Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕೊಕ್ಕರ್ಣೆ ರಸ್ತೆ ಕಳಪೆ ಕಾಮಗಾರಿ:...

ಕೊಕ್ಕರ್ಣೆ ರಸ್ತೆ ಕಳಪೆ ಕಾಮಗಾರಿ: ಅಧ್ಯಕ್ಷರ ನೇತೃತ್ವದಲ್ಲಿ ತನಿಖೆ

ಜಿಪಂ ಸಾಮಾನ್ಯ ಸಭೆಯಲ್ಲಿ ನಿರ್ಣಯ

ವಾರ್ತಾಭಾರತಿವಾರ್ತಾಭಾರತಿ19 Feb 2019 9:51 PM IST
share
ಕೊಕ್ಕರ್ಣೆ ರಸ್ತೆ ಕಳಪೆ ಕಾಮಗಾರಿ: ಅಧ್ಯಕ್ಷರ ನೇತೃತ್ವದಲ್ಲಿ ತನಿಖೆ

ಉಡುಪಿ, ಫೆ.19: ಕೊಕ್ಕರ್ಣೆ ಗ್ರಾಪಂ ವ್ಯಾಪ್ತಿಯ ಕೋಟಂಬೈಲು ಪ್ರದೇಶ ದಲ್ಲಿ ನಾಲ್ಕು ವರ್ಷಗಳ ಹಿಂದೆ ಸುಮಾರು ಎರಡು ಕೋಟಿ ರೂ.ವೆಚ್ಚದಲ್ಲಿ ನಿರ್ಮಾಣಗೊಂಡ ಏಕಪಥ ರಸ್ತೆ ಕಾಮಗಾರಿ ಅತ್ಯಂತ ಕಳಪೆಯಾಗಿದ್ದು, ಈ ಬಗ್ಗೆ ಜಿಪಂ ಅಧ್ಯಕ್ಷರ ನೇತೃತ್ವದ ಸಮಿತಿಯಿಂದ ತನಿಖೆ ನಡೆಸಲು ಇಂದು ನಡೆದ ಜಿಪಂನ 15ನೇ ಸಾಮಾನ್ಯ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಯಿತು.

ಜಿಪಂ ಅಧ್ಯಕ್ಷ ದಿನಕರ ಬಾಬು ಅಧ್ಯಕ್ಷತೆಯಲ್ಲಿ ನಡೆದ ಇಂದಿನ ಸಭೆಯಲ್ಲಿ ವಿಷಯ ಪ್ರಸ್ತಾಪಿಸಿದ ಮೈರ್ಮಾಡಿ ಸುಧಾಕರ ಶೆಟ್ಟಿ ಮತ್ತು ಜನಾರ್ದನ ತೋನ್ಸೆ ಅವರು, ಈ ಕಾಮಗಾರಿಯನ್ನು ಯಾವ ಇಲಾಖೆ ನಡೆಸಿದೆ, ಕಾಮಗಾರಿಯ ಟೆಂಡರ್ ಯಾವ ಗುತ್ತಿಗೆದಾರರಿಗೆ ವಹಿಸಲಾಗಿದೆ ಎಂಬ ಬಗ್ಗೆ ಯಾವ ಇಲಾಖೆ ಗಳೂ (ವಾರಾಹಿ, ಪಿಡಬ್ಲುಡಿ, ಕೆಆರ್‌ಐಡಿಎಲ್) ಯಾವುದೇ ಮಾಹಿತಿಗಳನ್ನು ನೀಡುತ್ತಿಲ್ಲ. ಹೀಗಾಗಿ ಈ ಬಗ್ಗೆ ಸರಕಾರದ ಮಟ್ಟದಲ್ಲಿ ತನಿಖೆಯಾಗಬೇಕು ಎಂದು ತೋನ್ಸೆ ಒತ್ತಾಯಿಸಿದರು.

