Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮೈಸೂರು ಜಿ.ಪಂ ನಲ್ಲಿ...

ಮೈಸೂರು ಜಿ.ಪಂ ನಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ: ಸ್ಥಳೀಯ ಜೆಡಿಎಸ್ ನಾಯಕರಿಗೆ ಸೆಡ್ಡು ಹೊಡೆದ ಸಿದ್ದರಾಮಯ್ಯ

ನೇರಳೆ ಸತೀಶ್‍ ಕುಮಾರ್ನೇರಳೆ ಸತೀಶ್‍ ಕುಮಾರ್23 Feb 2019 10:44 PM IST
share
ಮೈಸೂರು ಜಿ.ಪಂ ನಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ: ಸ್ಥಳೀಯ ಜೆಡಿಎಸ್ ನಾಯಕರಿಗೆ ಸೆಡ್ಡು ಹೊಡೆದ ಸಿದ್ದರಾಮಯ್ಯ

ಮೈಸೂರು,ಫೆ.23: ರಾಜಕೀಯ ದೊಂಬರಾಟಕ್ಕೆ ಸಾಕ್ಷಿಯಾಗಿದ್ದ ಮೈಸೂರು ಜಿಲ್ಲಾ ಪಂಚಾಯತ್ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನ ಕೊನೆಗೂ ಕಾಂಗ್ರೆಸ್-ಜೆಡಿಎಸ್ ಪಾಲಾಗುವ ಮೂಲಕ ಜೆಡಿಎಸ್ ಸ್ಥಳೀಯ ನಾಯಕರಿಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೆಡ್ಡು ಹೊಡೆದಿದ್ದಾರೆ.

ಒಟ್ಟು 49 ಸ್ಥಾನಗಳ ಬಲವಿರುವ ಜಿಲ್ಲಾ ಪಂಚಾಯತ್‍ನಲ್ಲಿ ಕಾಂಗ್ರೆಸ್ 21, ಜೆಡಿಎಸ್ 19, ಬಿಜೆಪಿ 8 ಮತ್ತು ಪಕ್ಷೇತರ 1 ಸ್ಥಾನ ಪಡೆದಿತ್ತು. ಈ ಹಿಂದೆ ಐದು ವರ್ಷಗಳ ಅವಧಿಗೆ ಜೆಡಿಎಸ್-ಬಿಜೆಪಿ ಮೈತ್ರಿ ಮಾಡಿಕೊಂಡು ಅಧ್ಯಕ್ಷರಾಗಿ ಜೆಡಿಎಸ್‍ನ ನಯೀಮಾ ಸುಲ್ತಾನಾ ನಜೀರ್ ಅಹಮದ್, ಉಪಾಧ್ಯಕ್ಷರಾಗಿ ಬಿಜೆಪಿಯ ಕೈಯಂಬಳ್ಳಿ ನಟರಾಜ್ ಆಯ್ಕೆಯಾಗಿದ್ದರು. ಜೆಡಿಎಸ್ ಪಕ್ಷದ ಒಪ್ಪಂದದಂತೆ ಒಂದು ಅವಧಿಗೆ ನಯೀಮಾ ಸುಲ್ತಾನ್ ನಜೀರ್ ಅಹಮದ್ ಮತ್ತೊಂದು ಅವಧಿಗೆ ಪರಿಮಳ ಶ್ಯಾಮ್ ಅವರನ್ನು ಅಧ್ಯಕ್ಷರನ್ನಾಗಿ ಆಯ್ಕೆಮಾಡಲು ತೀರ್ಮಾನಿಸಲಾಗಿತ್ತು. ಇನ್ನು, ಉಪಾಧ್ಯಕ್ಷರ ಸ್ಥಾನ ಬಿಜೆಪಿಯವರಿಗೆ ಬಿಟ್ಟಿದ್ದು ಎಂದು ಒಪ್ಪಂದ ಮಾಡಿಕೊಳ್ಳಲಾಗಿತ್ತು.

