ಫೆ.27: ಪ್ರೊ.ಶೇಷಗಿರಿರಾವ್‌ಗೆ ಭಾಷಾ ಭಾರತಿ ಪ್ರಾಧಿಕಾರ ಗೌರವ ಪ್ರಶಸ್ತಿ ಪ್ರದಾನ
ಬೆಂಗಳೂರು, ಫೆ.24: ಹಿರಿಯ ಸಾಹಿತಿ ಪ್ರೊ.ಎಲ್.ಎಸ್.ಶೇಷಗಿರಿರಾವ್‌ಗೆ ಕುವೆಂಪು ಭಾಷಾ ಭಾರತಿ ಪ್ರಾಧಿಕಾರವು ಗೌರವ ಪ್ರಶಸ್ತಿ ಪ್ರದಾನ ಕಾರ್ಯಕ್ರಮವನ್ನು ಫೆ.27ರಂದು ಬುಧವಾರ ಸಂಜೆ 4ಕ್ಕೆ ಶೇಷಗಿರಿರಾವ್‌ರವರ ಸ್ವಗೃಹ ಜೆ.ಪಿ.ನಗರ, 21ನೇ ಮುಖ್ಯರಸ್ತೆ, ಪಾರಿಜಾತದಲ್ಲಿ ಆಯೋಜಿಸಲಾಗಿದೆ.
ಪ್ರಾಧಿಕಾರದ ಅಧ್ಯಕ್ಷ ಡಾ. ಕೆ.ಮರುಳಸಿದ್ಧಪ್ಪ ಪ್ರಶಸ್ತಿ ಪ್ರದಾನ ಮಾಡಲಿದ್ದು, ಖ್ಯಾತ ಕವಿ ಡಾ.ಎಚ್.ಎಸ್.ವೆಂಕಟೇಶಮೂರ್ತಿ ಯವರು ಅಭಿನಂದನ ನುಡಿಗಳನ್ನಾಡಲಿದ್ದಾರೆ. ಕಾರ್ಯಕ್ರಮದಲ್ಲಿ ಹಲವು ಗಣ್ಯರು ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಪ್ರಕಟನೆಯಲ್ಲಿ ತಿಳಿಸಲಾಗಿದೆ.
Next Story





