ಬೈಂದೂರು: ಮತದಾನ ಜನಜಾಗೃತಿ ಜಾಥಾ

ಉಡುಪಿ, ಫೆ.13: ಬೈಂದೂರಿನ ಬೀದಿಗಳಲ್ಲಿ ಸ್ಥಳೀಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಕಾಲೇಜಿನ ಚುನಾವಣಾ ಸಾಕ್ಷರತಾ ಸಂಘ, ರಾಜ್ಯಶಾಸ್ತ್ರ ವಿಭಾಗ ಹಾಗೂ ಎನ್ನೆಸ್ಸೆಸ್ ಘಟಕಗಳ ವತಿಯಿಂದ ಮತದಾನದ ಕುರಿತು ಜನ ಜಾಗೃತಿ ಜಾಥಾ ನಡೆಸಿದರು.
ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿದ ಪ್ರಾಂಶುಪಾಲ ಪ್ರೊ.ಬಿ.ಎ. ಮೇಳಿ, ಮತದಾನ ಪ್ರಜಾಪ್ರಭುತ್ವದ ಜೀವಾಳವಾಗಿದೆ. ಅದರ ಯಶಸ್ಸಿಗೆ ನಾವೆಲ್ಲರು ಮತದಾನ ಮಾಡುವುದು ಮತ್ತು ಮತದಾನದ ಬಗ್ಗೆ ಅರಿವು ಮೂಡಿಸುವುದು ನಮ್ಮ ಕರ್ತವ್ಯ ಎಂದರು.
ವಿದ್ಯಾರ್ಥಿಗಳು ಮತದಾನದ ಮಹತ್ವ ಸಾರುವ ಆಕರ್ಷಕ ಘೋಷಣೆಗಳನ್ನು ಒಳಗೊಂಡ ಫಲಕಗಳನ್ನು ಹಿಡಿದು, ಘೋಷಣೆಗಳನ್ನು ಕೂಗುತ್ತಾ ಬೈಂದೂರಿನ ಪ್ರಮುಖ ಬೀದಿಗಳಲ್ಲಿ ಮೆರವಣಿಯ ಮೂಲಕ ಜಾಗೃತಿ ಮೂಡಿಸಿದರು.
ವಿದ್ಯಾರ್ಥಿಗಳು ಮತದಾನದ ಮಹತ್ವ ಸಾರುವ ಆಕರ್ಷಕ ಘೋಷಣೆಗಳನ್ನು ಒಳಗೊಂಡ ಫಲಕಗಳನ್ನು ಹಿಡಿದು, ಘೋಷಣೆಗಳನ್ನು ಕೂಗುತ್ತಾ ಬೈಂದೂರಿನ ಪ್ರಮುಖ ಬೀದಿಗಳಲ್ಲಿ ಮೆರವಣಿಯ ಮೂಲಕ ಜಾಗೃತಿ ಮೂಡಿಸಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಹಾಗೂ ಚುನಾವಣಾ ಸಾಕ್ಷರತಾ ಸಮಿತಿಯ ಸಂಯೋಜಕ ಶಿವಕುಮಾರ ಪಿ.ವಿ., ಎನ್ನೆಸ್ಸೆಸ್ ಘಟಕದ ನಾಗರಾಜ ಶೆಟ್ಟಿ, ಲತಾ ಪೂಜಾರಿ, ಕಾಲೇಜಿನ ಸಹಾಯಕ ಪ್ರಾಧ್ಯಾಪಕರು ಹಾಗೂ ಉಪನ್ಯಾಸಕರು ಭಾಗವಹಿಸಿದ್ದರು.





