ಕೊಡಗು: ಮಹಿಳಾ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಸುರಯ್ಯಾ ಅಬ್ರಾರ್ ಅಧಿಕಾರ ಸ್ವೀಕಾರ
ಮಡಿಕೇರಿ, ಫೆ.13: ಎಐಸಿಸಿ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜಾನೆಟ್ ಡಿಸೋಜಾ ಹಾಗೂ ಕೆಪಿಸಿಸಿ ಮಹಿಳಾ ಅಧ್ಯಕ್ಷೆ ಪುಷ್ಪಾ ಅಮರನಾಥ್ ರಿಂದ ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿಯ ಮಹಿಳಾ ಅಧ್ಯಕ್ಷರಾಗಿ ಸುರಯ್ಯಾ ಅಬ್ರಾರ್ ಅಧಿಕಾರ ಸ್ವೀಕರಿಸಿದರು.
ಬೆಂಗಳೂರಿನಲ್ಲಿ ನಡೆದ ಮಹಿಳಾ ಕಾಂಗ್ರೆಸ್ ಸಭೆಯಲ್ಲಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಸುರಯ್ಯಾ ಅಬ್ರಾರ್ ಕೊಡಗಿನಲ್ಲಿ ಪಕ್ಷವನ್ನು ಕಟ್ಟಿ ಬೆಳೆಸುವ ಕುರಿತು ಭರವಸೆ ನೀಡಿದರು. ಸಭೆಯಲ್ಲಿ ಎಐಸಿಸಿ ಮತ್ತು ಕೆಪಿಸಿಸಿ ಮುಖಂಡರು ಉಪಸ್ಥಿತರಿದ್ದರು.