Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಂಗಳೂರು: ರಾಮಕೃಷ್ಣ ಮಿಷನ್‌ನಿಂದ 12ನೇ...

ಮಂಗಳೂರು: ರಾಮಕೃಷ್ಣ ಮಿಷನ್‌ನಿಂದ 12ನೇ ಸ್ವಚ್ಛತಾ ಶ್ರಮದಾನ

ವಾರ್ತಾಭಾರತಿವಾರ್ತಾಭಾರತಿ24 Feb 2019 8:38 PM IST
share
ಮಂಗಳೂರು: ರಾಮಕೃಷ್ಣ ಮಿಷನ್‌ನಿಂದ 12ನೇ ಸ್ವಚ್ಛತಾ ಶ್ರಮದಾನ

ಮಂಗಳೂರು, ಫೆ. 24: ರಾಮಕೃಷ್ಣ ಮಿಷನ್ ನೇತೃತ್ವದಲ್ಲಿ ನಡೆಯುತ್ತಿರುವ ಸ್ವಚ್ಛ ಮಂಗಳೂರು ಅಭಿಯಾನದ ಐದನೇ ವರ್ಷದ ಪ್ರಯುಕ್ತ ಆಯೋಜನೆ ಮಾಡಲಾಗುತ್ತಿರುವ ಕಾರ್ಯಕ್ರಮಗಳ 12ನೇ ಸ್ವಚ್ಛತಾ ಶ್ರಮದಾನವನ್ನು ರವಿವಾರ ಬೆಳಗ್ಗೆ 7:30ರಿಂದ 10:30ವರೆಗೆ ಮಣ್ಣಗುಡ್ಡ ಹಾಗೂ ಸ್ಟೇಟ್ ಬ್ಯಾಂಕ್ ಪ್ರದೇಶದಲ್ಲಿ ಕೈಗೊಳ್ಳಲಾಯಿತು.

ಮಣ್ಣಗುಡ್ಡೆಯಲ್ಲಿರುವ ಕೇಂದ್ರಿಯ ಉಗ್ರಾಣ ನಿಗಮದ ಬಳಿಯಲ್ಲಿ ಮನಪಾ ಸ್ಥಳಿಯ ಸದಸ್ಯೆ ಜಯಂತಿ ಆಚಾರ್ ಹಾಗೂ ಮನಪಾ ಸದಸ್ಯ ಪ್ರಕಾಶ್ ಸಾಲ್ಯಾನ್ ಶ್ರಮದಾನಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಪ್ರಕಾಶ್ ಸಾಲ್ಯಾನ್, ‘ಅಪ್ರತಿಮ ಕಾಳಜಿ, ಪರಿಶ್ರಮ ಹಾಗೂ ನಿರಂತರತೆಯಿಂದಾಗಿ ಸ್ವಚ್ಛ ಮಂಗಳೂರು ಅಭಿಯಾನ ಇಂದು ಯಶಸ್ವಿಯಾಗಿ ನಗರದ ಸ್ವಚ್ಛತೆಯಲ್ಲಿ ಗಣನೀಯ ಸಾಧನೆ ಮಾಡಿದೆ ಎಂದರು.

ನಾಲ್ಕೂವರೆ ವರ್ಷಗಳ ಹಿಂದೆ ಆರಂಭವಾದಾಗ ಇದ್ದ ಹುಮ್ಮಸ್ಸು ಕಿಂಚಿತ್ತೂ ಕಡಿಮೆಯಾಗದೆ ನೂರ್ಮಡಿಯಾಗಿರುವುದು ಇದರ ಯಶಸ್ಸಿಗೆ ಹಿಡಿದ ಕನ್ನಡಿ. ಅನೇಕ ಕಸಬೀಳುವ ತಾಣಗಳನ್ನು ಗುರುತಿಸಿ ಪುಟ್ಟ ಉದ್ಯಾನವನಗಳನ್ನಾಗಿಸಿ ಮತ್ತೆ ಜನರು ಅಲ್ಲಿ ಕಸ ಹಾಕದಂತೆ ತಡೆಯುವಲ್ಲಿ ಸ್ವಚ್ಛ ಮಂಗಳೂರು ಕಾರ್ಯಕರ್ತರು ಯಶಸ್ವಿಯಾಗಿದ್ದಾರೆ ಎಂದರು.

