Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಪ್ರಗತಿಪರ ವಿಚಾರಧಾರೆಗಳು ಹಿಂದೆ...

ಪ್ರಗತಿಪರ ವಿಚಾರಧಾರೆಗಳು ಹಿಂದೆ ಸರಿಯುತ್ತಿವೆ: ರಾಜ್ಯಸಭಾ ಸದಸ್ಯ ಎಲ್.ಹನುಮಂತಯ್ಯ

ವಾರ್ತಾಭಾರತಿವಾರ್ತಾಭಾರತಿ24 Feb 2019 8:47 PM IST
share
ಪ್ರಗತಿಪರ ವಿಚಾರಧಾರೆಗಳು ಹಿಂದೆ ಸರಿಯುತ್ತಿವೆ: ರಾಜ್ಯಸಭಾ ಸದಸ್ಯ ಎಲ್.ಹನುಮಂತಯ್ಯ

ಬೆಂಗಳೂರು, ಫೆ.24: ರಾಜ್ಯದಲ್ಲಿ ಪ್ರಗತಿಪರ ವಿಚಾರಧಾರೆಗಳು ಹಿಂದೆ ಸರಿಯುತ್ತಿದ್ದು, ಮೂಲಭೂತವಾದಿ, ಕೋಮುವಾದಿ ವಿಚಾರಧಾರೆಗಳು ಮುನ್ನೆಲೆಗೆ ಬರುತ್ತಿವೆ ಎಂದು ರಾಜ್ಯಸಭಾ ಸದಸ್ಯ ಡಾ.ಎಲ್.ಹನುಮಂತಯ್ಯ ಹೇಳಿದ್ದಾರೆ.

ರವಿವಾರ ನಗರದ ಕಸಾಪದಲ್ಲಿ ಅಖಿಲ ಕರ್ನಾಟಕ ವಿಚಾರವಾದಿಗಳ ವೇದಿಕೆ ವತಿಯಿಂದ ಆಯೋಜಿಸಿದ್ದ ಪ್ರೊ.ಎ.ಎಸ್.ನಟರಾಜ್‌ರ ರಾಜ್ ವೈಚಾರಿಕ ವೇದಿಕೆಯ 5 ನೆ ವರ್ಷದ 2019 ನೆ ಸಾಲಿನ ‘ಕರ್ನಾಟಕ ಮಹಾ ವಿಚಾರರತ್ನ ಪ್ರಶಸ್ತಿ’ ಪ್ರದಾನ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಹಿಂದಿನ ದಿನಗಳಲ್ಲಿ ವಿಶ್ವವಿದ್ಯಾಲಯಗಳಲ್ಲಿ ಪ್ರಾಧ್ಯಾಪಕರೇ ಅಂತರ್ ಜಾತೀಯ ವಿವಾಹಗಳನ್ನು ಮಾಡಿಸುತ್ತಿದ್ದರು. ಆದರೆ, ಇಂದು ಬೇರೆ ಜಾತಿಯ ಹುಡುಗ-ಹುಡುಗಿ ಪ್ರೀತಿಸಿದರೆ ಅಪ್ಪ, ಅಣ್ಣ-ತಮ್ಮಂದಿರೇ ತಮ್ಮ ಮನೆಯ ಹೆಣ್ಣು ಮಕ್ಕಳನ್ನು ಹತ್ಯೆ ಮಾಡುವ ಸ್ಥಿತಿ ನಿರ್ಮಾಣವಾಗಿದೆ. ಅಂದು ನೇರವಾಗಿ ಮೂಢನಂಬಿಕೆ, ಕಂದಾಚಾರಗಳನ್ನು ಪ್ರಶ್ನಿಸಲು ಅವಕಾಶವಿತ್ತು. ಇಂದು ಸತ್ಯವನ್ನು ಹೇಳುವವರನ್ನು ಸಾಯಿಸಲಾಗುತ್ತಿದೆ ಎಂದು ವಿಷಾಧಿಸಿದರು.

ಕರ್ನಾಟಕದಲ್ಲಿ ಮಹಾರಾಷ್ಟ್ರದ ನಂತರ ಬಲಿಷ್ಟವಾದ ದಲಿತ ಚಳವಳಿ ರೂಪಗೊಂಡಿತ್ತು. ಇಡೀ ದೇಶವೇ ರಾಜ್ಯದ ಕಡೆಗೆ ತಿರುಗಿ ನೋಡುವಂತೆ ಚಳವಳಿಗಳು ಇಲ್ಲಿಂದ ನಡೆಯುತ್ತಿದ್ದವು. ಒಂದು ಕಡೆ ರೈತ ಚಳವಳಿಯಿದ್ದರೆ ಮತ್ತೊಂದು ಕಡೆ ಕಮ್ಯುನಿಸ್ಟ್ ಚಳವಳಿಗಳು ಹುಟ್ಟಿಕೊಂಡಿದ್ದವು. ಆದರೆ, ಇತ್ತೀಚಿನ ಚಳವಳಿಗಳ ಸ್ಥಿತಿ ನೋಡಿದರೆ ಸಂಕಟವಾಗುತ್ತದೆ ಎಂದು ಬೇಸರ ವ್ಯಕ್ತಪಡಿಸಿದರು.

