Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಮಾಜಿ ಶಾಸಕ ಜೆ.ಡಿ.ನಾಯಕ್ ಮರಳಿ...

ಮಾಜಿ ಶಾಸಕ ಜೆ.ಡಿ.ನಾಯಕ್ ಮರಳಿ ಕಾಂಗ್ರೆಸ್‌ಗೆ

ಬಿಜೆಪಿಯ ಹಿಂದುತ್ವದಿಂದ ಬೇಸತ್ತು ವಾಪಸ್: ಸಚಿವ ದೇಶಪಾಂಡೆ

ವಾರ್ತಾಭಾರತಿವಾರ್ತಾಭಾರತಿ20 Feb 2019 8:32 PM IST
share
ಮಾಜಿ ಶಾಸಕ ಜೆ.ಡಿ.ನಾಯಕ್ ಮರಳಿ ಕಾಂಗ್ರೆಸ್‌ಗೆ

ಬೆಂಗಳೂರು, ಫೆ. 20: ಲೋಕಸಭೆ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಉತ್ತರ ಕನ್ನಡ ಜಿಲ್ಲೆ ಭಟ್ಕಳ ಕ್ಷೇತ್ರದ ಮಾಜಿ ಶಾಸಕ ಜೆ.ಡಿ.ನಾಯಕ್ ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಮರಳಿದ್ದಾರೆ. ಕಳೆದ ಚುನಾವಣೆಯಲ್ಲಿ ಬಿಜೆಪಿಗೆ ಸೇರ್ಪಡೆಯಾಗಿದ್ದ ಅವರನ್ನು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಸಚಿವ ದೇಶಪಾಂಡೆ ಪಕ್ಷದ ಬಾವುಟ ನೀಡಿ ಪಕ್ಷಕ್ಕೆ ಬರಮಾಡಿಕೊಂಡರು.

ಹಿಂದುತ್ವದಿಂದ ಬೇಸತ್ತು ಪಕ್ಷಕ್ಕೆ ವಾಪಸ್: ಬುಧವಾರ ಕೆಪಿಸಿಸಿ ಕಚೇರಿಯಲ್ಲಿ ಏರ್ಪಡಿಸಿದ್ದ ಸರಳ ಸಮಾರಂಭದಲ್ಲಿ ಜೆ.ಡಿ. ನಾಯಕ್ ಅವರನ್ನು ಪಕ್ಷಕ್ಕೆ ಸ್ವಾಗತಿಸಿದ ಬಳಿಕ ಮಾತನಾಡಿದ ಸಚಿವ ಆರ್.ವಿ.ದೇಶಪಾಂಡೆ, ಬಿಜೆಪಿಯ ಹಿಂದುತ್ವಕ್ಕೆ ಬೇಸತ್ತು ಜೆ.ಡಿ.ನಾಯಕ್ ಅವರು ಕಾಂಗ್ರೆಸ್ ವಾಪಸಾಗಿದ್ದಾರೆ ಎಂದು ಹೇಳಿದರು.

ಬಿಜೆಪಿಯಲ್ಲಿ ಹಿಂದುತ್ವ ಎಂದರೆ ಬರೀ ಕೋಮುವಾದ, ವೈಷಮ್ಯದ ರಾಜಕಾರಣ. ಅಲ್ಲಿ ಸಮಾನತೆ ಇಲ್ಲ. ಕಾಂಗ್ರೆಸ್‌ನಲ್ಲಿ ಮಾತ್ರ ಜಾತ್ಯತೀತ ತತ್ವಗಳಿಗೆ ಅವಕಾಶಗಳಿವೆ. ಕೇವಲ ರಾಜಕಾರಣಕ್ಕಾಗಿ ಹಿಂದುತ್ವ ಬಳಸಿಕೊಳ್ಳುತ್ತಿರುವುದರಿಂದ ಮಾಜಿ ಶಾಸಕ ಜೆ.ಡಿ.ನಾಯಕ್ ಅವರಂತಹ ಹಲವು ಮುಖಂಡರು ಬೇಸರಗೊಂಡಿದ್ದಾರೆಂದು ಅವರು ಹೇಳಿದರು.

