Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಬಿಜೆಪಿ ತೊರೆದು ಕಾಂಗ್ರೆಸ್-ಜೆಡಿಎಸ್‌ಗೆ...

ಬಿಜೆಪಿ ತೊರೆದು ಕಾಂಗ್ರೆಸ್-ಜೆಡಿಎಸ್‌ಗೆ ಬನ್ನಿ: ಯೋಗೇಶ್ವರ್ ಬೆಂಬಲಿಗರಿಗೆ ಸಚಿವ ಡಿಕೆಶಿ ಆಹ್ವಾನ

ವಾರ್ತಾಭಾರತಿವಾರ್ತಾಭಾರತಿ23 Feb 2019 10:02 PM IST
share
ಬಿಜೆಪಿ ತೊರೆದು ಕಾಂಗ್ರೆಸ್-ಜೆಡಿಎಸ್‌ಗೆ ಬನ್ನಿ: ಯೋಗೇಶ್ವರ್ ಬೆಂಬಲಿಗರಿಗೆ ಸಚಿವ ಡಿಕೆಶಿ ಆಹ್ವಾನ

ಚನ್ನಪಟ್ಟಣ, ಫೆ.23: ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಅವರದ್ದು, ಬಡವರ ಮಕ್ಕಳನ್ನು ಬಾವಿಗೆ ತಳ್ಳಿ, ಆಳ ನೋಡುವ ಜಾಯಮಾನ. ಅಂತಹ ನಾಯಕನನ್ನು ನಂಬಿ, ಬದುಕು ಮತ್ತು ಭವಿಷ್ಯ ಹಾಳು ಮಾಡಿಕೊಳ್ಳುವ ಬದಲು ಜೆಡಿಎಸ್ ಇಲ್ಲವೇ ಕಾಂಗ್ರೆಸ್ ಸೇರ್ಪಡೆಗೊಳ್ಳುವಂತೆ ಚನ್ನಪಟ್ಟಣದ ಬಿಜೆಪಿ ಕಾರ್ಯಕರ್ತರಿಗೆ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಆಹ್ವಾನ ನೀಡಿದರು.

ಶನಿವಾರ ಚನ್ನಪಟ್ಟಣದಲ್ಲಿ ಸುಮಾರು 745 ಕೋಟಿ ರೂ.ವೆಚ್ಚದ ವಿವಿಧ ಯೋಜನೆಗಳ ಶಂಕುಸ್ಥಾಪನೆ ಮತ್ತು ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ಚನ್ನಪಟ್ಟಣದಲ್ಲಿ ಬಿಜೆಪಿಗೆ ಹೋಗಿ ಅನೇಕರು ಮೋಸ ಹೋಗಿದ್ದಾರೆ. ಯಾರನ್ನೋ ಬದುಕಿಸಲು ಶ್ರಮಪಡುವ ಬದಲು ನಿಮ್ಮ ಬದುಕು, ಭವಿಷ್ಯವನ್ನು ರೂಪಿಸಿಕೊಳ್ಳಲು ಪಕ್ಷಾಂತರ ಮಾಡಿ ಎಂದರು.

ಬಿಜೆಪಿಗೆ ಹೋಗಿದ್ದವರಿಗೆ ತಮ್ಮ ಹಾಗೂ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಮನೆ ಬಾಗಿಲು ಸದಾ ತೆರೆದಿರುತ್ತದೆ. ಬಿಜೆಪಿ ತೊರೆದು, ಜೆಡಿಎಸ್ ಅಥವಾ ಕಾಂಗ್ರೆಸ್ ಪೈಕಿ ಯಾವುದಾದರೂ ಪಕ್ಷ ಸೇರಿ, ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಸಂಸದ ಡಿ.ಕೆ.ಸುರೇಶ್ ಪರ ಕೆಲಸ ಮಾಡಿ ಎಂದು ಅವರು ಹೇಳಿದರು.

ರಾಜ್ಯದಲ್ಲಿರುವ ಸಮ್ಮಿಶ್ರ ಸರಕಾರವನ್ನು ಕೆಡವಿ, ನಮ್ಮನ್ನು ಅಧಿಕಾರದಿಂದ ಕೆಳಗಿಳಿಸಲು ಯೋಗೇಶ್ವರ್ ನಡೆಸಿದ ಸಂಚು ಫಲಿಸಲಿಲ್ಲ. ರಾಮನಗರ ಉಪ ಚುನಾವಣೆಯಲ್ಲಿ ಒಬ್ಬ ಗಂಡನ್ನು ಮೆರವಣಿಗೆಯಲ್ಲಿ ಕರೆದುಕೊಂಡು ಬಂದು, ಅರ್ಜಿ ಹಾಕಿಸಿದರು. ಆದರೆ, ಆ ಗಂಡು ತಾನು ಮೋಸ ಹೋಗಿದ್ದನ್ನು ಮನಗಂಡು ನಮ್ಮ ಬಳಿ ವಾಪಸ್ಸಾದ ಎಂದು ಶಿವಕುಮಾರ್ ವ್ಯಂಗ್ಯವಾಡಿದರು.