ಈ ಸಂದರ್ಭ ಕ್ಯಾ.ಗಣೇಶ್ ಕಾರ್ಣಿಕ್ ಮಾತನಾಡಿದರು. ಅಭಿಯಾನದ ಸಂಚಾಲಕ ಸ್ವಾಮಿ ಏಕಗಮ್ಯಾನಂದ ಶ್ರೀ, ಅನಿರುದ್ಧ ನಾಯಕ್, ಮೋಹನ್ ಕೊಟ್ಟಾರಿ, ಪ್ರವೀಣ ಶೆಟ್ಟಿ, ಉಮಾ ಪ್ರಸಾದ್ ಕಡೆಕಾರ್, ಸ್ಮಿತಾ ಶೆಣೈ ಇನ್ನಿತರ ಕಾರ್ಯಕರ್ತರು ಉಪಸ್ಥಿತರಿದ್ದರು.

ಆರು ತಂಡಗಳಿಂದ ಸ್ವಚ್ಛತಾ ಕಾರ್ಯ: ಮಣ್ಣಗುಡ್ಡೆಯಲ್ಲಿರುವ ಕೇಂದ್ರಿಯ ಉಗ್ರಾಣದ ಕೂಡು ರಸ್ತೆಯ ನಾಲ್ಕು ರಸ್ತೆಗಳಲ್ಲಿ ಸ್ವಚ್ಛತಾ ಕಾರ್ಯವನ್ನು ಕೈಗೊಳ್ಳಲಾಯಿತು. ನಿಟ್ಟೆ ಫಿಸಿಯೋಥೆರಪಿ ಕಾಲೇಜಿನ ವಿದ್ಯಾರ್ಥಿಗಳು ಮಣ್ಣಗುಡ್ಡೆಯತ್ತ ಸಾಗುವ ಎಂ.ಲೋಕಯ್ಯ ಶೆಟ್ಟಿ ಮಾರ್ಗದ ಬದಿಗಳನ್ನು ಕಾಲೇಜಿನ ಪ್ರಾಂಶುಪಾಲ ಡಾ.ಧನೇಶ್ ಕುಮಾರ್ ಮಾರ್ಗದರ್ಶನದಲ್ಲಿ ಸ್ವಚ್ಛಗೊಳಿಸಿದರು.

ಕಾವೂರು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಎನ್ನೆಸ್ಸೆಸ್ ವಿದ್ಯಾರ್ಥಿಗಳು, ಪ್ರಾಧ್ಯಾಪಕಿಯರಾದ ರೇಖಾ ಎಸ್.ಎನ್. ಹಾಗೂ ಮೋಹಿನಿ ನೇತೃತ್ವದಲ್ಲಿ ಉಗ್ರಾಣ ರಸ್ತೆಗಳನ್ನು ಗುಡಿಸಿ ಶುಚಿಮಾಡಿದರು. ಸಂತ ಅಲೋಶಿಯೆಸ್ ಸಂಧ್ಯಾ ಕಾಲೇಜಿನ ವಿದ್ಯಾರ್ಥಿಗಳು ಮಣ್ಣಗುಡ್ಡೆಯಿಂದ ಲಾಲಭಾಗ್ ನತ್ತ ತೆರಳುವ ದಾರಿಯ ಬದಿಗಳನ್ನು ಪ್ರಾಧ್ಯಾಪಕ ಕಿಶೋರ್‌ಚಂದ್ರ ನೇತೃತ್ವದಲ್ಲಿ ಸ್ವಚ್ಛ ಮಾಡಿದರು.