ನಾನು ಲೋಕಸಭೆ ಚುನಾವಣೆಗೆ ಸ್ಪರ್ಧಿಸುತ್ತೇನೆ. ಆ ಹಿನ್ನೆಲೆಯಲ್ಲಿ ಜೆ.ಡಿ.ನಾಯಕ್ ಅವರನ್ನು ಕಾಂಗ್ರೆಸ್‌ಗೆ ಮರಳಿ ಕರೆತರಲಾಗಿದೆ ಎನ್ನುವುದು ಆಧಾರ ರಹಿತ. ಸುಳ್ಳು ಸುದ್ದಿ ಅಷ್ಟೇ. ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಬಗ್ಗೆ ನಾನು ಆಲೋಚನೆ ಮಾಡಿಲ್ಲ. ಉತ್ತರ ಕನ್ನಡ ಲೋಕಸಭೆ ಕ್ಷೇತ್ರದಲ್ಲಿ ಯಾರು ಅಭ್ಯರ್ಥಿಯಾಗಬೇಕು ಎಂಬುದನ್ನು ಹೈಕಮಾಂಡ್ ನಿರ್ಧಾರ ಮಾಡುತ್ತದೆ ಎಂದು ದೇಶಪಾಂಡೆ ನುಡಿದರು.

ಅನಂತ್‌ಕುಮಾರ್ ಹೆಗಡೆ ಐದು ಬಾರಿ ಸಂಸದರಾಗಿ ಉತ್ತರ ಕನ್ನಡ ಕ್ಷೇತ್ರವನ್ನು ಸ್ಪರ್ಧಿಸಿದ್ದಾರೆ. ಆದರೆ, ಕ್ಷೇತ್ರದ ಅಭಿವೃದ್ಧಿಗೆ ಅವರ ಕೊಡುಗೆ ಶೂನ್ಯ. ಸಂಸತ್‌ನಲ್ಲೂ ಅವರು ಕ್ರಿಯಾಶೀಲರಾಗಿಲ್ಲ. ಕೇವಲ ಪ್ರಚೋದನಕಾರಿ ಭಾಷಣ ಮಾಡಿ ಕೋಮು ವೈಷಮ್ಯ ಸೃಷ್ಟಿಸಿದ್ದೇ ಅವರ ಸಾಧನೆ. ಅಭಿವೃದ್ಧಿ ಕಾರ್ಯಗಳಲ್ಲಿ ಅವರ ಸಾಧನೆ ಶೂನ್ಯ ಎಂದು ಕಿಡಿಕಾರಿದರು.

ಜೆ.ಡಿ.ನಾಯಕ್ ಭಟ್ಕಳ ಕ್ಷೇತ್ರದಲ್ಲಿ ಎರಡು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. ನನ್ನ ಹಳೆಯ ಸ್ನೇಹಿತರು. ಅವರು ಮರಳುವಿಕೆಯಿಂದ ಜಿಲ್ಲೆಯಲ್ಲಿ ಪಕ್ಷದ ಬಲವರ್ಧನೆಗೆ ಮತ್ತಷ್ಟು ಬಲ ಬರಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದರು.

‘ಲೋಕಸಭೆ ಸೀಟು ಹಂಚಿಕೆ ಸಂಬಂಧ ಜೆಡಿಎಸ್ ವರಿಷ್ಠ ದೇವೇಗೌಡ ಅವರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಲಾಗುವುದು. ಈ ವಿಚಾರದಲ್ಲಿ ಯಾರೂ ಭಿಕ್ಷುಕರಲ್ಲ. ಈ ಸಂಬಂಧ ಸಿಎಂ ಜತೆ ಚರ್ಚಿಸಿದ್ದು, ಯಾವುದೇ ಗೊಂದಲವಿಲ್ಲ. ಹೇಳಿಕೆಗಳನ್ನು ಆಧರಿಸಿ ರಾಜಕಾರಣ ಸಾಧ್ಯವಿಲ್ಲ’

-ದಿನೇಶ್ ಗುಂಡೂರಾವ್, ಕೆಪಿಸಿಸಿ ಅಧ್ಯಕ್ಷ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X