ನಾವು ರೆಡಿಮೇಡ್ ಗಂಡುಗಳು: ಕುಮಾರಸ್ವಾಮಿ, ನಾನು, ನನ್ನ ತಮ್ಮ ಡಿ.ಕೆ.ಸುರೇಶ್ ರೆಡಿಮೇಡ್ ಗಂಡುಗಳು. ನಮ್ಮನ್ನು ಸೋಲಿಸಲು ಆಗದು. ಹಾಲು ಕುಡಿದ ಮಕ್ಕಳೇ ಬದುಕೋದಿಲ್ಲ. ಇನ್ನು, ವಿಷ ಕುಡಿದ ಮಕ್ಕಳು ಬದುಕುತ್ತಾವಾ ಎನ್ನುವ ನಾಣ್ಣುಡಿಯೊಂದಿಗೆ ಶಿವಕುಮಾರ್, ತಮ್ಮ ರಾಜಕೀಯ ಕಡುವೈರಿ ಯೋಗೇಶ್ವರ್‌ರನ್ನು ತಮ್ಮ ಭಾಷಣದುದ್ದಕ್ಕೂ ಕುಟುಕಿದರು.

ರಾಜ್ಯದಲ್ಲಿ ಜಾತ್ಯತೀತ ತತ್ವ, ಸಿದ್ಧಾಂತದ ಮೇಲೆ ಅಧಿಕಾರಕ್ಕೆ ಬಂದ ಸಮ್ಮಿಶ್ರ ಸರಕಾರಕ್ಕೆ ಕೆಲಸ ಮಾಡಲು ಕನಿಷ್ಠ 1 ವರ್ಷದ ಅವಕಾಶ ನೀಡುವಷ್ಟೂ ತಾಳ್ಮೆ ಬಿಜೆಪಿ ಅಧ್ಯಕ್ಷ ಯಡಿಯೂರಪ್ಪ ಅವರಿಗೆ ಇಲ್ಲ. ಸರಕಾರ ಕೆಡವಲು ಯಡಿಯೂರಪ್ಪ ಜೊತೆ ಯೋಗೇಶ್ವರ್ ಇನ್ನಿಲ್ಲದ ಕಸರತ್ತು, ಮಸಲತ್ತು ನಡೆಸಿದರು. ಅದ್ಯಾವುದೂ ಕೈಗೂಡಲಿಲ್ಲ. ಮುಂದೆಯೂ ಕೈಗೂಡುವುದಿಲ್ಲ ಎಂದು ಶಿವಕುಮಾರ್ ಹೇಳಿದರು.

ಕುಮಾರಸ್ವಾಮಿ ತಮ್ಮನ್ನು ಗೆಲ್ಲಿಸಿದ ಜನತೆಯ ಋಣ ತೀರಿಸಲು ಚನ್ನಪಟ್ಟಣವನ್ನು ಅಭಿವೃದ್ಧಿಯ ನಾಗಾಲೋಟದಲ್ಲಿ ಕೊಂಡೊಯ್ಯುತ್ತಿದ್ದಾರೆ. ಮತದಾರರ ನಿರೀಕ್ಷೆಗೂ ಮೀರಿ ಕೆಲಸ ಮಾಡಿರುವ ಸಂಸದ ಸುರೇಶ್ ಮತ್ತೊಮ್ಮೆ ಚುನಾವಣೆಗೆ ನಿಮ್ಮ ಮನೆ ಬಾಗಿಲಿಗೆ ಬರಲಿದ್ದು, ಅವರನ್ನು ಬಹುದೊಡ್ಡ ಅಂತರದಿಂದ ಗೆಲ್ಲಿಸಬೇಕು ಎಂದು ಅವರು ಮನವಿ ಮಾಡಿದರು.

ರಾಜ್ಯದಲ್ಲಿ ಸಮ್ಮಿಶ್ರ ಸರಕಾರ ರೈತರಿಗಾಗಿ ರೂಪಿಸುತ್ತಿರುವ ಕಾರ್ಯಕ್ರಮವನ್ನು ಇಡೀ ರಾಷ್ಟ್ರ ನೋಡುತ್ತಿದೆ. ಕೊಟ್ಟ ಮಾತಿನಂತೆ ಕುಮಾರಸ್ವಾಮಿ 45 ಸಾವಿರ ಕೋಟಿ ರೂ.ಬೆಳೆ ಸಾಲ ಮನ್ನಾ ಮಾಡಿದ್ದಾರೆ. ಬಿಜೆಪಿ ನಾಯಕರು ಕ್ಷುಲ್ಲಕ ರಾಜಕಾರಣ ಬಿಟ್ಟು, ಕೇಂದ್ರ ಸರಕಾರದಿಂದಲೂ ರೈತರ ಸಾಲ ಮನ್ನಾ ಮಾಡಿಸಲು ಪ್ರಯತ್ನಿಸಲಿ ಎಂದು ಶಿವಕುಮಾರ್ ಸವಾಲು ಹಾಕಿದರು.