ಕಾಮಗಾರಿಯಲ್ಲಿ ಭಾರೀ ಅವ್ಯವಹಾರವಾಗಿದ್ದು, ಕಳಪೆ ಕಾಮಗಾರಿ ಯಾಗಿದೆ. ಈ ಕಾಮಗಾರಿ ಬಗ್ಗೆ ಈವರೆಗೆ ತನಿಖೆಯಾಗಿಲ್ಲ. ಎರಡು ಕೋಟಿ ರೂ. ಇಲ್ಲಿ ನೀರಿನಲ್ಲಿ ಹೋಮ ಮಾಡಿದಂತೆ ವ್ಯರ್ಥವಾಗಿ ಹೋಗಿದೆ. ಆದುದರಿಂದ ಈ ಬಗ್ಗೆ ಮೊದಲ ಸಲ ಸದನ ಸಮಿತಿಯಿಂದ ತನಿಖೆಯಾಗಲಿ ಎಂದು ಅವರು ಹೇಳಿದರು. ಜಿಪಂನಲ್ಲಿ ಸದನ ಸಮಿತಿ ಎಂಬುದಿಲ್ಲ. ಅಧ್ಯಕ್ಷರ ನೇತೃತ್ವದಲ್ಲಿ ತನಿಖೆ ನಡೆಯಬಹುದು ಎಂದು ನಿರ್ಣಯ ಕೈಗೊಳ್ಳಲಾಯಿತು.

ದೇವಸ್ಥಾನ ಯಾರದ್ದು?:  ಇತ್ತೀಚೆಗೆ ಕುಂದಾಪುರ ತಾಪಂನಲ್ಲಿ ತೀವ್ರ ಚರ್ಚೆಗೆ ಗುರಿಯಾದ ಕುಂದಾಪುರ ತಾಲೂಕು ಆಸ್ಪತ್ರೆಯಲ್ಲಿರುವ ನಂದಿಕೇಶ್ವರ ದೇವಸ್ಥಾನದ ಕುರಿತಂತೆ ಇಂದು ಜಿಪಂನಲ್ಲೂ ಚರ್ಚೆ ನಡೆಯಿತು. ವಿಷಯ ಪ್ರಸ್ತಾಪಿಸಿದ ಸ್ಥಾಯಿ ಸಮಿತಿ ಅಧ್ಯಕ್ಷ ಬಾಬು ಶೆಟ್ಟಿ, ಡಿಎಚ್‌ಒ ಬಳಿ ಈ ಬಗ್ಗೆ ಮಾಹಿತಿ ನೀಡುವಂತೆ ಕೇಳಿದರು.

ಆಸ್ಪತ್ರೆಯಲ್ಲೇ ಇರುವುದರಿಂದ ಇದು ಆಸ್ಪತ್ರೆಗೆ ಸೇರಿದ ಆಸ್ಪತ್ರೆಯಾಗಿದ್ದು, ಇದಕ್ಕಾಗಿ ತಾಲೂಕು ವೈದ್ಯಾಧಿಕಾರಿ ನೇತೃತ್ವದಲ್ಲಿ ಸಮಿತಿ ಇದೆ ಎಂದು ಡಿಎಚ್‌ಓ ಡಾ.ರೋಹಿಣಿ ತಿಳಿಸಿದರು. ಇತ್ತೀಚೆಗೆ ವಿವಾದವಾದ ಬಳಿಕ ಈ ಬಗ್ಗೆ ಧಾರ್ಮಿಕ ದತ್ತಿ ಇಲಾಖೆಯಿಂದ ಸ್ಪಷ್ಟೀಕರಣ ಕೇಳಿದ್ದು, ಹಿಂದೂ ಧರ್ಮದಲ್ಲಿ ನಂಬಿಕೆ ಇರುವವರು ದೇವಸ್ಥಾನದ ಮುಖ್ಯಸ್ಥನಾಗಿರಬೇಕೆಂದು ಅದು ತಿಳಿಸಿದೆ ಎಂದರು.

