ರೈತ ಮಕ್ಕಳಿಗೆ ತೋಟಗಾರಿಕೆ ತರಬೇತಿ
ಉಡುಪಿ, ಫೆ.13: ತೋಟಗಾರಿಕೆ ಇಲಾಖೆ ವತಿಯಿಂದ ರೈತರ ಮಕ್ಕಳಿಗೆ 10 ತಿಂಗಳ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಇದಕ್ಕೆ ಸಂಬಂಧಿ ಸಿದಂತೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆಯ ತೋಟಗಾರಿಕಾ ತರಬೇತಿ ಕೇಂದ್ರದಲ್ಲಿ ತರಬೇತಿ ಪಡೆಯಲು ಆಸಕ್ತರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಜಿಲ್ಲೆಯ ಸಾಮಾನ್ಯ ವರ್ಗದ 6 ಹಾಗೂ ಪರಿಶಿಷ್ಟ ಜಾತಿಯ ಒಬ್ಬ ಸೇರಿದಂತೆ ಒಟ್ಟು 7 ಮಂದಿ ಅ್ಯರ್ಥಿಗಳಿಗೆ ಅವಕಾಶವಿದ್ದು, ಆಸಕ್ತರು ಫೆ.28ರೊಳಗೆ ಉಡುಪಿ, ಕುಂದಾಪುರ ಹಾಗೂ ಕಾರ್ಕಳ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ.
ಅರ್ಜಿ ಶುಲ್ಕ ಸಾಮಾನ್ಯ ಅ್ಯರ್ಥಿಗಳಿಗೆ 30 ರೂ. ಹಾಗೂ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದವರಿಗೆ 15 ರೂ. ಇದ್ದು, ಮೊತ್ತದ ಡಿಡಿಯನ್ನು ತೋಟಗಾರಿಕಾ ಇಲಾಖೆಯ ಉಪನಿರ್ದೇಶಕರು, ಜಿಲ್ಲಾ ಪಂಚಾಯತ್, ಉಡುಪಿ ಇವರ ಹೆಸರಿನಲ್ಲಿ ಪಡೆಯುವಂತೆ ಇಲಾಖೆಯ ಪ್ರಕಟಣೆ ತಿಳಿಸಿದೆ.
Next Story





