ವಿಶೇಷ ಮಕ್ಕಳೋತ್ಸವ: ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ

ಉಡುಪಿ, ಫೆ.24: ಕರ್ನಾಟಕ ರಾಜ್ಯ ಬಾಲಭವನ ಸೊಸೈಟಿ, ಉಡುಪಿ ಜಿಲ್ಲಾ ಬಾಲಭವನ ಸಮಿತಿ ಹಾಗೂ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ವಿಶೇಷ ಮಕ್ಕಳ ಮಕ್ಕಳೋತ್ಸವವನ್ನು ಫೆ.22ರಂದು ಬೈಲೂರು ಆಶಾ ನಿಲಯದ ವಿಶೇಷ ಮಕ್ಕಳ ಶಾಲೆಯಲ್ಲಿ ಆಯೋಜಿಸಲಾಗಿತ್ತು.
ಈ ಪ್ರಯುಕ್ತ ವಿಶೇಷ ಮಕ್ಕಳಿಗಾಗಿ ಚಿತ್ರಕಲಾ ಸ್ಪರ್ಧೆ, ಛದ್ಮವೇಷ ಸ್ಪರ್ಧೆ, ಭಾವಗೀತೆ, ನೃತ್ಯ ಪ್ರದರ್ಶನ ಮುಂತಾದ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು. ಸಮಾರೋಪ ಸಮಾರಂಭದಲ್ಲಿ ಸ್ಪರ್ಧೆಯ ವಿಜೇತರಿಗೆ ಬಹುಮಾನಗಳನ್ನು ಉಡುಪಿ ಜಿಪಂ ಮುಖ್ಯ ಕಾರ್ಯ ನಿರ್ವಣಾಧಿಕಾರಿ ಸಿಂಧು ರೂಪೇಶ್ ವಿತರಿಸಿದರು.
ಉಡುಪಿ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕಿ ಗ್ರೇಸಿ ಗೊನ್ಸಾಲ್ವಿಸ್, ಜಿಲ್ಲಾ ಅಂಗವಿಕಲರ ಕಲ್ಯಾಣ ಅಧಿಕಾರಿ ನಿರಂಜನ್ ಭಟ್, ಆಶಾ ನಿಲಯದ ಮುಖ್ಯೋಪಾಧ್ಯಾಯಿನಿ ಜಯ ವಿಜಯ, ಚಂದ್ರಿಕಾ ಮೊದಲಾದವರು ಉಪಸ್ಥಿತರಿದ್ದರು.
Next Story