ಈ ವೇಳೆ ದೇವಸ್ಥಾನಕ್ಕೆ ಸಂಬಂಧಿಸಿದ ದಾಖಲೆಗಳನ್ನು ತೋರಿಸಿದ ಬಾಬು ಶೆಟ್ಟಿ, ಈ ದೇವಸ್ಥಾನ ಆಸ್ಪತ್ರೆಗೆ ಸೇರಿದ್ದಲ್ಲ. ನಾಲ್ಕು ಸೆನ್ಸ್ ಜಾಗದಲ್ಲಿ ದೇವಸ್ಥಾನವಿದ್ದು, ಆರ್‌ಟಿಸಿಯಲ್ಲಿ ಸರಕಾರ ಎಂದು ಸ್ಪಷ್ಟವಾಗಿ ಹೇಳಿದೆ. ಆಸ್ಪತ್ರೆ ಯವರು ಹೇಗೆ ಸಮಿತಿ ರಚಿಸಿ ದೇವಸ್ಥಾನದ ಆದಾಯವನ್ನು ಪ್ರತ್ಯೇಕ ಬ್ಯಾಂಕ್ ಖಾತೆಯ ಮೂಲಕ ವ್ಯವಹರಿಸುತಿದ್ದೀರಿ ಎಂದು ಪ್ರಶ್ನಿಸಿದರಲ್ಲದೇ, ದೇವಸ್ಥಾನದ ಆದಾಯ ಹಾಗೂ ಖರ್ಚಿನ ಕುರಿತು ಮಾಹಿತಿ ನೀಡುವಂತೆ ತಿಳಿಸಿದರು.

ಈ ಹಂತದಲ್ಲಿ ಸದಸ್ಯರು ತಿಳಿಸಿದ ವಿಷಯಗಳೆಲ್ಲವೂ ತನಗೆ ಗೊತ್ತಿರಲಿಲ್ಲ ಎಂದು ಡಿಎಚ್‌ಓ ಹೇಳಿದಾಗ, ಈ ಬಗ್ಗೆ ಸಂಪೂರ್ಣ ಮಾಹಿತಿಗಳನ್ನು ಪಡೆದು ವರದಿಯನ್ನು ತನಗೆ ನೀಡುವಂತೆ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸಿಂಧೂ ಬಿ.ರೂಪೇಶ್ ಸೂಚಿಸಿ ಚರ್ಚೆಗೆ ಮಂಗಳ ಹಾಡಿದರು.

ಮಂಗಳೂರು ಕೆಎಸ್ಸಾರ್ಟಿಸಿ ಹಿರಿಯ ಅಧಿಕಾರಿಯೊಬ್ಬರು ಜಿಪಂ ಸದಸ್ಯ ರೊಂದಿಗೆ ಅತ್ಯಂತ ಉಢಾಪೆಯಾಗಿ ತಾನು ಜನಪ್ರತಿನಿಧಿಗಳಿಂದ ದೊಡ್ಡವನು ಎಂದು ಮಾತನಾಡಿದ್ದು ಸಭೆಯಲ್ಲಿ ಆರಂಭದಲ್ಲೇ ಬಿರುಸಿನ ಚರ್ಚೆಗೆ ಕಾರಣವಾಯಿತು. ಮೈರ್ಮಾಡಿ ಸುಧಾಕರ ಶೆಟ್ಟಿ ಅವರು ಹೆಬ್ರಿ-ಬ್ರಹ್ಮಾವರ ನಡುವೆ ನರ್ಮ್ ಬಸ್ ಪುನರಾರಂಭಿಸುವಂತೆ ತಿಳಿಸಲು ದೂರವಾಣಿ ಕರೆ ಮಾಡಿದಾಗ ಅಧಿಕಾರಿ ಈ ರೀತಿ ಉತ್ತರಿಸಿದ್ದಾಗಿ ತಿಳಿಸಿದರು.

ಬೈಲೂರಿನ ಪಿಡಿಓ ಸಹ ತಮ್ಮಂದಿಗೆ ಇದೇ ರೀತಿ ಮಾತನಾಡಿದ್ದಾರೆ ಎಂದು ಸುಮಿತ್ ಶೆಟ್ಟಿ ಆರೋಪಿಸಿದರು. ಮುಂದಿನ ಸಭೆಗೆ ಹಾಜರಾಗುವಂತೆ ಅಧಿಕಾರಿಗೆ ಸೂಚಿಸಲು ಸಭೆ ನಿರ್ಣಯಿಸಿತು. ತಮಗೆ ಯೋಜನಾ ಸಮಿತಿ ಹಾಗೂ ಸ್ಥಾಯಿ ಸಮಿತಿ ಸಭೆಯ ನೋಟೀಸು ತಡವಾಗಿ ತಲುಪಿದ್ದು, ಇದರಿಂದ ಇವುಗಳಲ್ಲಿ ಭಾಗವಹಿಸಲಾಗಿಲ್ಲ ಎಂದು ಜನಾರ್ದನ ತೋನ್ಸೆ ದೂರಿದರು. ಈ ಬಗ್ಗೆ ಎಲ್ಲಿ ಪ್ರಮಾದವಾಗಿದೆ ಎಂದು ಪರಿಶೀಲಿಸಿ ಹಿಂದಿನಂತೆ ನೋಟಿಸು ತಲುಪಲು ವ್ಯವಸ್ಥೆ ಮಾಡುವುದಾಗಿ ಸಿಇಓ ತಿಳಿಸಿದರು.