ಅಭಿಯಾನದ ಹಿರಿಯ ಕಾರ್ಯಕರ್ತರು ಕೇಂದ್ರ ಉಗ್ರಾಣ ವೃತ್ತದ ಬಳಿ ತ್ಯಾಜ್ಯದಿಂದ ತುಂಬಿದ್ದ ತೋಡುಗಳಲ್ಲಿದ್ದ ಮಣ್ಣು ಗಿಡಗಂಟಿಗಳನ್ನು ತೆರವುಗೊಳಿಸಿದರು. ಮತ್ತೊಂದು ಬದಿಯಲ್ಲಿ ಪ್ರೀತಮ್ ಮುಗಿಲ್, ವಿಖ್ಯಾತ ಮತ್ತಿತರ ಕಾರ್ಯಕರ್ತರು ಅನೇಕ ದಿನಗಳಿಂದ ರಸ್ತೆ ಬದಿಯಲ್ಲಿ ಬಿದ್ದಿದ್ದ ಕಲ್ಲು ಮಣ್ಣುಗಳ ಬೃಹತ್ ರಾಶಿಗಳನ್ನು ಜೆಸಿಬಿ ಟಿಪ್ಪರ್ ಬಳಸಿ ತೆಗೆದು, ಜಾಗವನ್ನು ಹಸನುಗೊಳಿಸಿದರು. ಅಲ್ಲದೇ ಅಲ್ಲಿ ಕೊಳೆಯಿಂದ ತುಂಬಿಕೊಂಡಿದ್ದ ಬಸ್ ತಂಗುದಾಣವನ್ನು ಸ್ವಚ್ಚಗೊಳಿಸಿ ಬಣ್ಣ ಬಳಿದು ಸುಂದರವಾಗಿ ಕಾಣು ವಂತೆ ಮಾಡಿದರು. ಅಭಿಯಾನದ ಪ್ರಧಾನ ಸಂಯೋಜಕ ಉಮಾನಾಥ್ ಕೋಟೆಕಾರ್ ಎಲ್ಲ ತಂಡಗಳ ಉಸ್ತುವಾರಿ ವಹಿಸಿಕೊಂಡಿದ್ದರು.

ಸರ್ವಿಸ್ ಬಸ್ ನಿಲ್ದಾಣದಲ್ಲಿ ಶ್ರಮದಾನ:  ಕಳೆದ ಎರಡು ವಾರಗಳಿಂದ ಸರ್ವಿಸ್ ಬಸ್ ನಿಲ್ದಾಣದಲ್ಲಿ ಶ್ರಮದಾನ ಮಾಡಲಾಗಿತ್ತಾದರೂ ಉಳಿದ ಕೆಲಸವನ್ನು ಪೂರ್ಣ ಗೊಳಿಸಬೇಕೆಂದು ಈ ಬಾರಿಯೂ ಅಲ್ಲಿ ಶ್ರಮದಾನ ನಡೆಸಿದರು. ಕಳೆದ ವಾರದಂತೆ ಇಂದೂ ಅಲ್ಲಿ ಕುಳಿತುಕೊಳ್ಳಲು ಆಸನಗಳನ್ನು ಅಳವಡಿಸಲಾಯಿತು.
ಎಸ್‌ವಿಎಸ್ ವಿದ್ಯಾರ್ಥಿಗಳು ಕಂಬಗಳನ್ನು ಶುಚಿ ಮಾಡಿ ಬಣ್ಣ ಬಳಿದು ಸುಂದರ ಮಾಡಿದರು. ಉದಯ ಕೆಪಿ, ಕಿರಣ ಫೆರ್ನಾಂಡಿಸ್ ಮುಂದಾಳತ್ವ ವಹಿಸಿದರು. ಇಲ್ಲಿಯವರೆಗೆ ಒಟ್ಟು 100 ಲೀಟರ್ ಪೇಂಟ್ ಬಳಸಿಕೊಳ್ಳಲಾಗಿದ್ದು, ಪ್ರಯಾಣಿಕರಿಗಾಗಿ 40 ಕುಳಿತುಕೊಳ್ಳುವ ಅಸನಗಳನ್ನು ಅಳವಡಿಸಿ, ಕಸದ ಬುಟ್ಟಿ ಹಾಗೂ ಹೂಕುಂಡಗಳನ್ನು ಅಲ್ಲಿಡಲಾಗಿದೆ.

ಕಳೆದ ಒಂದು ವಾರದಿಂದ ಪ್ರತಿನಿತ್ಯ ಕಾರ್ಯಕರ್ತರ ಜಾಗೃತಿ ಕಾರ್ಯದಿಂದಾಗಿ ತ್ಯಾಜ್ಯ ಬೀಳುತ್ತಿದ್ದ ಎರಡು ಸ್ಥಳಗಳು ಇಂದು ತ್ಯಾಜ್ಯ ಮುಕ್ತವಾಗಿ ಕಂಗೊಳಿಸುತ್ತಿವೆ. ಸುಧೀರ್ ನರೋಹ್ನ, ಪುನೀತ್ ಪೂಜಾರಿ, ಜಗನ್ ಕೋಡಿಕಲ್, ಸತೀಶ್ ಇನ್ನಿತರರು ವಾರವಿಡೀ ಸ್ಥಳದಲ್ಲಿದ್ದು ಕಾರ್ಯನಿರ್ವಹಿಸಿದರು.

