Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪಾರದರ್ಶಕ ಆಡಳಿತಕ್ಕೆ ತಂತ್ರಜ್ಞಾನದ...

ಪಾರದರ್ಶಕ ಆಡಳಿತಕ್ಕೆ ತಂತ್ರಜ್ಞಾನದ ಸಮನ್ವಯ ಅಗತ್ಯ: ಸಂಸದೆ ಶೋಭಾ ಕರಂದ್ಲಾಜೆ

ವಾರ್ತಾಭಾರತಿವಾರ್ತಾಭಾರತಿ21 Feb 2019 8:43 PM IST
share
ಪಾರದರ್ಶಕ ಆಡಳಿತಕ್ಕೆ ತಂತ್ರಜ್ಞಾನದ ಸಮನ್ವಯ ಅಗತ್ಯ: ಸಂಸದೆ ಶೋಭಾ ಕರಂದ್ಲಾಜೆ

ಉಡುಪಿ, ಫೆ.21: ತಾಂತ್ರಿಕವಾಗಿ ಲಭ್ಯವಿರುವ ಅವಕಾಶಗಳನ್ನು ಆಡಳಿತ ನಿರ್ವಹಣೆಗೆ ಪೂರಕವಾಗಿ ಬಳಕೆ ಮಾಡಿಕೊಂಡು ನಾಗರಿಕರಿಗೆ ಉತ್ತಮ ಸೇವೆ ನೀಡಬಹುದಾಗಿದೆ ಎಂದು ಉಡುಪಿ-ಚಿಕ್ಕಮಗಳೂರು ಸಂಸದರಾದ ಶೋಭಾ ಕರಂದ್ಲಾಜೆ ಹೇಳಿದ್ದಾರೆ.

ಗುರುವಾರ ಕಾಡೂರು ಗ್ರಾಪಂ ವ್ಯಾಪ್ತಿಯಲ್ಲಿ ಸಂಸದರ ಆದರ್ಶ ಗ್ರಾಮ ಯೋಜನೆ ಅನುಷ್ಠಾನದ ಹಿನ್ನೆಲೆಯಲ್ಲಿ ಹಮ್ಮಿಕೊಂಡಿದ್ದ ಮಹಿಳಾ ಗ್ರಾಮ ಸಭೆ, ಎರಡನೇ ಹಂತದ ಗ್ರಾಮ ಸಭೆ, ಮಹಿಳಾ ಒಕ್ಕೂಟದ ರಚನೆ ಹಾಗೂ ನಗದು ರಹಿತ ವರ್ಗಾವಣೆ( ಕ್ಯಾಷ್‌ಲೆಸ್) ಕುರಿತ ‘ಯುವ ಪೇ’ ತಂತ್ರಾಂಶದ ಸಾಂಕೇತಿಕ ಚಾಲನಾ ಕಾರ್ಯಕ್ರಮದಲ್ಲಿ ಅವರು ಮಾತನಾಡುತಿದ್ದರು.

ಕಾಡೂರು -ನಡೂರಿನಂತಹ ಗ್ರಾಮೀಣ ಪ್ರದೇಶಗಳಲ್ಲಿ ಪ್ರಧಾನ ಮಂತ್ರಿಗಳ ಮಹತ್ವಾಕಾಂಕ್ಷೆಯ ಡಿಜಿಟಲ್ ಇಂಡಿಯಾದ ಪರಿಕಲ್ಪನೆಯನ್ನು ಅನುಷ್ಠಾನ ಮಾಡಲು ರಾಜ್ಯದಲ್ಲಿ ಮೊದಲ ಬಾರಿಗೆ ತಂತ್ರಾಂಶದ ಮೂಲಕ ಪಂಚಾಯತ್ ತೆರಿಗೆ ವಸೂಲಾತಿಗೆ ಕ್ರಮ ಕೈಗೊಂಡಿರುವುದು ಪ್ರಶಂಸನೀಯ ಎಂದರು.