ಪ್ಲಾಸ್ಟಿಕ್ ನಿಷೇಧ ಚರ್ಚೆ: ಜಿಲ್ಲೆಯಲ್ಲಿ ಪ್ಲಾಸ್ಟಿಕ್ ನಿಷೇಧವಾಗಿದ್ದರೂ ಎಲ್ಲಡೆ ಈಗಲೂ ಪ್ಲಾಸ್ಟಿಕ್ ಬಳಕೆಯಾಗುತ್ತದೆ. 2016ರ ಪ್ಲಾಸ್ಟಿಕ್ ನಿಷೇಧ ಕಾಯ್ದೆಯ ಅನ್ವಯ ಇಡೀ ಜಿಲ್ಲೆಯಲ್ಲಿ ಪ್ಲಾಸ್ಟಿಕ್ ನಿಷೇಧ ಕಾಯ್ದೆಯನ್ನು ಕಾರ್ಯರೂಪಕ್ಕೆ ತರಬೇಕಾದರೆ ಎಲ್ಲಾ ಗ್ರಾಪಂ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಪ್ಲಾಸ್ಟಿಕ್ ನಿಷೇಧ ಜಾರಿಯಾಗಬೇಕು ಎಂದು ಸದಸ್ಯರು ಅಭಿಪ್ರಾಯ ವ್ಯಕ್ತಪಡಿಸಿದರು.

ಪ್ಲಾಸ್ಟಿಕ್ ನಿಷೇಧ ಒಂದು ಗ್ರಾಪಂನಲ್ಲಿ ಆದರೆ ಸಾಲದು. ಗ್ರಾಮ ಹಾಗೂ ನಗರ ಪ್ರದೇಶದಲ್ಲಿ ಎರಡೂ ಕಡೆ ಖಾಸಗಿ ಕಾರ್ಯಕ್ರಮಗಳು, ಮದುವೆ ಹಾಗೂ ಕಲ್ಯಾಣ ಮಂಟಪಗಳಲ್ಲಿ ಪ್ಲಾಸ್ಟಿಕ್ ಬಳಕೆಯನ್ನು ನಿಲ್ಲಿಸಬೇಕು. ಕೇವಲ ಪ್ಲಾಸ್ಟಿಕ್ ಬಳಕೆ ನಿಷೇಧಿಸಿದರೆ ಸಾಲದು ಪ್ಲಾಸ್ಟಿಕ್ ಉತ್ಪನ್ನಗಳನ್ನು ಉತ್ಪಾದಿಸುವ ಘಟಕಗಳ ಸ್ಥಾಪನೆಗೆ ಅವಕಾಶ ನೀಡದೆ ಪ್ಲಾಸ್ಟಿಕ್ ಉತ್ಪಾದನೆಗಳ ಮೇಲೆ ಕಡಿವಾಣ ಹಾಕಬೇಕು. ಈಗಾಗಲೇ ವಂಡ್ಸೆಯಲ್ಲಿ ಬಟ್ಟೆ ಬ್ಯಾಗ್‌ಗಳ ತಯಾರಿಕಾ ಘಟಕವನ್ನು ಸ್ಥಾಪಿಸಲಾಗಿದೆ. ಈ ರೀತಿ ಎಲ್ಲಾ ಗ್ರಾಮಗಳಲ್ಲೂ ನಡೆದರೆ ಪ್ಲಾಸ್ಟಿಕ್ ಬಳಕೆಯನ್ನು ಸಂಪೂರ್ಣ ನಿಷೇಧಿಸಬಹುದು ಎಂದು ಮುಖ್ಯ ಯೋಜನಾಧಿಕಾರಿ ಶ್ರೀನಿವಾಸ ರಾವ್ ತಿಳಿಸಿದರು.

