Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಹಾತ್ಮ ಗಾಂಧೀಜಿ ಮಂಗಳೂರು ಭೇಟಿಯ ವಿಶೇಷ...

ಮಹಾತ್ಮ ಗಾಂಧೀಜಿ ಮಂಗಳೂರು ಭೇಟಿಯ ವಿಶೇಷ ಅಂಚೆ ಲಕೋಟೆ ಬಿಡುಗಡೆ

ವಾರ್ತಾಭಾರತಿವಾರ್ತಾಭಾರತಿ23 Feb 2019 11:08 PM IST
share
ಮಹಾತ್ಮ ಗಾಂಧೀಜಿ ಮಂಗಳೂರು ಭೇಟಿಯ ವಿಶೇಷ ಅಂಚೆ ಲಕೋಟೆ ಬಿಡುಗಡೆ

ಮಂಗಳೂರು, ಫೆ.23: ಭಾರತೀಯ ಅಂಚೆ ಇಲಾಖೆಯ ಮಂಗಳೂರು ವಿಭಾಗದ ವತಿಯಿಂದ ಕರ್ನಾಟಕ ಅಂಚೆ ವತ್ತ ಮಹಾತ್ಮ ಗಾಂಧೀಜಿಯವರ 150ನೇ ಜನ್ಮದಿನೋತ್ಸವದ ಆಚರಣೆಯ ಸ್ಮರಣಾರ್ಥ ಮಹಾತ್ಮ ಗಾಂಧೀಜಿ ಮಂಗಳೂರು ಭೇಟಿಯ ವಿಶೇಷ ಅಂಚೆ ಲಕೊೀಟೆಯ ಬಿಡುಗಡೆ ಇಂದು ನಡೆಯಿತು.

ನಗರದ ಹೊಯಿಗೆ ಬಜಾರ್‌ನ ಜ್ಞಾನೋದಯ ಸಮಾಜ ಮಂದಿರದಲ್ಲಿ ನಡೆದ ಸಮಾರಂಭದಲ್ಲಿ ದಕ್ಷಿಣ ಕರ್ನಾಟಕ ಪ್ರಾಂತ್ಯದ ಪೋಸ್ಟ್ ಮಾಸ್ಟರ್ ಜನರಲ್ ಎಸ್.ರಾಜೇಂದ್ರ ಕುಮಾರ್ ವಿಶೇಷ ಲಕೋಟೆಯನ್ನು ಬಿಡುಗಡೆ ಮಾಡಿ ಮಾತನಾಡಿದರು.

ಗಾಂಧೀಜಿ ಅವರ ಬದುಕು ಸರಳತೆಯಿಂದ ಕೂಡಿದೆ. ಪ್ರತಿಯೊಬ್ಬರು ತಮ್ಮ ಜೀವನದಲ್ಲಿ ಗಾಂಧೀಜಿ ಅವರ ಬದುಕಿನ ಸೂತ್ರಗಳನ್ನು ಅಳವಡಿಸಿಕೊಂಡು ಬದುಕಬೇಕು ಎಂದರು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಮಾತನಾಡಿ, ಧಾರ್ಮಿಕ ಕೇಂದ್ರಗಳ ರಕ್ಷಣೆಯ ಮಾದರಿಯಲ್ಲಿ ಗಾಂಧೀಜಿ ಬಂದ ಸ್ಥಳಗಳ ರಕ್ಷಣೆಯಾಗಬೇಕು ಎಂದರು.

