Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ರಾಜ್ಯ ಯುವಜನ ಆಯೋಗ ಜಾರಿಯಾಗಬೇಕು:...

ರಾಜ್ಯ ಯುವಜನ ಆಯೋಗ ಜಾರಿಯಾಗಬೇಕು: ಚಲನಚಿತ್ರ ನಿರ್ದೇಶಕ ಬಿ.ಎಂ.ಗಿರಿರಾಜ

ವಾರ್ತಾಭಾರತಿವಾರ್ತಾಭಾರತಿ17 Feb 2019 10:54 PM IST
share
ರಾಜ್ಯ ಯುವಜನ ಆಯೋಗ ಜಾರಿಯಾಗಬೇಕು: ಚಲನಚಿತ್ರ ನಿರ್ದೇಶಕ ಬಿ.ಎಂ.ಗಿರಿರಾಜ

ಬೆಂಗಳೂರು, ಫೆ.17: ಮಕ್ಕಳ ಆಯೋಗ, ಮಹಿಳಾ ಆಯೋಗದಂತೆ ರಾಜ್ಯ ಯುವಜನ ಆಯೋಗ ಜಾರಿಯಾಗಬೇಕೆಂದು ಚಲನಚಿತ್ರ ನಿರ್ದೇಶಕ ಬಿ.ಎಂ ಗಿರಿರಾಜ ಆಗ್ರಹಿಸಿದರು.

ರವಿವಾರ ನಗರದ ಸೇಂಟ್ ಜೋಸೆಫ್ ಕಾಲೇಜಿನಲ್ಲಿ ಸಂವಾದ ಯುವ ಸಂಪನ್ಮೂಲ ಕೇಂದ್ರದ ವತಿಯಿಂದ ಆಯೋಜಿಸಿದ್ದ ‘ಯುವಾಭಿವ್ಯಕ್ತಿ’ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ದೇಶದಲ್ಲಿ, ರಾಜ್ಯದಲ್ಲಿ ಯುವಜನರು ವಿವಿಧ ರೀತಿಯ ಸಮಸ್ಯೆಗಳಿಂದ ನರಳುತ್ತಿದ್ದಾರೆ. ಯುವ ಹಕ್ಕುಗಳಿಂದ ವಂಚಿತರಾಗುತ್ತಿದ್ದಾರೆ ಎಂದು ಹೇಳಿದರು.

ಯುವಜನರ ದೈಹಿಕ ಮಾನಸಿಕ ಬೆಳೆವಣಿಗೆಯ ಹಂತದಲ್ಲಾಗುವ ಆರೋಗ್ಯದ ಸವಾಲು, ಶಿಕ್ಷಣ, ಉದ್ಯೋಗ, ಪ್ರೀತಿ, ಗೆಳೆತನ, ಮದುವೆ ಹಾಗೂ ಸಾಮಾಜಿಕ ಚಟುವಟಿಕೆಗಳಲ್ಲಿ ತೋಡಗಿಸಿಕೊಳ್ಳುವ ವಿಷಯಗಳಲ್ಲಿ ಯುವಜನರ ಒಳಗೆ ಗೊಂದಲ, ಬಿಕ್ಕಟ್ಟುಗಳಿವೆ. ಹೊರಗಿನಿಂದಲೂ ಒತ್ತಡಗಳಿವೆ. ತಂದೆ- ತಾಯಿಯರ ಪ್ರೀತಿಯ ಜೊತೆಗೆ ಯುವಜನರ ಸಾಮರ್ಥ್ಯಕ್ಕೆ ಮೀರಿದ ನಿರೀಕ್ಷೆಗಳು ಕುಟುಂಬದೊಳಗಿನ ದೌರ್ಜನ್ಯಗಳು, ಉದ್ಯೋಗದ ಸವಾಲುಗಳು ಯುವಜನತೆ ಬೆಳೆದು ಅರಳುವುದನ್ನು ಕುಂಠಿತಗೊಳಿಸುತ್ತದೆ ಎಂದು ತಿಳಿಸಿದರು.

ಯುವಜನರ ಹಕ್ಕುಗಳು ಸಮರ್ಪಕವಾಗಿ ಬಳಕೆಯಾಗಬೇಕು, ಅದು ಎಲ್ಲರಿಗೂ ತಲುಪಬೇಕಾದರೆ ಅದಕ್ಕೆ ಒಂದು ಆಯೋಗದ ನಿಯಂತ್ರಣದ ಅಗತ್ಯವಿದೆ. ಹೀಗಾಗಿ, ರಾಜ್ಯ ಸರಕಾರ ಒಂದು ಆಯೋಗವನ್ನು ರಚನೆ ಮಾಡಬೇಕು. ಈಗಾಗಲೇ ಮಹಾರಾಷ್ಟ್ರ, ಕೇರಳದಲ್ಲಿ ಯುವಜನ ಆಯೋಗವಿದೆ. ಅದೇ ರೀತಿ ಕರ್ನಾಟಕದಲ್ಲಿಯೂ ಒಂದು ಆಯೋಗ ರಚನೆಯಾಗಬೇಕಾಗಿದೆ. ಈ ಸಂಬಂಧ ಎಲ್ಲರೂ ಸರಕಾರದ ಮೇಲೆ ಒತ್ತಡ ಹೇರಬೇಕು ಎಂದು ಕರೆ ನೀಡಿದರು.

