Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಎಚ್‌ಡಿಕೆ ವಿರುದ್ಧದ ಚಾರ್ಜ್‌ಶೀಟ್...

ಎಚ್‌ಡಿಕೆ ವಿರುದ್ಧದ ಚಾರ್ಜ್‌ಶೀಟ್ ಸಲ್ಲಿಸಲು ಕೋರಿ ಹೈಕೋರ್ಟ್‌ಗೆ ಪಿಐಎಲ್ ಸಲ್ಲಿಕೆ

ಜಂತಕಲ್ ಮೈನಿಂಗ್ ಹಗರಣ

ವಾರ್ತಾಭಾರತಿವಾರ್ತಾಭಾರತಿ14 Feb 2019 7:12 PM IST
share
ಎಚ್‌ಡಿಕೆ ವಿರುದ್ಧದ ಚಾರ್ಜ್‌ಶೀಟ್ ಸಲ್ಲಿಸಲು ಕೋರಿ ಹೈಕೋರ್ಟ್‌ಗೆ ಪಿಐಎಲ್ ಸಲ್ಲಿಕೆ

ಬೆಂಗಳೂರು, ಫೆ.14: ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ವಿರುದ್ಧದ ಜಂತಕಲ್ ಮೈನಿಂಗ್ ಹಗರಣ ಆರೋಪ ಪ್ರಕರಣ ಇದೀಗ ಮತ್ತೇ ಹೈಕೋರ್ಟ್ ಅಂಗಳಕ್ಕೆ ಬಂದಿದೆ. ಇದೇ ಪ್ರಕರಣದಲ್ಲಿ 2017ರ ಆಗಸ್ಟ್ 10ರಂದು ಕುಮಾರಸ್ವಾಮಿಯವರಿಗೆ ಹೈಕೋರ್ಟ್ ನಿರೀಕ್ಷಣಾ ಜಾಮೀನು ಮಂಜೂರು ಮಾಡಿತ್ತು. ಜಂತಕಲ್ ಎಂಟರ್ ಪ್ರೈಸಸ್‌ಗೆ ಗಣಿ ಪರವಾನಿಗೆ ನವೀಕರಣದಲ್ಲಿ ಅವ್ಯವಹಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಹಾಲಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ವಿರುದ್ಧದ ಚಾರ್ಜ್‌ಶೀಟ್ ನ್ಯಾಯಾಲಯಕ್ಕೆ ಸಲ್ಲಿಸುವಂತೆ ಹಾಗೂ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಲು ಲೋಕಾಯುಕ್ತ ಸಂಸ್ಥೆಗೆ ನಿರ್ದೇಶನ ನೀಡುವಂತೆ ಕೋರಿ ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ. ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕು ಕಬ್ಬಾಳ ಗ್ರಾಮದ ಸಾಮಾಜಿಕ ಹಾಗೂ ಮಾಹಿತಿ ಹಕ್ಕು ಕಾರ್ಯಕರ್ತ ಹರೀಶ ಹಳ್ಳಿ, ಈ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದು, ಇದರಲ್ಲಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, ಕಾನೂನು ಇಲಾಖೆ ಕಾರ್ಯದರ್ಶಿ ಹಾಗೂ ಲೋಕಾಯುಕ್ತ ರಿಜಿಸ್ಟ್ರಾರ್ ಅವರನ್ನು ಪ್ರತಿವಾದಿಗಳನ್ನಾಗಿ ಮಾಡಲಾಗಿದೆ. ಅರ್ಜಿಯು ಇನ್ನಷ್ಟೇ ವಿಚಾರಣೆಗೆ ಬರಬೇಕಿದೆ.

  ಹಾಲಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿಯವರು 2018ರ ವಿಧಾನಸಭೆ ಚುನಾವಣೆಗೆ ಚನ್ನಪಟ್ಟಣ ಕ್ಷೇತ್ರದಿಂದ ಸ್ಪರ್ಧಿಸಲು ಚುನಾವಣಾ ಆಯೋಗಕ್ಕೆ ಸಲ್ಲಿಸಿದ ನಾಮಪತ್ರದ ಜೊತೆಗೆ ಜಂತಕಲ್ ಮೈನಿಂಗ್ ಹಗರಣಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ಹೆಚ್ಚುವರಿ ಸಿಟಿ ಸಿವಿಲ್ ಹಾಗೂ ಸೆಷನ್ಸ್ ನ್ಯಾಯಾಲಯ(ಸಿಸಿಎಚ್-82) ರಲ್ಲಿ ಕ್ರೈಂ ಸಂಖ್ಯೆ 10/2015 ಹಾಗೂ ಕ್ರೈಂ ಸಂಖ್ಯೆ 1/2017 ಬಾಕಿ ಇದೆ ಎಂದು ಘೋಷಿಸಿಕೊಂಡಿದ್ದಾರೆ. ಇದರ ಬಗ್ಗೆ ಲೋಕಾಯುಕ್ತ ರಿಜಿಸ್ಟ್ರಾರ್‌ಗೆ ಮಾಹಿತಿ ಹಕ್ಕು ಕಾಯ್ದೆಯಡಿ ಅರ್ಜಿ ಸಲ್ಲಿಸಿ ಮಾಹಿತಿ ಕೇಳಿದರೆ ಈವರೆಗೆ ಯಾವುದೇ ಉತ್ತರ ಬಂದಿಲ್ಲ. ಈ ನಡುವೆ ಪ್ರಕರಣದ ತನಿಖೆ ಪೂರ್ಣಗೊಂಡಿದ್ದು, ಬಹಳ ಹಿಂದೆಯೇ ಚಾರ್ಜ್‌ಶೀಟ್ ಸಿದ್ಧಪಡಿಸಲಾಗಿದೆ. ಆದರೆ, ಇಲ್ಲಿತನಕ ಚಾರ್ಜ್‌ಶೀಟ್ ಸಲ್ಲಿಕೆಯಾಗಿಲ್ಲ. ಆರೋಪಿ ಸ್ಥಾನದಲ್ಲಿರುವ ಎಚ್.ಡಿ. ಕುಮಾರಸ್ವಾಮಿ ಹಾಲಿ ಮುಖ್ಯಮಂತ್ರಿ ಆಗಿದ್ದು, ಪ್ರಭಾವಿ ವ್ಯಕ್ತಿಯಾಗಿದ್ದಾರೆ. ಚಾರ್ಜ್‌ಶೀಟ್ ಸಲ್ಲಿಸದಂತೆ ಲೋಕಾಯುಕ್ತ ರಿಜಿಸ್ಟ್ರಾರ್‌ಗೆ ಮುಖ್ಯಮಂತ್ರಿಯವರು ಪ್ರಭಾವ ಬೀರುತ್ತಿದ್ದಾರೆ ಎಂದು ಅರ್ಜಿಯಲ್ಲಿ ದೂರಲಾಗಿದೆ.