ಅದರಂತೆ ತೆರವಾಗಿದ್ದ ಅಧ್ಯಕ್ಷ ಉಪಾಧ್ಯಕ್ಷರ ಸ್ಥಾನಕ್ಕೆ ಜೆಡಿಎಸ್ ಸಚಿವರಾದ ಜಿ.ಟಿ.ದೇವೇಗೌಡ ಮತ್ತು ಸಾ.ರಾ ಮಹೇಶ್ ಮತ್ತೆ ಬಿಜೆಪಿಯೊಂದಿಗೆ ಮೈತ್ರಿ ಮುಂದುವರೆಸಿಕೊಳ್ಳಲು ತೀರ್ಮಾನಿಸಿ, ಜೆಡಿಎಸ್ ಮತ್ತು ಬಿಜೆಪಿ ಜಿ.ಪಂ ಸದಸ್ಯರನ್ನು ರೆಸಾರ್ಟ್‍ಗೂ ಕಳುಹಿಸಿದ್ದರು ಎನ್ನಲಾಗಿದೆ.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಒಂದು ವಾರಗಳ ಹಿಂದೆ ಮೈಸೂರಿಗೆ ಆಗಮಿಸಿದ್ದ ವೇಳೆ ಜಿ.ಪಂ ನಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿಮಾಡಿಕೊಂಡು ಅಧಿಕಾರ ನಡೆಸುವಂತೆ ಸಂಸದ ಆರ್.ಧ್ರುವನಾರಾಯಣ ಮತ್ತು ಹುಣಸೂರಿನ ಮಾಜಿ ಶಾಸಕ ಎಚ್.ಪಿ.ಮಂಜುನಾಥ್ ಅವರಿಗೆ ಸೂಚನೆ ನೀಡಿದ್ದರು ಎನ್ನಲಾಗಿದೆ.

ಈ ಹಿನ್ನೆಲೆಯಲ್ಲಿ ಸಂಸದ ಆರ್.ಧ್ರುವನಾರಾಯಣ ಬುಧವಾರ ಕಾಂಗ್ರೆಸ್ ಪಕ್ಷದ ಜಿ.ಪಂ ಸದಸ್ಯರ ಸಭೆ ನಡೆಸಿ ಜೆಡಿಎಸ್ ಪಕ್ಷದೊಂದಿಗೆ ಹೊಂದಾಣಿಕೆ ಮಾಡಿಕೊಂಡು ಹೋಗುವಂತೆ ಸೂಚಿಸಿದ್ದರು. ಅದಕ್ಕೆ ಎಲ್ಲಾ ಸದಸ್ಯರೂ ಒಪ್ಪಿಗೆಯನ್ನು ನೀಡಿದ್ದರು. ಅಲ್ಲದೇ, ಕಾಂಗ್ರೆಸ್-ಜೆಡಿಎಸ್ ಮೈತ್ರಿ ಖಚಿತ ಎಂದು ಸಂಸದ ಆರ್.ಧ್ರುವನಾರಾಯಣ ಹೇಳಿದ್ದರು. ಇದರ ಬೆನ್ನಲ್ಲೇ ಗುರುವಾರ ಜಲದರ್ಶಿನಿ ಅತಿಥಿ ಗೃಹದಲ್ಲಿ ಜೆಡಿಎಸ್ ಸಚಿವರಾದ ಸಾ.ರಾ ಮಹೇಶ್, ಜಿ.ಟಿ ದೇವೇಗೌಡ, ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್ ಮತ್ತು ಜಿ.ಪಂ ಸದಸ್ಯರು ಸಭೆ ನಡೆಸಿ ಬಿಜೆಪಿಯೊಂದಿಗಿನ ಮೈತ್ರಿಯನ್ನು ಮುಂದುವರಿಸಿಕೊಂಡು ಹೋಗುವುದಾಗಿ ಹೇಳಿದ್ದರು. ಶುಕ್ರವಾರ ಸಚಿವರು ಮೈಸೂರು ಜಿ.ಪಂ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಕ್ಕೆ ಬಿಜೆಪಿಯೊಂದಿಗಿನ ಮೈತ್ರಿಯನ್ನು ಯಾವುದೇ ಕಾರಣಕ್ಕೂ ಬದಲಿಸಲು ಸಾಧ್ಯವಿಲ್ಲ ಎಂಬ ಹೇಳಿಕೆಯನ್ನೂ ನೀಡಿದ್ದರು.

ಆದರೆ, ರಾಜಕೀಯ ಚದುರಂಗದಾಟದಲ್ಲಿ ಕಾಂಗ್ರೆಸ್ ಉಸ್ತುವಾರಿ ಕೆ.ಸಿ ವೇಣುಗೋಪಾಲ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಶುಕ್ರವಾರ ಜೆಡಿಎಸ್ ವರಿಷ್ಠ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರನ್ನು ಭೇಟಿ ಮಾಡಿ ಮೈಸೂರು ಜಿ.ಪಂ ನಲ್ಲಿ ಬಿಜೆಪಿಯೊಡನೆ ಮೈತ್ರಿ ಮುಂದುವರೆಸುವುದಾದರೆ ರಾಜ್ಯದ ಜನತೆಗೆ ತಪ್ಪು ಸಂದೇಶ ರವಾನೆಯಾಗಲಿದೆ. ಇದರ ಹೊಣೆಯನ್ನು ಜೆಡಿಎಸ್ ಪಕ್ಷವೇ ವಹಿಸಬೇಕಾಗುತ್ತದೆ ಎಂದು ಹೇಳಿದ್ದರು. ಇದಕ್ಕೆ ಸ್ಪಂದಿಸಿದ ಎಚ್.ಡಿ.ದೇವೇಗೌಡ ಕೂಡಲೇ ಜೆಡಿಎಸ್ ಪಕ್ಷದ ಸ್ಥಳೀಯ ನಾಯಕರಿಗೆ ಕಾಂಗ್ರೆಸ್‍ನೊಂದಿಗೆ ಒಪ್ಪಂದ ಮಾಡಿಕೊಂಡು ಅಧಿಕಾರ ನಡೆಸುವಂತೆ ಸೂಚಿಸಿದರು ಎಂದು ತಿಳಿದು ಬಂದಿದೆ.

