ತೆಂಕನಿಡಿಯೂರು ಕಾಲೇಜಿನಲ್ಲಿ ಕಬಡ್ಡಿ ಪಂದ್ಯಾಟ

ಉಡುಪಿ, ಫೆ.13: ತೆಂಕನಿಡಿಯೂರಿನ ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಹಾಗೂ ಮಂಗಳೂರು ವಿವಿ ಆಶ್ರಯದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಪುರುಷರ ಕಬಡ್ಡಿ ಪಂದ್ಯಾಟ ಇತ್ತೀಚೆಗೆ ತೆಂಕನಿಡಿಯೂರು ಕಾಲೇಜಿನಲ್ಲಿ ನಡೆಯಿತು.
ತೆಂಕನಿಡಿಯೂರು ಗ್ರಾಪಂ ಅಧ್ಯಕ್ಷ ಕೃಷ್ಣ ಶೆಟ್ಟಿ ಪಂದ್ಯಾಟವನ್ನು ಉದ್ಘಾಟಿಸಿ ದರು. ಪ್ರಾಂಶುಪಾಲ ಪ್ರೊ.ಬಾಲಕೃಷ್ಣ ಎಸ್.ಹೆಗ್ಡೆ ಅಧ್ಯಕ್ಷತೆ ವಹಿಸಿದ್ದರು. ಮಂಗಳೂರು ವಿವಿ ದೈಹಿಕ ಶಿಕ್ಷಣ ನಿರ್ದೇಶಕರ ಸಂಘದ ಅಧ್ಯಕ್ಷ ವೇಣು ಗೋಪಾಲ ನೋಂಡಾ, ಕಾಲೇಜು ಅಭಿವೃದ್ಧಿ ಸಮಿತಿಯ ಪ್ರಸಾದ್ ರಾವ್ ಉಪಸ್ಥಿತರಿದ್ದರು.
ದೈಹಿಕ ಶಿಕ್ಷಣ ನಿರ್ದೇಶಕ ರಾಮಚಂದ್ರ ಪಾಟ್ಕರ್ ಸ್ವಾಗತಿಸಿ, ಡಾ.ಎಚ್.ಕೆ. ವೆಂಕಟೇಶ್ ವಂದಿಸಿದರು. ಡಾ. ದುಗ್ಗಪ್ಪ ಕಜೆಕಾರ್ ಕಾರ್ಯಕ್ರಮ ನಿರೂಪಿಸಿದರು.
Next Story