ರಾಮನಗರ-ಚನ್ನಪಟ್ಟಣಕ್ಕೆ ಶಾಶ್ವತ ಕುಡಿಯುವ ನೀರಿನ ಯೋಜನೆ ರೂಪಿಸುವ ಸಂಬಂಧ 15 ವರ್ಷದಿಂದ ಪ್ರಯತ್ನ ನಡೆದಿತ್ತು. ಅದೃಷ್ಟಕ್ಕೆ ಕುಮಾರಸ್ವಾಮಿ ಚನ್ನಪಟ್ಟಣದಿಂದ ಗೆದ್ದು, ಮುಖ್ಯಮಂತ್ರಿ ಆಗಿದ್ದಾರೆ. ಇದೀಗ ಇಲ್ಲಿ ನಡೆಯುತ್ತಿರುವ ಕಾರ್ಯಕ್ರಮ ಐತಿಹಾಸಿಕವಾಗಿದ್ದು, ಇಡೀ ಜಿಲ್ಲೆಯ ಕುಡಿಯುವ ನೀರಿನ ಬವಣೆ ನೀಗುವ ಕಾರ್ಯಕ್ರಮಕ್ಕೆ ಚಾಲನೆ ದೊರೆತಿದೆ ಎಂದು ಶಿವಕುಮಾರ್ ಪ್ರಶಂಸಿಸಿದರು.

ಕುಮಾರಸ್ವಾಮಿ ಈ ಹಿಂದೆ 20 ತಿಂಗಳು ಮುಖ್ಯಮಂತ್ರಿ ಆಗಿದ್ದಾಗ ರಾಮನಗರ ಜಿಲ್ಲೆ ರಚನೆ ಮಾಡಿದರು. ಇದೀಗ ಸ್ವಕ್ಷೇತ್ರ ಚನ್ನಪಟ್ಟಣದ ಜತೆಗೆ ಕರ್ಮಭೂಮಿ ರಾಮನಗರ ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಗೆ ಪಣ ತೊಟ್ಟಿದ್ದಾರೆ. ಅವರ ಜೊತೆ ನಾನೂ ಕೈ ಜೋಡಿಸಿದ್ದೇನೆ ಎಂದು ಅವರು ತಿಳಿಸಿದರು. ಬಜೆಟ್‌ನಲ್ಲಿ ಯೋಜನೆ ಘೋಷಿಸಿದರೆ ರಾಮನಗರ ಜಿಲ್ಲೆಗೆ ಸಿಂಹಪಾಲು ಕೊಟ್ಟರೆಂದು ಪ್ರತಿಪಕ್ಷದವರು ಮತ್ತು ಮಾಧ್ಯಮದವರು ಬೊಬ್ಬೆ ಹೊಡೆಯುತ್ತಿದ್ದರು. ಅದರ ಬದಲು ಆಯಾ ಕಾಲಕ್ಕೆ ಅಗತ್ಯವಾದ ಯೋಜನೆ ಮತ್ತು ಕಾಮಗಾರಿಗಳಿಗೆ ಅನುದಾನ ಬಿಡುಗಡೆ ಮಾಡಿ, ಅನುಷ್ಠಾನಗೊಳಿಸುವುದು ಮುಖ್ಯಮಂತ್ರಿ ಅವರ ಉದ್ದೇಶವಾಗಿದೆ ಎಂದು ಅವರು ತಿಳಿಸಿದರು. 

ನಮ್ಮ ಬಳಿಯೂ ಸಾಕಷ್ಟು ವಿದ್ಯೆಯಿದೆ

ಬಿಜೆಪಿಯವರು ಆಪರೇಷನ್ ಕಮಲ ಕಾರ್ಯಾಚರಣೆ ಮೂಲಕ ಸರಕಾರವನ್ನು ಅಸ್ಥಿರಗೊಳಿಸಲು ಷಡ್ಯಂತ್ರ ರೂಪಿಸುತ್ತಲೇ ಇದ್ದಾರೆ. ನಮ್ಮ ಬಳಿ ಅವರಿಗಿಂತಲೂ ಹೆಚ್ಚು ವಿದ್ಯೆಯಿದೆ. ಆದರೆ, ಅವರಂತೆ ನಾವು ಬಳಸುವುದಕ್ಕೆ ಹೋಗುವವರಲ್ಲ. ಅಧಿಕಾರದಲ್ಲಿ ಇರುವವರಿಗೆ ಸಾಕಷ್ಟು ಶಕ್ತಿಯೂ ಇರುತ್ತದೆ. ಅಗತ್ಯ ಬಿದ್ದರೆ ಬಳಸುವುದಕ್ಕೂ ಗೊತ್ತಿದೆ ಎನ್ನುವುದನ್ನು ಬಿಜೆಪಿ ನಾಯಕರು ಮನಗಾಣಬೇಕು.

-ಡಿ.ಕೆ.ಶಿವಕುಮಾರ್, ಜಲಸಂಪನ್ಮೂಲ ಸಚಿವ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X