ದೇವೇಗೌಡರ ಸೂಚನೆಯಂತೆ ಯೂ ಟರ್ನ್ ಹೊಡೆದ ಸಚಿವ ಸಾ.ರಾ ಮಹೇಶ್, ಶುಕ್ರವಾರ ತಡರಾತ್ರಿ ಹುಣಸೂರು ಕ್ಷೇತ್ರದ ಮಾಜಿ ಶಾಸಕ ಎಚ್.ಪಿ ಮಂಜುನಾಥ್ ಜೊತೆಯಾಗಿ ನಗರದ ಖಾಸಗಿ ಹೋಟೆಲ್‍ನಲ್ಲಿ ಪತ್ರಿಕಾಗೋಷ್ಠಿ ನಡೆಸಿ ವರಿಷ್ಠರ ಸೂಚನೆಯಂತೆ ಪಕ್ಷದ ತತ್ವ ಸಿದ್ಧಾಂತಗಳಿಗೆ ಬೆಲೆ ಕೊಟ್ಟು ಮೈಸೂರು ಜಿಲ್ಲಾ ಪಂಚಾಯತ್‍ನಲ್ಲಿ ಕಾಂಗ್ರೆಸ್ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳವುದಾಗಿ ಘೋಷಿಸಿದರು. 

ಮೈಸೂರು ಮಹಾನಗರ ಪಾಲಿಕೆಯ ಮೇಯರ್ ಆಯ್ಕೆಯಲ್ಲೂ ಸಚಿವರಾದ ಸಾ.ರಾ ಮಹೇಶ್ ಮತ್ತು ಜಿ.ಟಿ ದೇವೇಗೌಡ ಬಿಜೆಪಿ ಜೊತೆಗೆ ಮೈತ್ರಿ ಮಾಡಿಕೊಳ್ಳಲು ತೀರ್ಮಾನಿಸಿದ್ದರು. ಆದರೆ ರಾಜ್ಯ ರಾಜಕಾರಣದಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಮಾಡಿಕೊಂಡು ಸ್ಥಳೀಯ ಮಟ್ಟದಲ್ಲಿ ಬಿಜೆಪಿ ಜೊತೆಗೆ ಕೈಜೋಡಿಸಿದರೆ ಮುಂಬರುವ ಲೋಕಸಭಾ ಚುನಾವಣೆಗೆ ಹೊಡೆತ ಬೀಳಲಿದೆ ಎಂಬುದನ್ನು ಅರಿತ ಜೆಡಿಎಸ್ ವರಿಷ್ಠ ಎಚ್.ಡಿ ದೇವೇಗೌಡ ಕೊನೇ ಗಳಿಗೆಯಲ್ಲಿ ಕಾಂಗ್ರೆಸ್ ಜೊತೆಗೆ ಮೈತ್ರಿ ಮಾಡಿಕೊಂಡು ಆಡಳಿತ ನಡೆಸುವಂತೆ ಸೂಚಿಸಿದರು ಎನ್ನಲಾಗಿದೆ.

ಒಟ್ಟಿನಲ್ಲಿ ಸಚಿವ ಸಾ.ರಾ ಮಹೇಶ್ ಮತ್ತು ಜಿ.ಟಿ ದೇವೇಗೌಡರಿಗೆ ಕಾಂಗ್ರೆಸ್ ನೊಂದಿಗೆ ಹೊಂದಾಣಿಕೆ ಇಷ್ಟವಿಲ್ಲದಿದ್ದರೂ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಕಿದ ದಾಳಕ್ಕೆ ಉದುರಿ ಬೀಳಲೇ ಬೇಕಾಯಿತು. ದೇವೇಗೌಡರ ಆದೇಶಕ್ಕೆ ತಲೆಬಾಗಿ ಮೈತ್ರಿಗೆ ಒಪ್ಪಿಕೊಳ್ಳಲಾಯಿತು.

share
ನೇರಳೆ ಸತೀಶ್‍ ಕುಮಾರ್
ನೇರಳೆ ಸತೀಶ್‍ ಕುಮಾರ್
Next Story
X