ಬಾರ್ ನಲ್ಲಿ ಕ್ಷುಲ್ಲಕ ವಿಚಾರಕ್ಕೆ ಜಗಳ: ಯುವಕನ ಕೊಲೆ

ಮೈಸೂರು,ಫೆ.12: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮತ್ತೆ ನೆತ್ತರು ಹರಿದಿದೆ. ಬಾರೊಂದರಲ್ಲಿ ಕ್ಷುಲ್ಲುಕ ವಿಚಾರಕ್ಕೆ ನಡೆದ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ.
ಸೋಮವಾರ ಮಧ್ಯರಾತ್ರಿ ಮೆಕ್ಯಾನಿಕ್ ಓರ್ವನನ್ನು ಕೊಲೆ ಮಾಡಲಾಗಿದ್ದು, ದುಷ್ಕರ್ಮಿಗಳ ಚಾಕು ಇರಿತಕ್ಕೆ ಮೆಕ್ಯಾನಿಕ್ ಬಾಬು (23) ಎಂಬಾತ ಸಾವನ್ನಪ್ಪಿದ್ದಾನೆ. ಮೈಸೂರಿನ ರಾಘವೇಂದ್ರ ನಗರ ಬಡಾವಣೆಯಲ್ಲಿ ಘಟನೆ ನಡೆದಿದ್ದು, ಬಾಬು ಬಾರ್ ನಲ್ಲಿ ಮದ್ಯ ಸೇವನೆ ಮಾಡುತ್ತಿದ್ದ ಎನ್ನಲಾಗಿದ್ದು, ಈ ವೇಳೆ ಬಂದ ನಾಲ್ವರು ಇದ್ದಕ್ಕಿದ್ದಂತೆ ಜಗಳ ತೆಗೆದಿದ್ದಾರೆ. ಒಬ್ಬರಿಗೊಬ್ಬರು ಮಾತಿಗೆ ಇಳಿದಿದ್ದು ನಂತರ ಅಲ್ಲಿದ್ದ ಬಾಟಲಿಯಿಂದ ತಲೆಗೆ ಒಡೆದು ಚಾಕುವಿನಿಂದ ಇರಿದಿದ್ದಾರೆ ಎಂದು ತಿಳಿದುಬಂದಿದೆ.
ಕೆ.ಆರ್. ಆಸ್ಪತ್ರೆಯ ಶವಾಗಾರದಲ್ಲಿ ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಲಾಯಿತು. ಈ ಸಂಬಂಧ ಮೈಸೂರಿನ ನಜರ್ ಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