70 ರ ದಶಕದಲ್ಲಿ ಕರ್ನಾಟಕದಲ್ಲಿ ಕಾಂಗ್ರೆಸ್ ಸರಕಾರದ ಆಡಳಿತ ಅವಧಿಯಲ್ಲಿ ಹೊಸ ದಿಕ್ಕಿನ ರಾಜಕಾರಣವನ್ನು ದೇಶಕ್ಕೆ ಮಾದರಿಯಾಗಿ ತೋರಿಸಿದೆ. ಹಿಂದುಳಿದ ವರ್ಗಗಳಿಗೆ ಮೀಸಲಾತಿ ಕಲ್ಪಿಸುವ ಉದ್ದೇಶದಿಂದ ಮೊಟ್ಟ ಮೊದಲ ಬಾರಿಗೆ ಸಮಿತಿ ರಚನೆ ಮಾಡಿ ಮೀಸಲಾತಿ ನೀಡಿದ್ದು ದೇವರಾಜ ಅರಸು ಅವಧಿಯಲ್ಲಿ. ಆದರೆ, ಇಂದಿನ ಸ್ಥಿತಿ ಅತ್ಯಂತ ಗಂಭೀರವಾದ ಬದಲಾವಣೆ ಕಂಡಿದ್ದು, ಚಳವಳಿಗಳು ಕ್ಷೀಣಿಸುತ್ತಿವೆ. ಈ ಕುರಿತು ಆತ್ಮವಾಲೋಕನ ಮಾಡಿಕೊಳ್ಳಬೇಕು ಎಂದು ಅವರು ತಿಳಿಸಿದರು.

ಕರ್ನಾಟಕದಲ್ಲಿ ವಚನ ಚಳವಳಿ ಹಾಗೂ ಅಂಬೇಡ್ಕರ್ ವಾದ ವ್ಯಾಪಕವಾದ ಪ್ರಭಾವ ಬೀರಿದೆ. ಹೀಗಾಗಿ, ವಚನ ಚಳವಳಿ, ಅಂಬೇಡ್ಕರ್ ವಾದ, ಪ್ರಗತಿಪರರ ಚಳವಳಿಯಿದ್ದು, ಕೋಮುವಾದ ಪ್ರವೇಶ ಅಸಾಧ್ಯ ಎಂದುಕೊಂಡಿದ್ದೆವು. ಆದರೆ, ಬಸವಣ್ಣರ ವಿಚಾರಧಾರೆಗಳನ್ನು ಪಾಲಿಸುವವರೇ ಅವರ ವಿಚಾರಗಳಿಗೆ ವಿರುದ್ಧವಾಗಿ ಕೋಮುವಾದವನ್ನು ಬೆಂಬಲಿಸುತ್ತಿದ್ದಾರೆ. ಇಂದು ಅದು ದೊಡ್ಡದಾದ ಮರವಾಗಿ ಬೆಳೆದು ನಿಂತಿದೆ ಎಂದರು.

ದೇಶದಲ್ಲಿ ನಾನು ಹೇಳಿದ್ದನ್ನಷ್ಟೇ ಕೇಳಬೇಕು. ನಾನು ನಿರ್ಧರಿಸಿದ ಆಹಾರ ಸೇವಿಸಬೇಕು, ಬಟ್ಟೆ ಧರಿಸಬೇಕು ಎಂಬ ವಾದ ಬೆಳೆದಿದೆ. ನಾನು ನಂಬಿದ ತತ್ವಗಳ ಪರವಾಗಿ ಮಾತನಾಡುವವರನ್ನು ದಮನ ಮಾಡಲಾಗುತ್ತಿದೆ. ಅನಗತ್ಯ ವಿಚಾರಗಳಿಗೆ ದೇಶಭಕ್ತಿಯ ಪಟ್ಟ ಕಟ್ಟಲಾಗುತ್ತಿದೆ ಎಂದ ಅವರು, ಹಿರಿಯ ಪತ್ರಕರ್ತೆ ಗೌರಿ ಲಂಕೇಶ್, ವಿಚಾರವಾದಿ ಧಾಬೋಲ್ಕರ್ ಹಾಗೂ ಎಂ.ಎಂ.ಕಲಬುರ್ಗಿಯನ್ನು ಸತ್ಯವನ್ನು ಮಾತನಾಡಿದ್ದಕ್ಕಾಗಿ ಒಂದು ವರ್ಗದ ಗುಂಪುಗಳು ಹತ್ಯೆ ಮಾಡಲಾಗುತ್ತಿದೆ ಎಂದು ಅವರು ನುಡಿದರು.

ಇದೇ ಸಂದರ್ಭದಲ್ಲಿ ಮಾಜಿ ಅಡ್ವೋಕೇಟ್ ಜನರಲ್ ಪ್ರೊ.ರವಿವರ್ಮಕುಮಾರ್, ವಿಚಾರವಾದಿ ಡಾ.ಎಂ.ಎನ್.ಕೇಶವ್‌ರಾವ್ ಅವರಿಗೆ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಪ್ರೊ.ಎ.ಎಸ್.ನಟರಾಜ್ ಸೇರಿದಂತೆ ಮತ್ತಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X