ಮಲ್ಪೆ: ಸಾರ್ವಜನಿಕ ಸಮಾಲೋಚನಾ ಕಾರ್ಯಾಗಾರ ಸಭೆ
ಉಡುಪಿ, ಫೆ.13: ಅಮೃತ್, ಎಡಿಬಿ ಅನುದಾನದ ನೆರವಿನಲ್ಲಿ ಕ್ವಿಮಿಪ್ ಟ್ರಾಂಚ್-2 ಯೋಜನೆಯಡಿಯಲ್ಲಿ ದಿನದ 24 ಗಂಟೆ ಕುಡಿಯುವ ನೀರು ಒದಗಿಸುವ ಕಾಮಗಾರಿಗಳ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ನೀಡುವ ಮತ್ತು ಯೋಜನೆಗಳ ಅನುಷ್ಠಾನದಿಂದಾಗುವ ಸಾಮಾಜಿಕ ಪರಿಣಾಮಗಳ ಬಗ್ಗೆ ಅಭಿಪ್ರಾಯ ಪಡೆಯುವ ಉದ್ದೇಶದಿಂದ ಫೆ.15ರಂದು ಬೆಳಗ್ಗೆ 11ಕ್ಕೆ ಮಲ್ಪೆಯ ಏಳೂರು ಮೊಗವೀರ ಸಭಾಭವನದಲ್ಲಿ ವಾರ್ಡ್ ಮಟ್ಟದ ಸಾರ್ವಜನಿಕ ಸಮಾಲೋಚನಾ ಕಾರ್ಯಾಗಾರವನ್ನು ಆಯೋಜಿಸಲಾಗಿದೆ.
ಈ ಕಾರ್ಯಾಗಾರವನ್ನು ಉಡುಪಿ ನಗರಸಭಾ ವ್ಯಾಪ್ತಿಯ ಕೊಳ, ವಡಬಾಂಡೇಶ್ವರ, ಮಲ್ಪೆ ಸೆಂಟ್ರಲ್, ಕಲ್ಮಾಡಿ ವಾರ್ಡ್‌ಗಳಿಗೆ ಕೆಯುಐಇಎಫ್‌ಸಿ ಹಾಗೂ ಉಡುಪಿ ನಗರಸಬೆಯ ಸಹಯೋಗದೊಂದಿಗೆ ಆಯೋಜಿಸಿದ್ದು, ಸಾರ್ವಜನಿಕರು ಇದರಲ್ಲಿ ಭಾಗವಹಿಸಿ ಸೂಕ್ತ ಸಲಹೆ ಸೂಚನೆಗಳನ್ನು ನೀಡುವಂತೆ ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story





