Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ವಿಕಲಚೇತನರ ಉದ್ಯೋಗ ಮೇಳ ಯಶಸ್ವಿ: ಸಚಿವೆ...

ವಿಕಲಚೇತನರ ಉದ್ಯೋಗ ಮೇಳ ಯಶಸ್ವಿ: ಸಚಿವೆ ಡಾ.ಜಯಮಾಲಾ

ವಾರ್ತಾಭಾರತಿವಾರ್ತಾಭಾರತಿ25 Feb 2019 9:39 PM IST
share
ವಿಕಲಚೇತನರ ಉದ್ಯೋಗ ಮೇಳ ಯಶಸ್ವಿ: ಸಚಿವೆ ಡಾ.ಜಯಮಾಲಾ

ಬೆಂಗಳೂರು, ಫೆ.25: ವಿಕಲಚೇತನರಿಗಾಗಿ ಆಯೋಜಿಸಲಾಗಿರುವ ಈ ಉದ್ಯೋಗ ಮೇಳವು ಅತಂತ್ಯ ಯಶಸ್ವಿಯಾಗಿದೆ. 150 ಪ್ರತಿಷ್ಠಿತ ಕಂಪೆನಿಗಳು ಹಾಗೂ ಸುಮಾರು 6 ಸಾವಿರ ಮಂದಿ ನೋಂದಣಿ ಮಾಡಿಸಿಕೊಂಡಿದ್ದರು. ಈ ಪೈಕಿ 5 ಸಾವಿರ ಮಂದಿ ಭಾಗವಹಿಸಿದ್ದರು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಡಾ.ಜಯಮಾಲಾ ತಿಳಿಸಿದರು.

ಸೋಮವಾರ ಕೋರಮಂಗಲದ ಕೆಎಸ್‌ಆರ್‌ಪಿ 4ನೇ ಬೆಟಾಲಿಯನ್ ಮೈದಾನದಲ್ಲಿ ಆಯೋಜಿಸಲಾಗಿದ್ದ ವಿಕಲಚೇತನರ ರಾಜ್ಯಮಟ್ಟದ ಉದ್ಯೋಗ ಮೇಳವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಈ ಉದ್ಯೋಗದ ಮೇಳದ ಯಶಸ್ಸಿಗಾಗಿ ಸುಮಾರು ಎರಡು ಸಾವಿರ ಸ್ವಯಂ ಸೇವಾ ಕಾರ್ಯಕರ್ತರು ವಿಕಲಚೇತನರಿಗೆ ಸಹಕರಿಸಲು ಭಾಗವಹಿಸಿದ್ದಾರೆ. ವಿಆರ್ ಯುವರ್ ವಾಯ್ಸಾ ಎಂಬ ಸಂಸ್ಥೆಯು ರಾಜ್ಯ ಸರಕಾರದ ಸಹಯೋಗದಲ್ಲಿ ಈ ಉದ್ಯೋಗ ಮೇಳವನ್ನು ಆಯೋಜಿಸಿದೆ ಎಂದು ಜಯಮಾಲಾ ಹೇಳಿದರು.

ಉದ್ಯೋಗ ಮೇಳದಲ್ಲಿ 599 ವಿಕಲಚೇತನರು ಅಂತಿಮ ಆಯ್ಕೆ ಆದರೆ, 2343 ಮಂದಿ ತಾತ್ಕಾಲಿಕ ಆಯ್ಕೆ ಆದರು. ವಿಕಲಚೇತನರ ಇಲಾಖೆಯ ಸಹಯೋಗದಲ್ಲಿ ಶಾಸ್ತ್ರಿ ಮೆಮೊರಿಯಲ್ ವಿಶೇಷ ಶಾಲೆಯ ವಿಜಯಲಕ್ಷ್ಮಿ ಎಲ್ಲ ಉದ್ಯೋಗ ಅರಸಿ ಬಂದವರಿಗೆ 6500 ತಿಂಡಿ, ಎಲ್ಲ ಸ್ವಯಂ ಸೇವಕರಿಗೆ ಮತ್ತು ಅಧಿಕಾರಿ, ಸಿಬ್ಬಂದಿಗಳು, ಉಪಾಧ್ಯಾಯರು, ಎಂ.ಆರ್.ಡಬ್ಲ್ಯೂಗಳು ಮತ್ತು ಬಂಧುಗಳಿಗೆ 2800 ಉತ್ತಮ ಊಟದ ವ್ಯವಸ್ಥೆ ಉಚಿತವಾಗಿ ಮಾಡಿದರು. 6 ಬಸ್ಸುಗಳನ್ನೂ ಇಂದಿನ ಮಟ್ಟಿಗೆ ಒದಗಿಸಿದ್ದರು.