ಕಾಡೂರು ಗ್ರಾಪಂ ಸದಸ್ಯ ಸುರೇಶ್ ಶೆಟ್ಟಿ ಮಾತನಾಡಿ, ಸಂಸದರ ಆದರ್ಶ ಗ್ರಾಮ ಯೋಜನೆಯ ಮೂಲಕ ಸಮಗ್ರ ಅಭಿವೃದ್ಧಿಗೆ ಅವಕಾಶ ದೊರೆತಿದ್ದು, ವಿವಿಧ ಇಲಾಖೆಗಳ ಸಮನ್ವಯದೊಂದಿಗೆ ಸಮಗ್ರವಾಗಿ ಅಭಿವೃದ್ಧಿ ಪಡಿಸುವ ಯೋಜನೆ ರೂಪಿಸಲಾಗಿದೆ. ಸಮಯಾವಕಾಶದ ಉಳಿಕೆ, ಪಾರದರ್ಶಕತೆ ಹಾಗೂ ನಾಗರಿಕ ಸ್ನೇಹಿ ಆಡಳಿತಕ್ಕೆ ತಂತ್ರಜ್ಞಾನದ ಬಳಕೆಯ ಅಗತ್ಯವನ್ನು ಪ್ರತಿಪಾದಿಸಿದ ಅವರು, ಸಮರ್ಪಕವಾಗಿ ಮೂಲ ಸೌಕರ್ಯಗಳನ್ನು ಒದಗಿಸುವ ಮೂಲಕ ಕಾಡೂರು ಗ್ರಾಪಂನ್ನು ಮಾದರಿಯಾಗಿ ರೂಪಿಸುವ ಪಣ ತೊಟ್ಟಿರು ವುದಾಗಿ ತಿಳಿಸಿದರು.

ಯುವ ಪೇ ಆ್ಯಪ್ ಮೂಲಕ ಮನೆ ತೆರಿಗೆ, ನೀರಿನ ದರ, ಸ್ವಚ್ಚತಾ ಶುಲ್ಕದ ಸಂಗ್ರಹ, ಮಹಿಳಾ ಒಕ್ಕೂಟದ ಸದಸ್ಯರಿಗೆ ಸಂಜೀವಿನಿ ಯೋಜನೆಯಡಿ ಸ್ವಾವಲಂಬನೆ ಚಟುವಟಿಕೆಗಳಿಗೆ ಸಹಾಯಧನ ಸೌಲ್ಯ. ಇಲಾಖಾ ಸಮನ್ವಯದ ಮೂಲಕ ವೈಯಕ್ತಿಕ ಹಾಗೂ ಸಾಮೂಹಿಕ ಕಾಮಗಾರಿಗಳ ಅನುಷ್ಠಾನ, ಮೂಲ ಸೌಕರ್ಯ ಅಭಿವೃದ್ಧಿ ಆದ್ಯತೆ ಹಾಗೂ ಅನುದಾನ ನೀಡಿಕೆ, ಮತದಾನ ಜಾಗೃತಿಯ ಕಾರ್ಯ ಚಟುವಟಿಕೆಗಳಿಗೆ ತಂತ್ರಜ್ಞಾನದ ಪರಿಣಾಮ ಕಾರಿ ಬಳಕೆಯ ಕುರಿತ ಕಾರ್ಯಕ್ರಮ ನಡೆಯಿತು.

ಕಾಡೂರು ಗ್ರಾಪಂ ಅಧ್ಯಕ್ಷ ಆನಂದ ನಾಯ್ಕ, ಚಾರ್ಜ್ ಆಫೀಸರ್ ಅಡಿಗ, ನೊಡೇಲ್ ಅಧಿಕಾರಿ ಚಂದ್ರಶೇಖರ್ ಶೆಟ್ಟಿ, ಬ್ರಹ್ಮಾವರ ಸಿಡಿಪಿಒ ಶೋಭಾ, ವೈದ್ಯಾಧಿಕಾರಿ ಅನಿಲ್ ಕುಮಾರ್, ಆರೋಗ್ಯ ಅಧಿಕಾರಿ ರಕ್ಷಿತ್, ಪಶು ವೈದ್ಯಕೀಯ ಇಲಾಖೆಯ ಪ್ರದೀಪ್ ಕುಮಾರ್, ಸಂಜೀವಿನಿ ಯೋಜನೆಯ ಸಮನ್ವಯ ಅಧಿಕಾರಿ ಪಾಂಡುರಂಗ ಉಪಸ್ಥಿತರಿದ್ದರು.

ನಾಗರಿಕರಿಗೆ ಮತದಾನ ಜಾಗೃತಿ ಪ್ರತಿಜ್ಞೆಯನ್ನು ಬೋಧಿಸಿ, ಮಾಹಿತಿಯನ್ನು ನೀಡಲಾಯಿತು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮಹೇಶ್ ಕೆ. ಕಾರ್ಯ ಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X