ಪತ್ರಕರ್ತರ 34ನೇ ರಾಜ್ಯ ಸಮ್ಮೇಳನ: ಪ್ರಚಾರ ರಥಕ್ಕೆ ಚಾಲನೆ

ಮೈಸೂರು,ಫೆ.25: ಪತ್ರಕರ್ತರ 34 ನೇ ರಾಜ್ಯ ಸಮ್ಮೇಳನವು ಮಾರ್ಚ್ 1,2 ರಂದು ಸುತ್ತೂರು ಶ್ರೀಕ್ಷೇತ್ರದಲ್ಲಿ ನಡೆಯಲಿದ್ದು, ಸಮ್ಮೇಳನದ ಅಂಗವಾಗಿ ಮಾಧ್ಯಮ ಪ್ರಚಾರ ರಥಕ್ಕೆ ಚಾಲನೆ ನೀಡಲಾಯಿತು.
ನಗರದ ಕೋಟೆ ಆಂಜನೇಯ ಸ್ವಾಮಿ ದೇವಾಲಯದ ಆವರಣದಲ್ಲಿ ಸೋಮವಾರ ಸಂಸದರಾದ ಪ್ರತಾಪಸಿಂಹ, ಆರ್. ಧೃವನಾರಾಯಣ್ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು ಪತ್ರಕರ್ತರ ಸಮ್ಮೇಳನ ನಡೆಯುತ್ತಿರುವುದು ಖುಷಿಯ ವಿಚಾರ. ಸಮ್ಮೇಳನದಲ್ಲಿ ಪತ್ರಕರ್ತರ ಸಮಸ್ಯೆಗಳ ಸಂಬಂಧ ಚರ್ಚೆ ನಡೆಯಬೇಕಿದೆ. ಆ ಮೂಲಕ ಸರ್ಕಾರದ ಗಮನ ಸೆಳೆಯುವ ಪ್ರಯತ್ನ ಸಮ್ಮೇಳನದಿಂದ ಆಗಬೇಕಿದೆ. ಸುತ್ತೂರು ಕ್ಷೇತ್ರದಲ್ಲಿ ನಡೆಯುತ್ತಿರುವ ಪತ್ರಕರ್ತರ ಸಮ್ಮೇಳನ ಯಶಸ್ವಿಯಾಗಲಿ ಎಂದು ಶುಭ ಹಾರೈಸಿದರು.
ಈ ಸಂದರ್ಭ ಉದ್ಯಮಿ ಜಿ.ರವಿ, ಸಹಾಯಕ ಪೊಲೀಸ್ ಆಯುಕ್ತ ಜಿ.ಎನ್.ಮೋಹನ್, ವಾರ್ತಾ ಇಲಾಖೆ ಸಹಾಯಕ ನಿರ್ದೇಶಕ ರಾಜು, ಹಿರಿಯ ಪತ್ರಕರ್ತ ಅಂಶಿ ಪ್ರಸನ್ನ ಕುಮಾರ್, ಅಧ್ಯಕ್ಷ ಸಿ.ಕೆ.ಮಹೇಂದ್ರ, ಲೋಕೇಶ್ ಬಾಬು ಮತ್ತಿತರರು ಪಾಲ್ಗೊಂಡಿದ್ದರು.
Next Story