ರಾಷ್ಟ್ರೀಯ ಹೆದ್ದಾರಿ ಹಾದು ಹೋಗುವ ನಾವುಂದ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಪೈಪ್‌ಲೈನ್ ಕಾಮಗಾರಿ ಆರಂಭವಾಗಿ 5 ತಿಂಗಳಾದರೂ ಸಹ ಈವರೆಗೂ ಕಾಮಗಾರಿ ಪೂರ್ಣಆಗದಿರುವ ಬಗ್ಗೆ ಚರ್ಚೆ ನಡೆಯಿತು. ಈ ಬಗ್ಗೆ ಸಂಬಂಧ ಪಟ್ಟ ಅಧಿಕಾರಿ ಮಾತನಾಡಿ, ಹಳೇ ಪೈಪ್‌ಲೈನ್ ಈಗಾಗಲೇ ಇದ್ದು, ಹೊಸ ಪೈಪ್‌ಲೈನ್‌ನ ಬೇಡಿಕೆ ಬಂದಿದೆ.ಆದ್ರೆ ಹೊಸ ಪೈಪ್ ಲೈನ್ ಅಳವಡಿಸಲು ಭೂಸ್ವಾಧೀನ ಮಾಡಬೇಕಾಗಿದೆ. ಈ ಪ್ರಕ್ರಿಯೆ ಪೂರ್ಣ ಗೊಂಡ ಬಳಿಕವಷ್ಟೆ ಹೊಸ ಪೈಪ್ ಲೈನ್ ನೀಡಲಾಗುತ್ತದೆ. ಭೂಸ್ವಾಧೀನ ಪ್ರಕ್ರಿಯೆ ನಡೆದರೆ ಒಂದೂವರೆ ತಿಂಗಳೊಳಗೆ ನೀರಿನ ಪೈಪ್‌ಲೈನ್ ಒದಗಿಸಿ ಕೊಡುವ ಭರವಸೆಯನ್ನು ಅವರು ನೀಡಿದರು.

ಸಭೆಯಲ್ಲಿ ಸಾಮಾಜಿಕ ಪಿಂಚಣಿಗಳು ಸಕಾಲಕ್ಕೆ ತಲುಪದಿರುವ ಬಗ್ಗೆ ಚರ್ಚೆಯಾಯಿತು ಇದಕ್ಕೆ ಉತ್ತರಿಸಿದ ಉಡುಪಿ ತಹಶೀಲ್ದಾರ್, ಖಜಾನೆ ತಂತ್ರಾಂಶದ ಕೆ2 ನಿಂದಾಗಿ ಕೆಲವೊಂದು ಸಮಸ್ಯೆಗಳಿವೆ. ಅಲ್ಲದೇ ಒಂದೇ ಕುಟುಂಬದ ಇಬ್ಬರು ಫಲಾನುಭವಿಗಳಿಗೂ ಒಂದೇ ಆಧಾರ್ ಸಂಖ್ಯೆ ಜೋಡಣೆಯಾಗಿದ್ದು ಸಮಸ್ಯೆಯಾಗಿದೆ. ಈ ಬಗ್ಗೆ ಖಜಾನೆ ಅಧಿಕಾರಿಯೊಂದಿಗೆ ಚರ್ಚಿಸಿದ್ದು, ಪ್ರಕರಣವನ್ನು ಗುರುತಿಸಿ ಪಿಂಚಣಿ ಮೊತ್ತವನ್ನು ಫಲಾನುವಿಗಳಿಗೆ ವಿತರಣೆ ಮಾಡುವುದಾಗಿ ತಿಳಿಸಿದರು.

ಸಭೆಯಲ್ಲಿ ಉಡುಪಿ ಶಾಸಕ ಕೆ.ರಘುಪತಿ ಟ್, ಬೈಂದೂರು ಶಾಸಕ ಸುಕುಮಾರ್ ಶೆಟ್ಟಿ, ಕುಂದಾಪುರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ, ಜಿಪಂ ಉಪಕಾರ್ಯದರ್ಶಿ ನಾಗೇಶ್ ರಾಯ್ಕರ್, ಮುಖ್ಯ ಯೋಜನಾಧಿಕಾರಿ ಶ್ರೀನಿವಾಸ್ ರಾವ್, ಸ್ಥಾಯಿ ಸಮಿತಿ ಅಧ್ಯಕ್ಷರಾದ ಬಾಬು ಶೆಟ್ಟಿ, ಶಶಿಕಾಂತ್ ಪಡುಬಿದ್ರೆ ಉಪಸ್ಥಿತರಿದ್ದರು.

