ಫೆ.25ಕ್ಕೆ ಉಚಿತ ಆರೋಗ್ಯ ತಪಾಸಣಾ ಶಿಬಿರ
ಉಡುಪಿ, ಫೆ. 22: ಉಡುಪಿ ಜಿಲ್ಲಾ ಆಸ್ಪತ್ರೆಯಲ್ಲಿ ಫೆ.25ರಂದು ಬೆಳಗ್ಗೆ 9 ರಿಂದ ಅಪರಾಹ್ನ 1 ರವರೆಗೆ ಎನ್‌ಪಿಸಿಡಿಸಿಎಸ್ ಹಾಗೂ ಎನ್‌ಟಿಸಿಪಿ ಕಾರ್ಯಕ್ರಮದಡಿ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಇವರ ಸಹಯೋಗ ದೊಂದಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಜಿಲ್ಲಾ ಆಸ್ಪತ್ರೆಯಲ್ಲಿ ಹಮ್ಮಿಕೊಳ್ಳಲಾಗಿದೆ.
ಸಾರ್ವಜನಿಕರು ಈ ಶಿಬಿರದ ಸದುಪಯೋಗ ಪಡೆದುಕೊಳ್ಳುವಂತೆ ಜಿಲ್ಲಾ ಆಸ್ಪತ್ರೆಯ ಜಿಲ್ಲಾ ಶಸ್ತ್ರಚಿಕಿತ್ಸಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story