ಉದ್ಯೋಗಕ್ಕಾಗಿ ಯುವಜನರು ಸಂಘಟನೆಯ ಸಂಚಾಲಕ ಸರೋವರ ಬೆಂಕಿಕೆರೆ ಮಾತನಾಡಿ, ನಮ್ಮ ಭಾರತದಲ್ಲಿ ನಿರುದ್ಯೋಗಿಗಳ ಪ್ರಮಾಣ ಹೆಚ್ಚಾಗಿದೆ. ಅಲ್ಲದೆ, ಸರಿಯಾದ ಶಿಕ್ಷಣ ಸಿಗದೇ ಸಾವಿರಾರು ಸಂಖ್ಯೆಯಲ್ಲಿ ಶಿಕ್ಷಣದಿಂದ ದೂರ ಉಳಿಯುತ್ತಿದ್ದಾರೆ. ಹೀಗಾಗಿ, ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ಸಿಗಬೇಕು ಎಂದು ಒತ್ತಾಯಿಸಿದರು.

ಸಮಾಜದಲ್ಲಿನ ಎಲ್ಲರಿಗೂ ಶಿಕ್ಷಣ, ಉದ್ಯೋಗ ಸಿಗುವುದರಿಂದ ಯುವಜನರು ತಮ್ಮ ಹಕ್ಕುಗಳನ್ನು ದಕ್ಕಿಸಿಕೊಳ್ಳಲು ತಕ್ಕಮಟ್ಟಿಗೆ ಸಹಕಾರಿಯಾಗುತ್ತದೆ. ಇದರಲ್ಲಿ ಸರಕಾರದ ಪಾತ್ರ ಪ್ರಮುಖವಾಗಿದ್ದು, ಆಳುವ ವರ್ಗ ಶಿಕ್ಷಣಕ್ಕೆ ಅಗತ್ಯವಾದ ಎಲ್ಲ ರೀತಿಯ ಸೌಲಭ್ಯಗಳನ್ನು ಕಲ್ಪಿಸಬೇಕು. ಅದರ ಜತೆಗೆ ಶಿಕ್ಷಿತರಾದ ಎಲ್ಲರಿಗೂ ಉದ್ಯೋಗದ ಖಾತ್ರಿಯನ್ನೂ ನೀಡಬೇಕು ಎಂದರು.

ಕಲಾವಿದೆ ಶಿಲೋಕ ಮಾತನಾಡಿ, ಜಗತ್ತು ನನ್ನನ್ನು ಗಂಡು ಎಂದು ಗುರುತಿಸುತ್ತಿತ್ತು. ಆದರೆ, ನಾನು ನನ್ನನ್ನು ಹೆಣ್ಣಾಗಿ ಗುರುತಿಸಿಕೊಂಡೆ. ನಮ್ಮ ಜೀವನವನ್ನು ನಾವು ಯಾವರೀತಿಯಾಗಿ ಜೀವಿಸಬೇಕು, ನಮ್ಮ ಲಿಂಗ ಯಾವುದು ಎಂದು ಸಮಾಜ ನಿರ್ಧಾರ ಮಾಡುತ್ತದೆ. ಆದರೆ, ಅದು ನಮ್ಮ ಹಕ್ಕಾಗಬೇಕು ಎಂದು ಹೇಳಿದರು.

ಸಾಮಾಜಿಕ ಹೋರಾಟಗಾರ್ತಿ ಶಾರದ ಮಾಳಗಿ ಮಾತನಾಡಿ, ಹಕ್ಕುಗಳು ಶಾಸನ ಬದ್ಧವಾಗಿ ಇರಬೇಕು. ಯುವ ನೀತಿ ಆಯೋಗ ಬೇಕು. ನಿರ್ದಿಷ್ಟ ಸಮಾಲೋಚನೆಗೆ ನಿರ್ದಿಷ್ಟ ಸಮಯಬೇಕು, ಶಿಕ್ಷಣ ಬೇಕು ಹೊರತು ತಾರತಮ್ಯ ಬೇಡ. ನಮ್ಮದೇ ಹಕ್ಕು ನಮಗೆ ಬೇಕಾಗಿದೆ ಎಂದು ಪ್ರತಿಪಾದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X