Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ರಾಜ್ಯದಲ್ಲಿ ಇಸ್ರೇಲ್ ಮಾದರಿ ರೇಷ್ಮೆ...

ರಾಜ್ಯದಲ್ಲಿ ಇಸ್ರೇಲ್ ಮಾದರಿ ರೇಷ್ಮೆ ಕೃಷಿ ಅಳವಡಿಸಲು ಚಿಂತನೆ: ಸಚಿವ ಸಾ.ರಾ ಮಹೇಶ್

ವಾರ್ತಾಭಾರತಿವಾರ್ತಾಭಾರತಿ24 Feb 2019 9:18 PM IST
share
ರಾಜ್ಯದಲ್ಲಿ ಇಸ್ರೇಲ್ ಮಾದರಿ ರೇಷ್ಮೆ ಕೃಷಿ ಅಳವಡಿಸಲು ಚಿಂತನೆ: ಸಚಿವ ಸಾ.ರಾ ಮಹೇಶ್

ಮೈಸೂರು,ಫೆ.24: ರೇಷ್ಮೆ ಉದ್ಯಮವನ್ನು ಮತ್ತಷ್ಟು ಹೆಚ್ಚಿಸಲು ಇಸ್ರೇಲ್ ಮಾದರಿಯ ರೇಷ್ಮೆ ಕೃಷಿ ಅಳವಡಿಸಲು ಚಿಂತಿಸಲಾಗಿದೆ ಎಂದು ಪ್ರವಾಸೋದ್ಯಮ ಮತ್ತು ರೇಷ್ಮೆ ಸಚಿವ ಸಾ.ರಾ ಮಹೇಶ್ ತಿಳಿಸಿದರು.

ನಗರದ ಬಂಡಿಪಾಳ್ಯದಲ್ಲಿರುವ ಎಪಿಎಂಸಿ ಮಾರುಕಟ್ಟೆಯಲ್ಲಿ ರವಿವಾರ ರೇಷ್ಮೆ ಇಲಾಖೆ ಆರಂಭಿಸಿರುವ ನೂತನ ಸರ್ಕಾರಿ ರೇಷ್ಮೆಗೂಡಿನ ಮಾರುಕಟ್ಟೆ ಕೇಂದ್ರ ಉದ್ಘಾಟಿಸಿ ಅವರು ಮಾತನಾಡಿದರು. ರೇಷ್ಮೆ ಉದ್ಯಮ 12 ಲಕ್ಷ ಕುಟುಂಬಕ್ಕೆ ಜೀವನಾಧಾರವಾಗಿದ್ದು, ರೇಷ್ಮೆ ಬೆಳೆ ನಂಬಿರುವ ರೈತರ ಅಭಿವೃದ್ಧಿಗೆ 2 ಎಕರೆ ಜಾಗದಲ್ಲಿ ಉನ್ನತ ರೇಷ್ಮೆ ಮಾರುಕಟ್ಟೆ ಸ್ಥಾಪಿಸಲಾಗುವುದು ಎಂದು ಹೇಳಿದರು.

ರಾಜ್ಯದ ಆರ್ಥಿಕತೆಯಲ್ಲಿ ರೇಷ್ಮೆ ಮಹತ್ತರ ಪಾತ್ರವಹಿಸಿರುವುದರಿಂದ ಸರ್ಕಾರ ರೇಷ್ಮೆ ಉದ್ಯಮಕ್ಕೆ ಸಾಕಷ್ಟು ಸವಲತ್ತು ನೀಡಿದೆ. ರೇಷ್ಮೆಗೆ ಪ್ರಸಿದ್ಧವಾದ ಮೈಸೂರಿನ ಕೇಂದ್ರ ಭಾಗದಲ್ಲಿ ಮಾರುಕಟ್ಟೆ ವ್ಯವಸ್ಥೆ ಇಲ್ಲದಿರುವುದನ್ನು ಗಮನಿಸಿದ್ದೇವೆ. ಚಾಮರಾಜನಗರ, ಮಂಡ್ಯ, ಮೈಸೂರು ಜಿಲ್ಲೆಗಳ 36 ಸಾವಿರ ಬೆಳೆಗಾರರು ಹಾಗೂ 735 ವ್ಯಾಪಾರಗಾರರ ಕುಟುಂಬಗಳಿಗೆ ಮಾರುಕಟ್ಟೆ ಒದಗಿಸಲು ಮುಖ್ಯಮಂತ್ರಿಗಳಲ್ಲಿ ಪ್ರಸ್ತಾಪಿಸಿದಾಗ ಬಜೆಟ್‍ನಲ್ಲಿ ಘೋಷಣೆ ಮಾಡಿದರು ಎಂದು ತಿಳಿಸಿದರು. 

