ಮಂಗಳೂರು ವಿಮಾನ ನಿಲ್ದಾಣದಲ್ಲಿ ಟ್ಯಾಕ್ಸಿ ಚಾಲಕರಿಂದ ಹಲ್ಲೆ: ದೂರು

ಮಂಗಳೂರು, ಫೆ.13: ಮಂಗಳೂರು ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಏರ್‌ಪೋರ್ಟ್ ಟ್ಯಾಕ್ಸಿ ಚಾಲಕರಿಂದ ಓಲಾ ಕ್ಯಾಬ್ ಚಾಲಕನ ಮೇಲೆ ಹಲ್ಲೆ ನಡೆದ ಘಟನೆ ಬುಧವಾರ ನಡೆದಿದೆ.
ಓಲಾ ಕ್ಯಾಬ್ ಚಾಲಕ ರತನ್ ಹಲ್ಲೆಗೊಳಗಾದವರು.
ಮಂಗಳೂರು ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣ ಆವರಣದಲ್ಲಿ ಓಲಾ ಟ್ಯಾಕ್ಸಿ ನಿಲುಗಡೆ ಕೇಂದ್ರಕ್ಕೆ ನುಗ್ಗಿ ಸುಮಾರು 15ಕ್ಕೂ ಹೆಚ್ಚು ಏರ್‌ಪೋರ್ಟ್ ಟ್ಯಾಕ್ಸಿ ಚಾಲಕರು ಓಲಾ ಕ್ಯಾಬ್ ಚಾಲಕನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.
ವಿಷಯ ತಿಳಿಯುತ್ತಿದ್ದಂತೆ ಬಜ್ಪೆ ಪೊಲೀಸರು ಸ್ಥಳಕ್ಕಾಗಮಿಸಿ ಕೆಲವು ಏರ್‌ಪೋರ್ಟ್ ಟ್ಯಾಕ್ಸಿ ಚಾಲಕರನ್ನು ವಶಕ್ಕೆ ಪಡೆದಿದ್ದು, ವಿಮಾನ ನಿಲ್ದಾಣದ ಪಾರ್ಕಿಂಗ್ ಯಾರ್ಡ್‌ನಲ್ಲಿ ಪೊಲೀಸರು ಬಿಗಿ ಬಂದೋಬಸ್ತ್ ಏರ್ಪಡಿಸಿದ್ದಾರೆ ಎಂದು ತಿಳಿದುಬಂದಿದೆ.
ಹಲ್ಲೆಗೊಳಗಾದ ಚಾಲಕ ರತನ್ ನೀಡಿದ ದೂರಿನಂತೆ ಬಜ್ಪೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
Next Story





