮನಿತ ಮಹಿಳೆಯರಿಗೆ ಧೈರ್ಯ ತುಂಬುವ ಕೆಲಸ ಮಾಡಿ. ಅವರನ್ನು ಮುಖ್ಯ ವಾಹಿನಿಗೆ ತರಲು ಪ್ರಯತ್ನಿಸಬೇಕು ಎಂದು ಜಿಲ್ಲಾಧಿಕಾರಿ ಹೇಳಿದರು.

ಈಗಾಗಲೇ ಜಿಲ್ಲೆಯಲ್ಲಿ ಸರಕಾರದ ಸೌಲ್ಯ ಪಡೆದಿರುವ ದಮನಿತ ಮಹಿಳೆ ಯರು, ತಮ್ಮ ಸಮುದಾಯದ ಇತರರಿಗೂ ಸಹ ಮಾಹಿತಿ ನೀಡುವ ಮೂಲಕ ಅವರಅಭಿವೃದ್ಧಿಗೆ ಸಹಾಯಹಸ್ತ ನೀಡಬೇಕು ಎಂದು ಜಿಲ್ಲಾಧಿಕಾರಿ ಹೇಳಿದರು.

ಜಿಲ್ಲೆಯಲ್ಲಿ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ದಿ ನಿಗಮ ಮೂಲಕ 2015 ರಿಂದ ಇದುವರೆಗೆ 32 ಮಂದಿ ದಮನಿತ ಮಹಿಳೆಯರಿಗೆ ಚೇತನಾ ಯೋಜನೆ ಯಡಿ ನೆರವು ನೀಡಲಾಗಿದೆ. ಈ ವರ್ಷ 6 ಮಂದಿಗೆ ಸೌಲಭ್ಯ ಒದಗಿಸುವ ಗುರಿ ಇದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪ ನಿರ್ದೇಶಕಿ ಗ್ರೇಸಿ ಗೊನ್ಸಾಲ್ವಿಸ್ ತಿಳಿಸಿದರು.

ಸಭೆಯಲ್ಲಿ ಜಿಲ್ಲಾಮಟ್ಟದ ಸಮಿತಿ ಸದಸ್ಯ ಡಾ. ಶ್ರೀಪಾದ ಶೆಟ್ಟಿ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X