Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಆಳುಪ 1ನೇ ಕುಲಶೇಖರನ ತುಳು ಶಾಸನ ಪತ್ತೆ:...

ಆಳುಪ 1ನೇ ಕುಲಶೇಖರನ ತುಳು ಶಾಸನ ಪತ್ತೆ: ತುಳು ಲಿಪಿ, ತುಳು ಭಾಷೆಯಲ್ಲಿ ರಚಿಸಿದ ಶಾಸನ

ವಾರ್ತಾಭಾರತಿವಾರ್ತಾಭಾರತಿ22 Feb 2019 11:30 PM IST
share
ಆಳುಪ 1ನೇ ಕುಲಶೇಖರನ ತುಳು ಶಾಸನ ಪತ್ತೆ: ತುಳು ಲಿಪಿ, ತುಳು ಭಾಷೆಯಲ್ಲಿ ರಚಿಸಿದ ಶಾಸನ

ಮಂಗಳೂರು, ಫೆ.22: ತುಳು ಲಿಪಿ ಮತ್ತು ತುಳು ಭಾಷೆಯಲ್ಲಿ ಬರೆದ ಅತ್ಯಂತ ಪ್ರಾಚೀನ ಶಾಸನ ನಗರದ ಕುಲಶೇಖರದ ಶ್ರೀ ವೀರನಾರಾಯಣ ದೇವಾಲಯದಲ್ಲಿ ಪತ್ತೆಯಾಗಿದೆ.

ಆಳುಪ ಚಕ್ರವರ್ತಿ 1ನೇ ಕುಲಶೇಖರನ ಕಾಲದ ಈ ಶಾಸನವನ್ನು ಸಂಪೂರ್ಣವಾಗಿ ತುಳು ಭಾಷೆಯಲ್ಲಿ ರಚಿಸಲ್ಪಟ್ಟಿರುವುದು ತುಳು ಭಾಷೆ ಹಾಗೂ ಸಂಸ್ಕೃತಿಯ ಅಧ್ಯಯನಕ್ಕೆ ಭದ್ರವಾದ ಬುನಾದಿಯನ್ನು ಒದಗಿಸಿದೆ ಎಂದು ಶಿರ್ವ ಎಂಎಸ್‌ಆರ್‌ಎಸ್ ಕಾಲೇಜಿನ ಇತಿಹಾಸ ಮತ್ತು ಪುರಾತತ್ವ ವಿಭಾಗದ ಪ್ರೊ.ಟಿ.ಮುರುಗೇಶಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಈ ಶಾಸನ ‘ಶ್ರೀ ಹರಿಯೇ ನಮಃ’ ಎಂಬ ಒಂದು ಸಾಲಿನ ಪ್ರಾರ್ಥನಾ ಶ್ಲೋಕದೊಂದಿಗೆ ಆರಂಭವಾಗಿದೆ. ನಂತರ ಶಾಸನದಲ್ಲಿ ಸೌರ ಪಂಚಾಗದ ರೀತಿ ಕಾಲಮಾನವನ್ನು ಉಲ್ಲೇಖಿಸಲಾಗಿದೆ. ಶಾಸನೋಕ್ತ ವರದಿ ಪ್ರಕಾರ ‘ಸಕ್ ಪದರಾಡ್’ ಅಂದರೆ ಶಕ 12, ಮೇಘ ಮಾಸ, ಕೃಷ್ಣ ಪಕ್ಷದಲ್ಲಿ ಧನುಪುಳೇ (9ನೇ ರಾಶಿ) ಅಂದರೆ 9ನೇ ದಿನ ಕಳೆದು ಎಂದು ಅರ್ಥಸಿಕೊಂಡಲ್ಲಿ ಈ ಶಾಸನದ ಕಾಲ ಕ್ರಿ.ಶ. 1159, ಫೆ.10, ಶನಿವಾರಕ್ಕೆ ಸರಿಹೊಂದುತ್ತದೆ. ನಂತರ ಶಾಸನ ಪದಿರಾಡ್ ಊರ್ ಸೀಮೆಲ ಎಂದು ಉಲ್ಲೇಖಿಸಿದ್ದು, ಈ ದೇವಾಲಯ 12 ಊರುಗಳಿಗೆ ಪಿತೃ ದೇವತೆಯಾಗಿತ್ತೆಂದು ತಿಳಿಸುತ್ತದೆ. ಶಾಸನದ 9ನೇ ಸಾಲಿನಲ್ಲಿ ಕುಳೆ ಸೇಖರ ಲೋಕೋಂತಮಾಂತ ಎಂಬ ಉಲ್ಲೇಖದೆ. ಅಂದರೆ ಭುವನ ಅಥವಾ ಲೋಕ ಖ್ಯಾತ ಕುಲಶೇಖರನೆಂದು, ಆಳುಪ ದೊರೆಯನ್ನು ಕೊಂಡಾಡಲಾಗಿದೆ. ಮುಂದಿನ ಸಾಲುಗಳು ನೆಲದಲ್ಲಿ ಹುಗಿದು ಹೋಗಿವೆ. ಶಾಸನದ ಮೂಲ ಉದ್ದೇಶ ಧರ್ಮಸೇನಜ್ಙ ಎಂಬ ವ್ಯಕ್ತಿ ತಾನು ಮಾಡಿದ ಯಾವುದೋ ಪಾಪಕ್ಕೆ ಪ್ರಾಯಶ್ಚಿತ್ತವನ್ನು ಮಾಡಿಕೊಂಡದ್ದನ್ನು ದಾಖಲಿಸುವುದಾಗಿದೆ.

