Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸಂಯುಕ್ತ ರಂಗದ ಸರಕಾರಕ್ಕೆ ಇದು ಸಕಾಲ:...

ಸಂಯುಕ್ತ ರಂಗದ ಸರಕಾರಕ್ಕೆ ಇದು ಸಕಾಲ: ಟಿಆರ್‌ಎಸ್

ವಾರ್ತಾಭಾರತಿವಾರ್ತಾಭಾರತಿ24 Feb 2019 10:45 PM IST
share
ಸಂಯುಕ್ತ ರಂಗದ ಸರಕಾರಕ್ಕೆ ಇದು ಸಕಾಲ: ಟಿಆರ್‌ಎಸ್

ತಿರುವನಂತಪುರಂ, ಫೆ.24: ಈ ಬಾರಿಯ ಚುನಾವಣೆಯಲ್ಲಿ ಪ್ರಾದೇಶಿಕ ಪಕ್ಷಗಳು ಪ್ರಮುಖ ಪಾತ್ರ ವಹಿಸಬೇಕಿದ್ದು, ಕೇಂದ್ರದಲ್ಲಿ ಸಂಯುಕ್ತ ರಂಗದ ಸರಕಾರ ಅಧಿಕಾರಕ್ಕೆ ಬರಲು ಇದು ಸಕಾಲವಾಗಿದೆ ಎಂದು ಟಿಆರ್‌ಎಸ್ ಸಂಸದೆ ಕೆ ಕವಿತಾ ಹೇಳಿದ್ದಾರೆ.

ತಿರುವನಂತಪುರಂ ಪ್ರೆಸ್ ಕ್ಲಬ್‌ನ ಆಶ್ರಯದಲ್ಲಿ ನಡೆದ ಮಾಧ್ಯಮದವರೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು , ಕಾಂಗ್ರೆಸ್ ಮತ್ತು ಬಿಜೆಪಿಯನ್ನು ಕಿತ್ತೊಗೆಯಬೇಕಿದ್ದು , ಪ್ರಾದೇಶಿಕ ಪಕ್ಷಗಳ ಒಗ್ಗೂಡುವಿಕೆಯಲ್ಲಿ ಸಂಯುಕ್ತ ರಂಗ ಸ್ಥಾಪಿಸಲು ತೆಲಂಗಾಣ ರಾಷ್ಟ್ರ ಸಮಿತಿ (ಟಿಆರ್‌ಎಸ್) ಕಾರ್ಯನಿರತವಾಗಿದೆ ಎಂದರು.

ಕವಿತಾ ಟಿಆರ್‌ಎಸ್ ಅಧ್ಯಕ್ಷ, ತೆಲಂಗಾಣದ ಮುಖ್ಯಮಂತ್ರಿ ಕೆ ಚಂದ್ರಶೇಖರ ರಾವ್ ಅವರ ಪುತ್ರಿ. ಬಿಜೆಪಿ ಮತ್ತು ಕಾಂಗ್ರೆಸ್‌ನೊಂದಿಗೆ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂಬುದು ಪ್ರಾದೇಶಿಕ ಪಕ್ಷಗಳ ಮೂಲ ಅಜೆಂಡಾವಾಗಿರಬೇಕು. ಈ ಎರಡೂ ಪಕ್ಷಗಳಿಗೆ ಜನತೆ ಸಾಕಷ್ಟು ಅವಕಾಶ ನೀಡಿದ್ದರೂ ಅದನ್ನು ಅವರು ವ್ಯರ್ಥವಾಗಿಸಿದ್ದಾರೆ. ಈ ಬಾರಿ ಮತ್ತೊಬ್ಬರಿಗೆ ಅವಕಾಶ ದೊರಕಬೇಕು ಎಂದು ಕವಿತಾ ಹೇಳಿದರು. ಪ್ರಾದೇಶಿಕ ಪಕ್ಷಗಳ ಪ್ರಸ್ತಾವಿತ ಒಕ್ಕೂಟಕ್ಕೆ ತೃತೀಯ ರಂಗ ಎಂಬ ಹೆಸರು ಸರಿಯಲ್ಲ, ಸಂಯುಕ್ತ ರಂಗ ಎಂಬ ಹೆಸರೇ ಸೂಕ್ತ. ಯಾಕೆಂದರೆ ಚುನಾವಣೆಯಲ್ಲಿ ನಾವು ಪ್ರಥಮ ರಂಗವಾಗಿ ಹೊರಹೊಮ್ಮುವ ಸಾಧ್ಯತೆಯೂ ಇದೆ ಎಂದರು.

ಮೀಸಲಾತಿ, ಶಿಕ್ಷಣ, ಆರೋಗ್ಯ ಮುಂತಾದ ಪ್ರಮುಖ ವಿಷಯಗಳಲ್ಲಿ ನಿರ್ಧಾರ ಕೈಗೊಳ್ಳುವ ಅಧಿಕಾರ ರಾಜ್ಯಗಳಿಗಿರಬೇಕು. ಸಮಾನ ಮನಸ್ಕ ಪ್ರಾದೇಶಿಕ ಪಕ್ಷಗಳ ಒಕ್ಕೂಟ ಈ ವಿಷಯದ ಬಗ್ಗೆ ಗಮನ ಹರಿಸಲಿದೆ. ಅಲ್ಲದೆ ರಾಷ್ಟ್ರದ ಅಭಿವೃದ್ಧಿಯ ವಿಷಯ ನಮ್ಮ ಪ್ರಮುಖ ಅಜೆಂಡಾ ಆಗಿರಲಿದೆ ಎಂದವರು ಹೇಳಿದ್ದಾರೆ. ಮೋದಿ ಕಳೆದ ಬಾರಿಯ ಚುನಾವಣೆಯ ಸಂದರ್ಭ ಮಹಿಳಾ ಮೀಸಲಾತಿ ಮಸೂದೆಯನ್ನು ಅಂಗೀಕರಿಸುವ ಭರವಸೆ ನೀಡಿದ್ದರು. ಆದರೆ ಸುಮಾರು ಐದು ವರ್ಷದ ಆಡಳಿತದಲ್ಲಿ , ಲೋಕಸಭೆಯಲ್ಲಿ ಬಹುಮತವಿದ್ದರೂ ಅವರಿಗೆ ಇದನ್ನು ಮಾಡಲಾಗಿಲ್ಲ. ಮತದಾರರನ್ನು ಸದಾ ಕಾಲಕ್ಕೂ ಭ್ರಮಾಲೋಕದಲ್ಲಿ ತೇಲಾಡಿಸಲು ಸಾಧ್ಯವಿಲ್ಲ ಎಂಬುದನ್ನು ಮೋದಿ ಮರೆತಿರಬಹುದು ಎಂದು ಕವಿತಾ ಹೇಳಿದರು. ಕೇರಳ ಸರಕಾರದ ಕುಟುಂಬಶ್ರೀ ಯೋಜನೆಯನ್ನು ಶ್ಲಾಘಿಸಿದ ಅವರು, ಮಹಿಳಾ ಸಶಕ್ತೀಕರಣ ಹೇಗೆ ಸಾಧ್ಯವೆಂಬುದನ್ನು ಕೇರಳ ಸರಕಾರ ಮಾಡಿ ತೋರಿಸಿದೆ. ಇದೇ ಮಾದರಿಯ ಯೋಜನೆಯನ್ನು ತೆಲಂಗಾಣದಲ್ಲೂ ಅನುಷ್ಟಾನಗೊಳಿಸಲು ಬಯಸಿದ್ದೇವೆ ಎಂದು ಕವಿತಾ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X