Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಇಲಾಖೆಗಳ ಸಮನ್ವಯದಿಂದ ವಿಕಲಚೇತನರ...

ಇಲಾಖೆಗಳ ಸಮನ್ವಯದಿಂದ ವಿಕಲಚೇತನರ ಅಭಿವೃದ್ಧಿ: ಬಸವರಾಜು

ವಾರ್ತಾಭಾರತಿವಾರ್ತಾಭಾರತಿ22 Feb 2019 11:19 PM IST
share
ಇಲಾಖೆಗಳ ಸಮನ್ವಯದಿಂದ ವಿಕಲಚೇತನರ ಅಭಿವೃದ್ಧಿ: ಬಸವರಾಜು

ಮಂಗಳೂರು, ಫೆ. 22: ದ.ಕ.ಜಿಲ್ಲೆಯಲ್ಲಿ ವಿಕಲಚೇತನರು ಅದರಲ್ಲೂ ಎಂಡೋಸಲ್ಫಾನ್ ಪೀಡಿತರಿಗಾಗಿ ಪುನರ್ವಸತಿಯ ಪರಿಕಲ್ಪನೆಯಲ್ಲಿ ಇನ್ನೊಂದು ಹಂತಕ್ಕೆ ಏರುವ ಅಗತ್ಯವಿದೆ ಎಂದು ವಿಕಲಚೇತನ ವ್ಯಕ್ತಿಗಳ ಅಧಿನಿಯಮದ ರಾಜ್ಯ ಆಯುಕ್ತ ಎಸ್. ಬಸವರಾಜು ಅಭಿಪ್ರಾಯಪಟ್ಟರು.

2016ರ ವಿಕಲಚೇತನ ಹಕ್ಕುಗಳ ಅಧಿನಿಯಮದ ಬಗ್ಗೆ ಅರಿವು ಮೂಡಿಸುವುದು ಹಾಗೂ ವಿಕಲಚೇತನ ವ್ಯಕ್ತಿಗಳ ಹಕ್ಕುಗಳ ರಕ್ಷಣೆ ಕುರಿತು ಶುಕ್ರವಾರ ದ.ಕ.ಜಿಪಂ ನೇತ್ರಾವತಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.

ಸಮಾಜದಲ್ಲಿ ವಿಕಲಚೇತನರನ್ನು ಕಟ್ಟಕಡೆಯ ವರ್ಗದ ಜನತೆಯನ್ನಾಗಿ ಪರಿಗಣಿಸಲಾಗುತ್ತಿದೆ. ಆದ್ದರಿಂದ ಪ್ರತಿಯೊಬ್ಬರು ವಿಕಲಚೇತನರ ಸಮಸ್ಯೆಗಳನ್ನು ಅರಿತು ತುರ್ತಾಗಿ ಸ್ಪಂದಿಸುವುದು ಮತ್ತು ಅವರ ಬೆಳವಣಿಗೆಯನ್ನು ಬೆಂಬಲಿಸುವ ಅಗತ್ಯವಿದೆ. ಗುರುವಾರ ಬೆಳ್ತಂಗಡಿಯಲ್ಲಿ ಎಂಡೋಸಲ್ಫಾನ್ ಪೀಡಿತರ ಪರಿಸ್ಥಿತಿಯನ್ನು ನೇರ ಭೇಟಿಯ ಮುಖಾಂತರ ಅರಿತಿದ್ದು, ಶುಶ್ರೂಷೆಯ ಜೊತೆಗೆ ಅವರ ಪುನರ್ವಸತಿ ಹಾಗೂ ಕೌಶಲ್ಯ ಅಭಿವೃದ್ಧಿಗೆ ಯೋಜನೆಗಳನ್ನು ರೂಪಿಸಬೇಕಾಗಿದೆ. ಸಬಲೀಕರಣ, ಶಿಕ್ಷಣ ಹಾಗೂ ಉತ್ಪಾದಕತೆಯ ದೃಷ್ಟಿಯಲ್ಲಿರಿಸಿ ಅವರ ಅಭಿವೃದ್ಧಿಗೆ ಮಾನದಂಡಗಳನ್ನು ರಚಿಸಲು ಬಸವರಾಜ್ ಅಧಿಕಾರಿಗಳಿಗೆ ಸೂಚಿಸಿದರು.