ಶಾಸನದ ಮಹತ್ವ: ಶಾಸನ ಆಳುಪರ ಚರಿತ್ರೆ ಮತ್ತು ತುಳು ಸಾಹಿತ್ಯ ಹಾಗೂ ತುಳು ಲಿಪಿ ಅಧ್ಯಯನದ ದೃಷ್ಟಿಯಿಂದ ಅತ್ಯಂತ ಮಹತ್ವದ ದಾಖಲೆ ಯಾಗಿದೆ. ಈ ಶಾಸನ 1ನೇ ಕುಲಶೇಖರ ಆಳುಪೇಂದ್ರನ ಕುರಿತಾಗಿ ದೊರೆಯುವ ಪ್ರಪ್ರಥಮ ಶಾಸನವಾಗಿದೆ, ಇದುವರೆಗೆ ಕ್ರಿ.ಶ. 1162ರ ಕೊರ್ಸಿ-ಕಾಲ್ತೋಡು ಶಾಸನವನ್ನು ಆತನ ಪ್ರಥಮ ಶಾಸನವೆಂದು ಭಾವಿಸಲಾಗಿತ್ತು. ಆದರೆ ಕುಲಶೇಖರದ ತುಳುಶಾಸನ ಆತನ ಆಳ್ವಿಕೆಯ ಕ್ರಿ.ಶ. 1159ರ ಕಾಲಕ್ಕೆ ಸಂಬಂಧಿಸಿರುವುದರಿಂದ, ಇದೇ ಆತನ ಪ್ರಥಮ ಶಾಸನ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

ಶಾಸನದಲ್ಲಿ ಶುದ್ಧ ತುಳು ಪದಗಳಾದ ಧನುಪುಳೇ, ರತ್ನತೆಂದ್, ಸಕ್, ಪದರಾಡ್, ಪದಿರಾಡ್, ದಿಕ್ಕ್, ಲೋಕೊಂತಮಾಂತ ಮುಂತಾದ ಪದಗಳನ್ನು ಬಳಸಲಾಗಿದೆ. ಆದ್ದರಿಂದ ಈ ಶಾಸನವನ್ನು ತುಳು ಭಾಷೆಯ ಅತ್ಯಂತ ಪ್ರಾಚೀನ ಹಾಗೂ ಪ್ರಪ್ರಥಮ ಶಾಸನವೆಂದು ಪರಿಗಣಿಸಬಹುದಾಗಿದೆ. ಈ ಶಾಸನ ಶೋಧ, ತುಳು ಭಾಷೆಯನ್ನು ಸಂವಿಧಾನದ ಎಂಟನೇ ಪರಿಚ್ಛೇದಕ್ಕೆ ಸೇರ್ಪಡೆಗೊಳಿಸಬೇಕು ಎಂಬ ಹೋರಾಟಕ್ಕೆ ಪ್ರಬಲ ಆಧಾರವಾಗಿದೆ ಎಂದು ಪ್ರೊ.ಟಿ.ಮುರುಗೇಶಿ ತಿಳಿಸಿದ್ದಾರೆ.

ಈ ಶಾಸನ ಅಧ್ಯಯನಕ್ಕೆ ಅಧಿಕೃತವಾಗಿ ಆಹ್ವಾನಿಸಿದ ದ.ಕ.ಜಿಲ್ಲೆಯ ಮುಜರಾಯಿ ಇಲಾಖೆಯ ಅಧಿಕಾರಿಗಳಿಗೆ, ದೇವಾಲಯದ ಆಡಳಿತ ಮಂಡಳಿಗೆ ಕೃತಜ್ಞತೆ ಸಲ್ಲಿಸಿರುವ ಪ್ರೊ.ಟಿ.ಮುರುಗೇಶಿ, ಶಾಸನ ಅಧ್ಯಯನದಲ್ಲಿ ಶ್ರೀ ಧರ್ಮಸ್ಥಳ ಸಂಸ್ಕೃತಿ ಸಂಶೋಧನಾ ಸಂಸ್ಥೆಯ ತುಳು-ಸಂಸ್ಕೃತದ ಹಿರಿಯ ವಿದ್ವಾಂಸ ವಿಘ್ನರಾಜ್, ಸ್ಥಳೀಯರಾದ ವಿಶ್ವಜಿತ್ ಮತ್ತು ವಿದ್ಯಾರ್ಥಿಗಳಾದ ಪ್ರಜ್ಞಾ, ಕೀರ್ತಿ ಮತ್ತು ಶ್ರೇಯಸ್ ಸಹಕರಿಸಿದ್ದಾರೆ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X