ಸ್ವಚ್ಛ ಸೋಚ್ ವಿಚಾರ ಸಂಕಿರಣ:  ರಾಮಕೃಷ್ಣ ಮಿಷನ್ ಸ್ವಚ್ಛತಾ ಅಭಿಯಾನದ ಅಂಗವಾಗಿ ನಗರದ ವಿವಿಧ ಈ ತಿಂಗಳಲ್ಲಿ ಕಾಲೇಜುಗಳಲ್ಲಿ ಸ್ವಚ್ಛ ಸೋಚ್ ಸೆಮಿನಾರ್‌ಗಳನ್ನು ಹಮ್ಮಿಕೊಳ್ಳಲಾಯಿತು. ಎಸ್‌ಡಿಎಂ ಮ್ಯಾನೇಜ್‌ಮೆಂಟ್ ಕಾಲೇಜು, ಕಟೀಲು ದುರ್ಗಾಪರಮೇಶ್ವರಿ ಕಾಲೇಜು, ಡಾ.ಎಂ ವಿ ಶೆಟ್ಟಿ ಕಾಲೇಜು, ಮೂಲ್ಕಿ ವಿಜಯಾ ಕಾಲೇಜು, ಕೆನರಾ ಕಾಲೇಜು, ಎಸ್‌ಡಿಎಂ ಕಾನೂನು ಮಹಾವಿದ್ಯಾಲಯ, ಸಂತ ಅಲೋಶಿಯಸ್ ಕೈಗಾರಿಕಾ ತರಬೇತಿ ಕಾಲೇಜು, ಮಹಿಳಾ ಕಾಲೇಜು ಬಲ್ಮಠ, ವಾಮದಪದವು ಪ್ರಥಮ ದರ್ಜೆ ಕಾಲೇಜು, ಎಸ್‌ವಿಎಸ್ ಕಾಲೇಜು ಬಂಟ್ವಾಳ, ಕಾವೂರು ಸರಕಾರಿ ಪ್ರಥಮ ದರ್ಜೆ ಕಾಲೇಜು, ಸಂತ ಅಲೋಶಿಯಸ್ ಕಾಲೇಜು ಮಂಗಳೂರು ಹಾಗೂ ಸಿಟಿ ನರ್ಸಿಂಗ್ ಕಾಲೇಜು ಸೇರಿದಂತೆ ಇಂದಿನವರೆಗೆ ಒಟ್ಟು 22 ವಿಚಾರ ಸಂಕಿರಣಗಳನ್ನು ನಡೆಸಲಾಗಿದೆ.

ವಿಚಾರ ಸಂಕಿರಣಗಳಲ್ಲಿ ಸ್ವಚ್ಛತೆಗೆ ಸಂಬಂಧಿಸಿದಂತೆ ಚರ್ಚೆ, ಸಂವಾದ, ಪ್ರತಿಜ್ಞಾವಿಧಿ ಬೋಧನೆ ಹಾಗೂ ಮಡಿಕೆ ಗೊಬ್ಬರ ಪ್ರಾತ್ಯಕ್ಷಿಕೆಗಳನ್ನು ಹಮ್ಮಿಕೊಳ್ಳಲಾಯಿತು. ಪ್ರೊ.ರಾಜಮೋಹನ್ ರಾವ್, ಗೋಪಿನಾಥ್ ರಾವ್ ಹಾಗೂ ಡಾ.ನಿವೇದಿತಾ, ರಜೀನಾ ದಿನೇಶ್, ಪ್ರೊ.ಭಾರತಿ ಭಟ್, ಸುರೇಶ್ ಶೆಟ್ಟಿ ಸಂಪನ್ಮೂಲ ವ್ಯಕ್ತಿಗಳಾಗಿ ಪಾಲ್ಗೊಂಡಿದ್ದರು. ಸ್ವಚ್ಛ ಸೋಚ್ ಅಭಿಯಾನದ ಮುಖ್ಯ ಸಂಯೋಜಕ ರಂಜನ್ ಬೆಳ್ಳರಪಾಡಿ ವಿಚಾರ ಸಂಕಿರಣಗಳನ್ನು ಸಂಘಟಿಸಿದರು. ಗುರುಪ್ರಸಾದ್ ರಾವ್ ಹಾಗೂ ಶ್ರೀವತ್ಸ ನಿರ್ಚಾಲು ಸಂಯೋಜಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X