ಪಂಜಿಮೊಗರು: ಗಾಂಜಾ ಮಾರಾಟ ಮಾಡುತ್ತಿದ್ದ ಯುವಕನ ಬಂಧನ

ಮಂಗಳೂರು, ಫೆ.13: ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದಲ್ಲಿ ಯುವಕನೋರ್ವನನ್ನು ನಗರದ ಪಂಜಿಮೊಗರು ವಿವೇಕನಗರದಲ್ಲಿ ಪೊಲೀಸರು ಬಂಧಿಸಿದ್ದು, ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಪಂಜಿಮೊಗರು ನಿವಾಸಿ ಸನತ್ ರಾವ್(22) ಬಂಧಿತ ಆರೋಪಿ.
ಆರೋಪಿಯಿಂದ ಸುಮಾರು 104 ಗ್ರಾಂ ತೂಕದ ಗಾಂಜಾ ಹಾಗೂ ಕೃತ್ಯಕ್ಕೆ ಬಳಸಿದ ದ್ವಿಚಕ್ರ ವಾಹನವನ್ನು ವಶಪಡಿಸಿದ್ದು, ವಶಪಡಿಸಿದ ಎಲ್ಲ ಸೊತ್ತುಗಳ ಒಟ್ಟು ಮೌಲ್ಯ 35,250 ರೂ. ಎಂದು ಅಂದಾಜಿಸಲಾಗಿದೆ.
ಈ ಬಗ್ಗೆ ಇಕನಾಮಿಕ್ ಆ್ಯಂಡ್ ನಾರ್ಕೋಟಿಕ್ಸ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