1857ರಲ್ಲಿ ಅಸಹಕಾರ ಚುಳವಳಿಯ ಸಮಯದಲ್ಲಿ ಎಲ್ಲರನ್ನು ಒಟ್ಟುಗೂಡಿಸುವ ಜತೆಗೆ ಏಕತೆ ಹುಟ್ಟು ಹಾಕುವ ಕೆಲಸವನ್ನು ಗಾಂಧೀಜಿ ಮಾಡಿದ್ದರು. ಅದೊಂದು ದೊಡ್ಡ ಕೆಲಸವಾಗಿದೆ. ಈಗ ಯಾವುದೇ ರಾಜ್ಯದಲ್ಲಾದರೂ ಒಂದು ವಿಚಾರದಲ್ಲಿ ಏಕತೆ ತರಲು ಸಾಧ್ಯವಾಗುತ್ತಿಲ್ಲ. ಆದರೆ ಗಾಂಧೀಜಿ ಇಡೀ ದೇಶದಲ್ಲಿ ಸ್ವಾತಂತ್ರ್ಯ ಎನ್ನುವ ಕಲ್ಪನೆಯಡಿ ಏಕತೆ ತರುವಲ್ಲಿ ಯಶಸ್ವಿಯಾಗಿದ್ದರು. ಗಾಂಧೀಜಿಯಿಂದ ಇಂದಿನ ರಾಜಕೀಯ ಮುಖಂಡರು ಕಲಿಯಬೇಕಾದ ವಿಚಾರ ಬಹಷ್ಟಿದೆ ಎಂದು ಜಿಲ್ಲಾಧಿಕಾರಿ ನುಡಿದರು.

ಈ ಸಂದರ್ಭ ಜಿ.ಜಿ. ಲಕ್ಷ್ಮಣ ಪ್ರಭು ಹಾಗೂ ಜ್ಞಾನೋದಯ ಸಮಾಜ ಮಂದಿರದ ಅಧ್ಯಕ್ಷ ಪ್ರೇಮ್‌ಚಂದ್ ತಿಂಗಳಾಯ ಗಾಂಧೀಜಿ ಹಾಗೂ ಅರು ಭೇಟಿಯ ಬಗ್ಗೆ ಮಾತನಾಡಿದರು.

ಮಂಗಳೂರು ಅಂಚೆ ಇಲಾಖೆಯ ಹಿರಿಯ ಅಧೀಕ್ಷಕ ಶ್ರಿಹರ್ಷ ಎನ್ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಮಂಗಳೂರು ಈಸ್ಟ್ ಸಬ್ ಡಿವಿಜನ್‌ನ ಎಎಸ್‌ಪಿ ಮೆಕ್ಸಿ ಜಿ ಪಿಂಟೋ ವಂದಿಸಿದರು. ಅಂಚೆ ಇಲಾಖೆಯ ಎಎಸ್‌ಪಿ ಜೋಸ್ೆ ರಾಡ್ರಿಗಸ್ ಕಾರ್ಯಕ್ರಮ ನಿರೂಪಿಸಿದರು.

ಗಾಂಧಿ ಭೇಟಿ ನೀಡಿದ್ದ ಜ್ಞಾನೋದಯ ಸಮಾಜ ಮಂದಿರ

ಮಂಗಳೂರು ಹೊಯಿಗೆ ಬಜಾರ್‌ನಲ್ಲಿರುವ ಜ್ಞಾನೋದಯ ಸಮಾಜ ಮಂದಿರಕ್ಕೆ 1934ರ ಫೆ.24ರಂದು ಗಾಂಧೀಜಿ ಭೇಟಿ ನೀಡಿದ್ದರು. ಈ ಸಮಯದಲ್ಲಿ ಮೊಗವೀರ ಸಮಾಜದ ಬಂಧುಗಳು ಗಾಂಧೀಜಿಗೆ ಮನವಿ ಪತ್ರವನ್ನು ಕೂಡ ನೀಡಿದ್ದರು. ಜ್ಞಾನೋದಯ ಸಮಾಜ ಮಂದಿರವನ್ನು 1910ರ ಫೆ.22ರಂದು ಸ್ವಾತಂತ್ರ್ಯಹೋರಾಟಗಾರ ಮೋನಪ್ಪ ತಿಂಗಳಾಯ ನಿರ್ಮಾಣ ಮಾಡಿದ್ದರು. ವಿಶೇಷ ಅಂಚೆ ಲಕೋಟೆಯಲ್ಲಿ ಜ್ಞಾನೋದಯ ಸಮಾಜ ಮಂದಿರ, ಮೊಗವೀರ ಬಂಧುಗಳು ಗಾಂಧೀಜಿಗೆ ನೀಡಿದ ಪತ್ರ, ಮಂಗಳೂರು ೇಟಿಯ ವಿಚಾರಗಳನ್ನು ಚಿತ್ರಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X