ಪೊಲೀಸ್ ಇಲಾಖೆಯ ಕೆ.ಎಸ್.ಆರ್.ಪಿ.ಯ ಹೆಚ್ಚುವರಿ ಮಹಾ ನಿರ್ದೇಶಕ ಭಾಸ್ಕರ್ ರಾವ್ ಉತ್ತಮ ಮೈದಾನ ಒದಗಿಸಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ಉಮಾ ಮಹದೇವನ್ ಮಾರ್ಗದರ್ಶನದಲ್ಲಿ ಅತ್ಯುತ್ತಮವಾಗಿ ವ್ಯವಸ್ಥೆ ಮಾಡಲಾಗಿತ್ತು.

ಇತರೇ ಸ್ವಯಂ ಸೇವಾಸಂಸ್ಥೆಗಳು 13 ಬಸ್ಸುಗಳು, ಸಂಜ್ಞಾ ಭಾಷಾ ತಜ್ಞರ ಸೇವೆ ಒದಗಿಸಿದರು. ಇಲಾಖೆಯ ವತಿಯಿಂದಲೂ ವಿಕಲಚೇತನರ ಭಾಗವಹಿಸುವಿಕೆ, ಪ್ರಚಾರ, ಎಲ್ಲ ಪತ್ರಿಕೆಯಲ್ಲಿ ಜಾಹೀರಾತುಗಳು, ಪಲಾನುಭವಿಗಳನ್ನು/ಆಕಾಂಕ್ಷಿಗಳನ್ನು ರಾಜ್ಯ ಮಟ್ಟದಿಂದ ಕರೆತಂದು ಪ್ರೋತ್ಸಾಹಿಸಲಾಯಿತು.

ಕುಡಿಯುವ ನೀರು, ಗಾಲಿ ಕುರ್ಚಿಯ ವ್ಯವಸ್ಥೆ, ಪೆಂಡಾಲ್ ವ್ಯವಸ್ಥೆ, ಸ್ವಯಂಸೇವಾ ಸಂಸ್ಥೆಗಳ ಸ್ಟಾಲ್‌ಗಳು, ಇಲಾಖೆಯ ಸ್ಟಾಲ್‌ಗಳು, ಸಂಜ್ಞಾ ಭಾಷಾ ತಜ್ಞರು, 150 ಕಂಪನಿಗಳ ಸುಸಜ್ಜಿತ ಸಂದರ್ಶನ ಕೊಠಡಿಗಳು, ಸ್ಥಳದಲ್ಲೇ ನೋಂದಣಿ ವ್ಯವಸ್ಥೆ, ಉದ್ಘಾಟನಾ ಕಾರ್ಯಕ್ರಮದ ವ್ಯವಸ್ಥೆ, ಸ್ವಯಂಸೇವಕರ ಬದ್ಧತೆ ಎದ್ದು ಕಾಣುತ್ತಿತ್ತು.

ವಿ ಆರ್ ಯುವರ್ ವಾಯ್ಸ್ ಅನ್ನು ಆನ್ ಲೈನ್ ಮೂಲಕವೇ ವ್ಯವಸ್ಥಿತ ನಿರ್ವಹಣೆ, ಬ್ಯಾಟರಿಚಾಲಿತ ವಾಹನಗಳ ವ್ಯವಸ್ಥೆ, ಬಸ್‌ಗಳ ಮೂಲಕ ಬೆಂಗಳೂರಿನ ವಿವಿಧ ಭಾಗಗಳಿಗೆ ಹಾಗೂ ಬಸ್ ನಿಲ್ದಾಣಕ್ಕೆ ಉಚಿತವಾಗಿ ಕಳಿಸುವಿಕೆ, ಇತ್ಯಾದಿ ಅತ್ಯುತ್ತಮ ವ್ಯವಸ್ಥೆಗಳಿಂದ ಎಲ್ಲವೂ ಅಚ್ಚುಕಟ್ಟಾಗಿ ನಡೆಯಿತು. ಈ ಕಾರ್ಯಕ್ರಮದಲ್ಲಿ ವಿಕಲಚೇತನರ ಸಬಲೀಕರಣ ಇಲಾಖೆಯ ನಿರ್ದೇಶಕ ಜಯವಿಭವ ಸ್ವಾಮಿ, ವಿ ಆರ್ ಯುವರ್ ವಾಯ್ಸ್ ನ ಖಾಸಿಮ್ ಬಸಿತ್ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X