ವಿಕಲಚೇತನರ ನ್ಯೂನ್ಯತೆಯನ್ನು ಪರಿಗಣಿಸದೆ ಸರ್ವಾಂಗೀಣ ದೃಷ್ಟಿಯನ್ನಿರಿಸಿ ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ಹೆಚ್ಚಿನ ಒತ್ತನ್ನು ನೀಡಬೇಕಿದೆ. ಜಿಲ್ಲೆಯಲ್ಲಿ ರೋಗಿಗಳ ಸಂಖ್ಯೆ ಬಹಳಷ್ಟಿದ್ದು ಅಂತಹವರಿಗೆ ವಿಶೇಷ ಕಾಳಜಿ ವಹಿಸಿ ನೆರವು ನೀಡುವ ಅಗತ್ಯವಿದೆ. ಎಂಡೋಸಲ್ಫಾನ್ ಪೀಡಿತ 18 ವರ್ಷದೊಳಗಿನ ಮಕ್ಕಳಿಗೆ ಅಧಿಕಾರಿಗಳು ಪ್ರತೀ ಮನೆ ಮನೆ ಭೇಟಿ ನೀಡಿ ಶಾಲೆಗೆ ಸೇರಿಸುವ ವ್ಯವಸ್ಥೆ ಮಾಡುವಂತೆ ಸಲಹೆ ನೀಡಿದರು.

ಎಂಡೋಸಲ್ಫಾನ್ ಪೀಡಿತರ ಶ್ರೇಯೋಭಿವೃದ್ಧಿ ನಿಟ್ಟಿನಲ್ಲಿ ಮಂಗಳೂರು ವಿಶ್ವ ವಿದ್ಯಾನಿಲಯವು ಸಾಮಾಜಿಕ ಆರ್ಥಿಕ ಅಧ್ಯಯನ ನಡೆಸುವ ಅಗತ್ಯವಿದೆ. ಅಲ್ಲದೆ ವಿಕಲಚೇತನರಿಗೆ ಶಿಕ್ಷಣ, ಹಾಸ್ಟೆಲ್‌ಗಳಲ್ಲಿ ಮೀಸಲಿಡಲಾದ ಸೀಟುಗಳನ್ನು ನೀಡದಿರುವುದನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ಬಸವರಾಜ್ ತಿಳಿಸಿದರು.

ಸಭೆಯಲ್ಲಿ ದ.ಕ. ಜಿಪಂ ಸಿಇಒ ಡಾ. ಸೆಲ್ವಮಣಿ ಆರ್., ಉಪಕಾರ್ಯದರ್ಶಿ ಮಹೇಶ್, ವಿಕಲಚೇತನರ ಕಲ್ಯಾಣಾಧಿಕಾರಿ ಯಮುನಾ ಮತ್ತಿತರರು ಪಾಲ್ಗೊಂಡಿದ್ದರು.

ಮಾಹಿತಿ ನೀಡುತ್ತಿಲ್ಲ: ಎಸ್ಸಿ-ಎಸ್ಟಿಗಳಿಗೆ ಸರಕಾರದಿಂದ ಸಿಗುವ ವಿವಿಧ ಯೋಜನೆಗಳ ಬಗ್ಗೆ ಅಧಿಕಾರಿಗಳು ಸಕಾಲಕ್ಕೆ ಮಾಧ್ಯಮಗಳ ಮೂಲಕ ಮಾಹಿತಿ ನೀಡುತ್ತಾರೆ. ಆದರೆ, ವಿಕಲಚೇತನರ ಕಲ್ಯಾಣಕ್ಕಾಗಿ ಸರಕಾರ ಅನೇಕ ಯೋಜನೆಗಳನ್ನು ಪ್ರಕಟಿಸಿದರೂ ಕೂಡ ಮಾಹಿತಿ ನೀಡುತ್ತಿಲ್ಲ ಎಂದು ವಿಕಲಚೇತನರ ಸಂಘಟನೆಗಳ ಪ್ರಮುಖರು ಅಸಮಾಧಾನ ವ್ಯಕ್ತಪಡಿಸಿದರು. ಈ ಬಗ್ಗೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡು ಆಯುಕ್ತರು ಶಿಸ್ತು ಕ್ರಮದ ಎಚ್ಚರಿಕೆ ನೀಡಿದರು.

ಸುಳ್ಳು ಪ್ರಮಾಣಪತ್ರ ಸೃಷ್ಟಿ: ಉಡುಪಿಯಲ್ಲಿ ಸುಮಾರು 60 ಮಂದಿ ಶಿಕ್ಷಕರು ವಿಕಲಚೇತನರ ನಕಲಿ ಪ್ರಮಾಣಪತ್ರ ಸೃಷ್ಟಿಸಿ ಸರಕಾರಿ ಹುದ್ದೆಗೆ ಸೇರಿದ್ದಾರೆ. ಉಡುಪಿ ವಲಯವೊಂದರಲ್ಲೇ 33 ಶಿಕ್ಷಕರು ಈ ರೀತಿ ವಂಚಿಸಿದ ಬಗ್ಗೆ ಮಾಹಿತಿ ಲಭಿಸಿದೆ. ಇದನ್ನು ಇಲಾಖೆಯು ಗಂಭೀರವಾಗಿ ಪರಿಗಣಿಸಿದ್ದು, ವರದಿ ನೀಡುವಂತೆ ಉಡುಪಿ ಡಿಡಿಪಿಐಗೆ ಸೂಚಿಸಲಾಗಿದೆ ಎಂದು ಪತ್ರಕರ್ತರ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X