Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ನಾಲ್ಕು ತಿಂಗಳಲ್ಲಿ ಬೆಂಗಳೂರು...

ನಾಲ್ಕು ತಿಂಗಳಲ್ಲಿ ಬೆಂಗಳೂರು ನಗರದೆಲ್ಲೆಡೆ ವೈಫೈ: ಉಪಮುಖ್ಯಮಂತ್ರಿ ಪರಮೇಶ್ವರ್

ವಾರ್ತಾಭಾರತಿವಾರ್ತಾಭಾರತಿ25 Feb 2019 7:37 PM IST
share
ನಾಲ್ಕು ತಿಂಗಳಲ್ಲಿ ಬೆಂಗಳೂರು ನಗರದೆಲ್ಲೆಡೆ ವೈಫೈ: ಉಪಮುಖ್ಯಮಂತ್ರಿ ಪರಮೇಶ್ವರ್

ಬೆಂಗಳೂರು, ಫೆ. 25: ಬೆಂಗಳೂರು ನಗರವನ್ನು ಇನ್ನು ನಾಲ್ಕು ತಿಂಗಳಲ್ಲಿ ವೈಫೈ ನಗರವನ್ನಾಗಿ ಮಾಡಲಾಗುವುದು ಎಂದು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.

ಸೋಮವಾರ ಇಲ್ಲಿನ ಮಹಾಲಕ್ಷ್ಮಿ ಲೇಔಟ್‌ನ ಕಮಲಮ್ಮನ ಗುಂಡಿ ಆಟದ ಮೈದಾನದಲ್ಲಿ ಆಯೋಜಿಸಿದ್ದ ಮಹಾಲಕ್ಷ್ಮಿ ಲೇಔಟ್ ಕ್ಷೇತ್ರದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕು ಸ್ಥಾಪನೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಈಗಾಗಲೇ ನಗರದೆಲ್ಲೆಡೆ ವೈಫೈ ಹಾಕುವ ಕೆಲಸ ಮಾಡಲಾಗುತ್ತಿದ್ದು, ಈ ಸಂಬಂಧ ಬಿಬಿಎಂಪಿ ಆಯುಕ್ತರು ಹಲವು ಸಭೆ ನಡೆಸಿದ್ದಾರೆ. ಇನ್ನು ನಾಲ್ಕು ತಿಂಗಳಲ್ಲಿ ನಗರದೆಲ್ಲೆಡೆ ವೈಫೈ ಸೌಲಭ್ಯ ಒದಗಿಸಿಕೊಡಲಾಗುವುದು. ಈ ಮೂಲಕ ವಿಶ್ವದಲ್ಲೇ ಬೆಂಗಳೂರು ಮೊದಲ ವೈಫೈ ನಗರವಾಗಲಿದೆ ಎಂದ ಅವರು, ಮೈತ್ರಿ ಸರಕಾರ ಅಧಿಕಾರಕ್ಕೆ ಬಂದ ಮೇಲೆ ಬೆಂಗಳೂರನ್ನು ಗತಕಾಲದ ವೈಭವಕ್ಕೆ ತೆಗೆದುಕೊಂಡು ಹೋಗಬೇಕು ಎಂದು ಶಪಥ ಮಾಡಿದ್ದೇವೆ ಎಂದರು.

ಬೆಂಗಳೂರು ಹಿಂದೆ ಗಾರ್ಡನ್ ಸಿಟಿಯಾಗಿತ್ತು. ಆಧುನಿಕತೆ ಬಂದ ಮೇಲೆ ಜನಸಂಖ್ಯೆ ಜಾಸ್ತಿಯಾಗಿದೆ. ಇದರಿಂದ ಗತಕಾಲದ ವೈಭವ ಕಳೆದು ಹೋಗಿದೆ. ಹೀಗಾಗಿ ನಗರವನ್ನು ಅಭಿವೃದ್ಧಿ ಮಾಡುವ ಜೊತೆಗೆ ಗಾರ್ಡನ್ ಸಿಟಿ ಎಂಬ ಹೆಗ್ಗಳಿಕೆ ತರಲಾಗುವುದು ಎಂದು ಹೇಳಿದರು. ಮೈತ್ರಿ ಸರಕಾರದ ಗುರಿ ಎಂದರೆ ನಗರವನ್ನು ಅಭಿವೃದ್ದಿ ಮಾಡುವುದು. ಪಕ್ಷಾತೀತವಾಗಿ ಬೆಂಗಳೂರನ್ನು ಅಭಿವೃದ್ಧಿ ಮಾಡಲು ಕ್ರಮ ಕೈಗೊಂಡಿದ್ದೇವೆ. ಕಳೆದ ಸರಕಾರದಲ್ಲಿ ಬಿಬಿಎಂಪಿಗೆ 7 ಸಾವಿರ ಕೋಟಿ ರೂ.ನೀಡಲಾಗಿತ್ತು. ಈ ಬಾರಿ 8.015 ಕೋಟಿ ರೂ.ಹಣವನ್ನು ಬಿಬಿಎಂಪಿಗೆ ಮಂಜೂರು ಮಾಡಲಾಗಿದೆ. ಮುಂದಿನ 5 ವರ್ಷದಲ್ಲಿ 50 ಸಾವಿರ ಕೋಟಿ ರೂ.ಹಣವನ್ನು ನಗರದ ಅಭಿವೃದ್ಧಿಗೆ ಖರ್ಚು ಮಾಡಲಿದ್ದೇವೆ ಎಂದರು. ಜೊತೆಗೆ ನಗರದ ನಾಲ್ಕು ದಿಕ್ಕಿನಲ್ಲಿ 25 ಸಾವಿರ ಕೋಟಿ ರೂ.ವೆಚ್ಚದಲ್ಲಿ ಎರಡು ಎಲಿವೇಟೆಡ್ ಕಾರಿಡಾರ್ ಮಾಡಲಾಗುತ್ತಿದೆ. ಮೆಟ್ರೋ ಕೂಡ ವರ್ಷದಲ್ಲಿ 80 ಕೋಟಿ ರೂ.ಲಾಭ ಮಾಡಿದೆ. ಇನ್ನು ಆರು ತಿಂಗಳಲ್ಲಿ ಬೆಂಗಳೂರು ಅಂತರ್‌ರಾಷ್ಟ್ರೀಯ ಪ್ರದರ್ಶನ ಕೇಂದ್ರದ ವರೆಗಿನ ಮೆಟ್ರೋ ಎರಡನೆ ಹಂತ ಪೂರ್ಣಗೊಳ್ಳಲಿದೆ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X