ಸತತ ಐದನೇ ದಿನ ಕೋಲ್ಕತಾ ಪೊಲೀಸ್ ಆಯುಕ್ತರ ವಿಚಾರಣೆ

ಶಿಲಾಂಗ್, ಫೆ.13: ಶಾರದಾ ಚಿಟ್‌ಫಂಡ್ ಮತ್ತು ರೋಸ್‌ವ್ಯಾಲಿ ಚಿಟ್‌ಫಂಡ್ ಹಗರಣಕ್ಕೆ ಸಂಬಂಧಿಸಿದ ಕೆಲವು ದಾಖಲೆಪತ್ರಗಳನ್ನು ತನ್ನ ಬಳಿಯೇ ಇರಿಸಿಕೊಂಡಿರುವ ಆರೋಪ ಎದುರಿಸುತ್ತಿರುವ ಕೋಲ್ಕತಾ ಪೊಲೀಸ್ ಆಯುಕ್ತ ರಾಜೀವ್ ಕುಮಾರ್‌ರನ್ನು ಸಿಬಿಐ ಅಧಿಕಾರಿಗಳು ಸತತ ಐದನೇ ದಿನ ಶಿಲಾಂಗ್‌ನಲ್ಲಿ ವಿಚಾರಣೆ ನಡೆಸಿದ್ದಾರೆ.
ಮಂಗಳವಾರ ಸಿಬಿಐ ಅಧಿಕಾರಿಗಳು ಕುಮಾರ್‌ರನ್ನು ಸುಮಾರು 10 ತಾಸು ವಿಚಾರಣೆ ನಡೆಸಿದ್ದರು. 2016ರ ಜನವರಿಯಿಂದ ಕೋಲ್ಕತಾ ಪೊಲೀಸ್ ಆಯುಕ್ತರಾಗಿ ಕಾರ್ಯ ನಿರ್ವಹಿಸುತ್ತಿರುವ ಕುಮಾರ್‌ಗೆ ವಿಚಾರಣೆಗೆ ಹಾಜರಾಗುವಂತೆ ಸಿಬಿಐ ನೀಡಿದ್ದ ಸಮನ್ಸ್‌ಗೆ ಅವರು ಪ್ರತಿಕ್ರಿಯಿಸಿರಲಿಲ್ಲ. ಬಳಿಕ ಫೆಬ್ರವರಿ 5ರ ಸುಪ್ರೀಂಕೋರ್ಟ್‌ನ ಸೂಚನೆಯಂತೆ ಕುಮಾರ್ ಫೆ.9ರಿಂದ ವಿಚಾರಣೆಗೆ ಹಾಜರಾಗುತ್ತಿದ್ದಾರೆ.
Next Story