‘ಜಿಂಕೆ ಸಂಚಾರ ತಡೆಯಲು ರಸ್ತೆಗೆ ತಡೆಬೇಲಿ ಹಾಕಿ’

ಹಾವಂಜೆ ಗ್ರಾಪಂ ವ್ಯಾಪ್ತಿಯ ಮುಖ್ಯ ರಸ್ತೆಗೆ ತಾಗಿಕೊಂಡಿರುವ ಮೀಸಲು ಅರಣ್ಯ ಪ್ರದೇಶದಲ್ಲಿ ಜಿಂಕೆಗಳು ಓಡಾಡುತ್ತಿವೆ. ಜಿಂಕೆಗಳು ರಸ್ತೆ ದಾಟುವ ಸಂದರ್ಭದಲ್ಲಿ ದ್ವಿಚಕ್ರ ವಾಹನ ಚಾಲಕರು ತೊಂದರೆಗೊಳಗಾಗುತ್ತಾರೆ. ಒಂದಿಬ್ಬರು ಬೈಕ್ ಸವಾರರು ಜಿಂಕೆಯ ಕೊಂಬಿನ ತಿವಿತದಿಂದ ಸಾವನ್ನಪ್ಪಿದ್ದಾರೆ. ಹೀಗಾಗಿ ಜಿಂಕೆಗಳು ರಸ್ತೆ ದಾಟುವ ಪ್ರದೇಶದುದ್ದಕ್ಕೂ ತಡೆಬೇಲಿ ನಿರ್ಮಿಸಿ ಎಂಬ ತಮ್ಮ ಬಹುಕಾಲದ ಬೇಡಿಕೆಯನ್ನು ಇಂದು ಮತ್ತೊಮ್ಮೆ ಜನಾರ್ದನ ತೋನ್ಸೆ ಸಭೆಯ ಮುಂದಿಟ್ಟು, ಅರಣ್ಯ ಇಲಾಖೆಯಿಂದ ಉತ್ತರ ಬಯಸಿದರು.

ಇದಕ್ಕೆ ಉತ್ತರಿಸಿದ ಕಾರ್ಕಳ ವನ್ಯಜೀವಿ ವಿಭಾಗದ ಡಿಎಫ್‌ಒ ರುದ್ರನ್, ವನ್ಯಜೀವಿಗಳು ಓಡಾಟ ಹೆಚ್ಚಾಗಿರುವ ಕಡೆ ರಸ್ತೆ ಬದಿಗಳಲ್ಲಿ ವಾಹನ ಚಾಲಕ ರಿಗಾಗಿ ಎಚ್ಚರಿಕೆ ಫಲಕ ಹಾಕಲಾಗುತ್ತದೆ. ಅದೇ ರೀತಿ ಉಡುಪಿ ವಲಯದಿಂದ ಈಗಾಗಲೇ ಇಲ್ಲಿ ಎಚ್ಚರಿಕೆ ಫಲಕ ಅಳವಡಿಸಲಾಗಿದೆ. ಇನ್ನು ವೇಗ ತಡೆಗಾಗಿ ರಸ್ತೆಯ ಅಲ್ಲಲ್ಲಿ ಹಂಪ್ಸ್ ನಿರ್ಮಿಸಲು ಲೋಕೋಪಯೋಗಿ ಇಲಾಖೆ ಕ್ರಮ ತೆಗೆದುಕೊಳ್ಳಲಿದೆ ಎಂದರು.

ಮೀಸಲು ಅರಣ್ಯದ ರಸ್ತೆಗಳಲ್ಲಿ ತಡೆ ಬೇಲಿ ನಿರ್ಮಿಸಲು, ಪ್ಲೈಓವರ್ ನಿರ್ಮಿಸಲು ಅವಕಾಶಗಳಿಲ್ಲ ಎಂದಾಗ ಸದಸ್ಯರು ಹಾಗೂ ಅಧಿಕಾರಿಗಳ ನಡುವೆ ಕೆಲ ಹೊತ್ತು ಮಾತಿನ ಚಕಮಕಿ ನಡೆಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X