Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ವಿಶೇಷ ಚೇತನ ಮಕ್ಕಳಿಗೆ ಅನುಕಂಪದ ಜೊತೆಗೆ...

ವಿಶೇಷ ಚೇತನ ಮಕ್ಕಳಿಗೆ ಅನುಕಂಪದ ಜೊತೆಗೆ ಪ್ರೋತ್ಸಾಹವೂ ಅಗತ್ಯ: ಶಾಸಕ ರಾಜೇಶ್ ನಾಯ್ಕ್

ವಾರ್ತಾಭಾರತಿವಾರ್ತಾಭಾರತಿ23 Feb 2019 10:23 PM IST
share
ವಿಶೇಷ ಚೇತನ ಮಕ್ಕಳಿಗೆ ಅನುಕಂಪದ ಜೊತೆಗೆ ಪ್ರೋತ್ಸಾಹವೂ ಅಗತ್ಯ: ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ, ಫೆ. 23: ಅವಕಾಶಗಳು ದೊರೆತರೆ, ವಿಶೇಷಚೇತನ ಮಕ್ಕಳೂ ಸಮಾಜದಲ್ಲಿ ಉತ್ತಮ ಪ್ರಜೆಗಳಾಗಿ ಆತ್ಮವಿಶ್ವಾಸದಿಂದ ಬದುಕುತ್ತಾರೆ. ಸಾಮಾಜಿಕವಾಗಿ ಅವರಿಗೆ ಅನುಕಂಪದ ಜೊತೆಗೆ ಪ್ರೋತ್ಸಾಹವೂ ಒದಗಬೇಕು ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಹೇಳಿದ್ದಾರೆ.

ಕೊಟ್ಟರೆ ಅವಕಾಶ, ಮುಟ್ಟುವೆವು ಆಕಾಶ ಎಂಬ ಘೋಷವಾಕ್ಯದೊಂದಿಗೆ ಬಂಟ್ವಾಳದಲ್ಲಿ ಶನಿವಾರ ನಡೆದ ವಿಶೇಷ ಚೇತನ ಮಕ್ಕಳ ಹಬ್ಬದಲ್ಲಿ ಮುಖ್ಯ ಅತಿಥಿಗಳಾಗಿ ಅವರು ಮಾತನಾಡಿದರು.

ಈ ಸಂದರ್ಭ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರನ್ನು ಸನ್ಮಾನಿಸಿ ಮಾತನಾಡಿದ ಮಾಜಿ ಸಚಿವ ಬಿ.ರಮಾನಾಥ ರೈ, ವಿಕಲಚೇತನ ಮಕ್ಕಳು ಸಮಾಜದ ಕಣ್ಗಾವಲಿನಲ್ಲಿ ಬೆಳೆಯಬೇಕು. ಅವರ ಪ್ರೋಷಕರಿಗೆ ಸಮಾಜದ ಬೆಂಬಲ ಬೇಕಾಗಿದೆ ಎಂದು ಹೇಳಿದರು.

ವಿಶೇಷ ಚೇತನ ಮಕ್ಕಳಾದ ಎಸ್‍ವಿಎಸ್ ಟೆಂಪಲ್ ಸ್ಕೂಲ್‍ನ ಕೌಶಿಕ್ ಕಾಲಿನಲ್ಲಿ ಬರೆದ ಚಿತ್ರಗಳ ಪುಸ್ತಕ ಹಾಗೂ ಎಸ್‍ವಿಎಸ್ ಪದವಿಪೂರ್ವ ಕಾಲೇಜು ವಿದ್ಯಾರ್ಥಿನಿ ಭಾಗ್ಯಶ್ರೀ ಬರೆದ ಭಾಗ್ಯದೀಪಿಕೆ ಕವನ ಸಂಕಲನವನ್ನು ಬಿಡುಗಡೆ ಮಾಡಲಾಯಿತು.

ಇದೇ ವೇಳೆ ವಿಶೇಷಚೇತನ ಸಾಧಕರಾದ ಯಶಸ್ವಿ, ಚಂದ್ರಿಕಾ, ಶ್ರೀಕೃಷ್ಣ, ಮುಹಮ್ಮದ್ ಜುನೈದ್ ಮತ್ತು ಬೀಫಾತುಮ್ಮಾ ಅವರನ್ನು ಸನ್ಮಾನಿಸಲಾಯಿತು. ವಿಶೇಷಚೇತನರಾಗಿ ಸರಕಾರಿ ಇಲಾಖೆಯಲ್ಲಿ ಕಾರ್ಯನಿರ್ವಹಿಸುವ ದೀಪಾ ಅನಿಸಿಕೆ ವ್ಯಕ್ತಪಡಿಸಿದರು. ತಾಲೂಕಿನಲ್ಲಿ ಸರಕಾರದಿಂದ ಗುರುತಿಸಲ್ಪಟ್ಟ ಸುಮಾರು 500 ಮಂದಿ ವಿಕಲಚೇತನ ಮಕ್ಕಳು ಪ್ರೋಷಕರೊಂದಿಗೆ ಆಗಮಿಸಿ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.