  ಹೀಗಾಗಿ, ಜಂತಕಲ್ ಮೈನಿಂಗ್ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಕುಮಾರಸ್ವಾಮಿ ವಿರುದ್ಧದ ದೂರುಗಳ ಕುರಿತು ಚಾರ್ಜ್‌ಶೀಟ್ ಸಲ್ಲಿಸುವಂತೆ ಹಾಗೂ ಕುಮಾರಸ್ವಾಮಿ ವಿರುದ್ಧ ಕಾನೂನು ರೀತಿ ಕ್ರಮ ಜರುಗಿಸುವಂತೆ ಲೋಕಾಯುಕ್ತ ಸಂಸ್ಥೆಗೆ ನಿರ್ದೇಶನ ನೀಡುವಂತೆ ಅರ್ಜಿದಾರರು ಕೋರಿದ್ದಾರೆ. ಇದಲ್ಲದೇ ಕುಮಾರಸ್ವಾಮಿ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸುವಂತೆ ಲೋಕಾಯುಕ್ತಕ್ಕೆ ನಿರ್ದೇಶನ ನೀಡುವಂತೆ ಅರ್ಜಿದಾರರು 2019ರ ಫೆ.7ರಂದು ರಾಷ್ಟ್ರಪತಿ, ಅಟಾರ್ಜಿ ಜನರಲ್ ಹಾಗೂ ರಾಜ್ಯಪಾಲರಿಗೆ ಮನವಿಯನ್ನೂ ಸಲ್ಲಿಸಿದ್ದಾರೆ.

  ಪ್ರಕರಣವೇನು: ಈ ಹಿಂದೆ ಜೆಡಿಎಸ್-ಬಿಜೆಪಿ 20:20 ಸರಕಾರದಲ್ಲ್ಲಿ ಮುಖ್ಯಮಂತ್ರಿ ಆಗಿದ್ದ ಎಚ್.ಡಿ. ಕುಮಾರಸ್ವಾಮಿಯವರು ವಿನೋದ್ ಗೋಯಲ್ ಮಾಲಕತ್ವದ ಜಂತಕಲ್ ಎಂಟರ್ ಪ್ರೈಸಸ್‌ಗೆ ಚಿತ್ರದುರ್ಗ ಜಿಲ್ಲೆಯ ಮೀಸಲು ಅರಣ್ಯದಲ್ಲಿ ಗಣಿಗಾರಿಕೆ ನಡೆಸಲು ಗಣಿ ಪರವಾನಿಗೆ ನವೀಕರಿಸಿ ಕೊಟ್ಟಿದ್ದರು. ಇದರಿಂದ ರಾಜ್ಯ ಸರಕಾರದ ಬೊಕ್ಕಸಕ್ಕೆ ಸುಮಾರು 250 ಕೋಟಿ ರೂ. ನಷ್ಟ ಉಂಟಾಗಿದೆ ಎಂದು ಆಗ ಲೋಕಾಯುಕ್ತರಾಗಿದ್ದ ನ್ಯಾ.ಸಂತೋಷ್ ಹೆಗ್ಡೆ ವರದಿ ನೀಡಿದ್ದರು. ಈ ಸಂಬಂಧ ಕುಮಾರಸ್ವಾಮಿ ವಿರುದ್ಧ 2015ರಲ್ಲಿ ಲೋಕಾಯುಕ್ತದಲ್ಲಿ ಹಾಗೂ 2017ರಲ್ಲಿ ಎಸ್‌ಐಟಿಯಲ್ಲಿ ದೂರು ದಾಖಲಾಗಿತ್ತು. ಈ ಪ್ರಕರಣದಲ್ಲಿ ಹೈಕೋರ್ಟ್ ಕುಮಾರಸ್ವಾಮಿಯವರಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಇದೇ ಪ್ರಕರಣದಲ್ಲಿ ಹಿರಿಯ ಐಎಎಸ್ ಅಧಿಕಾರಿಗಳಾದ ಮಹೇಂದ್ರ ಜೈನ್ ಹಾಗೂ ಗಂಗಾರಾಂ ಬಡೇರಿಯಾ ವಿರುದ್ಧವೂ ಆರೋಪ ಕೇಳಿ ಬಂದಿತ್ತು. 2017ರಲ್ಲಿ ಗಂಗಾರಾಂ ಬಡೇರಿಯಾ ಅವರನ್ನು ಎಸ್‌ಐಟಿ ಬಂಧಿಸಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X