ಹುತಾತ್ಮ ಸೈನಿಕರಿಗೆ ಬಿಜೆಪಿಯಿಂದ ಶ್ರದ್ಧಾಂಜಲಿ ಸಭೆ
ಉಡುಪಿ, ಫೆ.15: ಕಾಶ್ಮೀರದ ಪುಲ್ವಾಮದಲ್ಲಿ ನಡೆದ ಉಗ್ರರ ದಾಳಿಗೆ ಹುತಾತ್ಮರಾದ ವೀರ ಯೋಧರ ಆತ್ಮಕ್ಕೆ ಶಾಂತಿಯನ್ನು ಕೋರಿ ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಶುಕ್ರವಾರ ಅಜ್ಜರಕಾಡು ಹುತಾತ್ಮ ಸ್ಮಾರಕರದ ಬಳಿ ಶ್ರದ್ಧಾಂಜಲಿ ಸಭೆಯನ್ನು ಆಯೋಜಿಸಲಾಗಿತ್ತು.
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಶಾಸಕ ಕೆ.ರಘುಪತಿ ಭಟ್, ಮುಖಂಡರಾದ ಶ್ರೀಶ ನಾಯಕ್, ಯಶ್ಪಾಲ್ ಸುವರ್ಣ, ಶ್ಯಾಮಲಾ ಕುಂದರ್, ನಳಿನಿ ಪ್ರದೀಪ್ ರಾವ್, ರಶ್ಮಿತಾ ಬಾಲಕೃಷ್ಣ ಶೆಟ್ಟಿ, ಬೈಕಾಡಿ ಸುಪ್ರಸಾದ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.
Next Story