ರೇಷ್ಮೆಗೂಡಿನ ಅಭಿವೃದ್ಧಿಗೆ ರಾಜ್ಯದಲ್ಲಿ 55 ಸರ್ಕಾರಿ ಮಾರುಕಟ್ಟೆ ನಿರ್ಮಿಸಲಾಗಿದ್ದು, ಈ ಪೈಕಿ 20 ಬಿತ್ತನೆಗೂಡು ಹಾಗೂ 35 ವಾಣಿಜ್ಯ ಮಾರುಕಟ್ಟೆಗಳಿವೆ. ರೇಷ್ಮೆ ಮಾರುಕಟ್ಟೆಯಲ್ಲಿ ಇ-ಹಣ ಪಾವತಿಯನ್ನು ರಾಮನಗರದಲ್ಲಿ ಮಾದರಿಯಾಗಿ ಈಗಾಗಲೇ ಪ್ರಾರಂಭಿಸಲಾಗಿದೆ. ಮೈಸೂರಿನಲ್ಲಿ ಕೆಎಸ್‍ಐಸಿಯೂ ಇರುವುದರಿಂದ ರಾಮನಗರ ಭಾಗದಿಂದ ತರುವ ಬದಲಿಗೆ ಇಲ್ಲಿಂದಲೇ ಇ-ಹಣ ಪಾವತಿಗೆ ಸಹಾಯಕವಾಗಲಿದೆ ಎಂದು ಹೇಳಿದರು.  

ರಾಮನಗರ, ಚನ್ನಪಟ್ಟಣ, ಚಾಮರಾಜನಗರ ಭಾಗಗಳ ರೇಷ್ಮೆ ಬೆಳೆಗಾರರ ಸಬಲೀಕರಣಕ್ಕೆ ಪ್ರೋತ್ಸಾಹಧನ ನೀಡಲಾಗುವುದು. ರೈತರನ್ನು ಗಟ್ಟಿಗೊಳಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ನೇತೃತ್ವದ ಸರ್ಕಾರ ಈಗಾಗಲೇ ರೈತ ಸಾಲಮನ್ನಾದಂತಹ ಮಾದರಿ ಕಾರ್ಯಕ್ರಮ ನೀಡಿದೆ ಎಂದರು.

ರಾಜ್ಯದಲ್ಲಿ ರೇಷ್ಮೆ ಬೆಳೆಯನ್ನು ಹೆಚ್ಚಿಸಲು ಇಸ್ರೇಲ್ ಮಾದರಿಯ ರೇಷ್ಮೆ ಕೃಷಿಯನ್ನು ಅಳವಡಿಸಿಕೊಳ್ಳಲು ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ. ಇದರಿಂದ ಕಡಿಮೆ ಖರ್ಚಿನಲ್ಲಿ ಉತ್ತಮ ಫಸಲನ್ನು ಬೆಳೆದು ಉತ್ತಮ ಲಾಭಗಳಿಸಬಹುದು. ಅಂತಹ ವಾತಾವರಣನ್ನು ರಾಜ್ಯದ ರೈತರಿಗೆ ಸೃಷ್ಟಿ ಮಾಡಲಾಗುವುದು ಎಂದು ಹೇಳಿದರು. 

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಮಾತನಾಡಿ, ಈ ಭಾಗದ ರೈತರು ಕೊಳ್ಳೇಗಾಲ ಅಥವಾ ರಾಮನಗರ ಮಾರುಕಟ್ಟೆಗೆ ಹೋಗಬೇಕಿತ್ತು. ಸದ್ಯಕ್ಕೆ ಮನೆ ಬಾಗಿಲಲ್ಲೇ ಮಾರುಕಟ್ಟೆ ಬಂದಿದೆ. ಮಳೆ ಬಾರದಿದ್ದರೂ ಕಡಿಮೆ ಮಳೆಯಲ್ಲೇ ಹೈನುಗಾರಿಕೆ ಮಾದರಿಯಲ್ಲಿ ರೇಷ್ಮೆ ಬೆಳೆಯಬಹುದಾಗಿದೆ ಎಂದರು. 

ಮೇಯರ್ ಪುಷ್ಪಲತಾ ಜಗನ್ನಾಥ್, ಕೇಂದ್ರ ರೇಷ್ಮೆ ಮಂಡಳಿ ಅಧ್ಯಕ್ಷ ಕೆ.ಎಂ.ಹನುಮಂತರಾಯಪ್ಪ, ಸದಸ್ಯರಾದ ಸೋಮಣ್ಣ, ರಮೇಶ್ ಮುದ್ದೇಗೌಡ, ಎಪಿಎಂಸಿ ಅಧ್ಯಕ್ಷ ಪ್ರಭುಸ್ವಾಮಿ, ಉಪಾಧ್ಯಕ್ಷ ಚಿಕ್ಕಜವರಯ್ಯ, ನಿರ್ದೇಶಕರಾದ ಆನಂದ್, ಸಿದ್ದೇಗೌಡ, ಕೋಟೆಹುಂಡಿ ಮಹದೇವು, ಪ್ರಕಾಶ್, ಸದಸ್ಯರಾದ ನಾಗರಾಜು, ರೇಷ್ಮೆ ಅಭಿವೃದ್ಧಿ ಆಯುಕ್ತ ಕೆ.ಎಸ್.ಮಂಜುನಾಥ್, ರೇಷ್ಮೆ ಅಪರ ನಿರ್ದೇಶಕಿ ಶಾಂತಲಾ, ಸುಮನ್‍ ಚಿನ್, ಕೆಎಸ್‍ಐಸಿ ಪ್ರಧಾನ ವ್ಯವಸ್ಥಾಪಕ ಕೃಷ್ಣಪ್ಪ, ಸಚಿವರ ಆಪ್ತ ಕಾರ್ಯದರ್ಶಿ ಶ್ರೀಧರ್‍ನಾಯಕ್, ಜಯರಾಂ, ಹನುಮೇಶ್ ಇನ್ನಿತರರು ಹಾಜರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X