ಅಂತಾರಾಷ್ಟ್ರೀಯ ಕ್ರೀಡಾಕೂಟದಲ್ಲಿ ಪಾಲ್ಗೊಂಡು ವಿಜೇತಳಾದ ಚೆಸ್ ಪ್ರತಿಭೆ ಕಡೇಶ್ವಾಲ್ಯ ಶಾಲೆ ವಿದ್ಯಾರ್ಥಿನಿ ಯಶಸ್ವಿ ಅಧ್ಯಕ್ಷತೆ ವಹಿಸಿದ್ದರು. ತಾಲೂಕು ಪಂಚಾಯತ್ ಅಧ್ಯಕ್ಷ ಚಂದ್ರಹಾಸ ಕರ್ಕೇರ, ಉಪಾಧ್ಯಕ್ಷ ಬಿ.ಎಂ.ಅಬ್ಬಾಸ್ ಅಲಿ, ಜಿಲ್ಲಾ ಪಂಚಾಯತ್ ಸದಸ್ಯರಾದ ಎಂ.ಎಸ್.ಮಹಮ್ಮದ್, ತುಂಗಪ್ಪ ಬಂಗೇರ, ತಾಲೂಕು ಪಂಚಾಯತ್ ಸ್ಥಾಯಿ ಸಮಿತಿ ಅಧ್ಯಕ್ಷೆ ಧನಲಕ್ಷ್ಮೀ ಬಂಗೇರ, ತಾಪಂ ಸದಸ್ಯರಾದ ಸಂಜೀವ ಪೂಜಾರಿ, ಪ್ರಭಾಕರ ಪ್ರಭು, ಶಾರದಾ ಪ್ರೌಢಶಾಲೆಯ ಸಂಚಾಲಕ ಮೊಗರ್ನಾಡು ಜನಾರ್ದನ ಭಟ್, ಚುಟುಕು ಸಾಹಿತ್ಯ ಪರಿಷತ್‍ನ ಗೌರವ ಕಾರ್ಯದರ್ಶಿ ಇರಾ ನೇಮು ಪೂಜಾರಿ, ಡಯಟ್ ಪ್ರಾಂಶುಪಾಲ ಸಿಪ್ರಿಯಾನ್ ಮೊಂತೆರೊ, ಶಿಕ್ಷಕರ ಸಂಘಟನೆಗಳ ಪ್ರಮುಖರಾದ ರಮಾನಂದ ನೂಜಿಪ್ಪಾಡಿ, ಮುಹಮ್ಮದ್ ತುಂಬೆ, ರಮೇಶ್ ನಾಯಕ್ ರಾಯಿ, ಮಹೇಶ್ ಕುಮಾರ್ ಕರ್ಕೇರ, ಪುರಸಭೆ ಮುಖ್ಯಾಧಿಕಾರಿ ರೇಖಾ ಶೆಟ್ಟಿ, ಕ್ಷೇತ್ರ ಸಂಪನ್ಮೂಲ ಕೇಂದ್ರದ ಕ್ಷೇತ್ರ ಸಮನ್ವಯಾಧಿಕಾರಿ ರಾಧಾಕೃಷ್ಣ ಭಟ್. ಶಿಕ್ಷಣ ಸಂಪನ್ಮೂಲ ಕೇಂದ್ರದ ಸಂಪನ್ಮೂಲ ವ್ಯಕ್ತಿ ನಾರಾಯಣ ಗೌಡ, ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿ ನೋಣಯ್ಯ, ಬಿಆರ್‍ಸಿಯ ನೋಡಲ್ ಅಧಿಕಾರಿ ಸುರೇಖಾ ಯಳವರ ಉಪಸ್ಥಿತರಿದ್ದರು.

ಶಿಕ್ಷಕ ಬಿ.ರಾಮಚಂದ್ರ ರಾವ್ ಕಾರ್ಯಕ್ರಮ ನಿರ್ವಹಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X