ಪತ್ರಕರ್ತ ವಿಘ್ನೇಶ್ ಭೂತನಕಾಡುವಿಗೆ ರಾಜ್ಯ ಪ್ರಶಸ್ತಿ

ಮಡಿಕೇರಿ,ಫೆ.25: ಕನ್ನಡಪ್ರಭ ಕೊಡಗು ಜಿಲ್ಲಾ ವರದಿಗಾರ ವಿಘ್ನೇಶ್ ಎಂ. ಭೂತನಕಾಡು ಅವರಿಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ 2017ನೇ ಸಾಲಿನ ರಾಜ್ಯ ಪ್ರಶಸ್ತಿ ಲಭಿಸಿದೆ. ವನ್ಯಪ್ರಾಣಿಗಳ ಕುರಿತ ಅತ್ಯುತ್ತಮ ಲೇಖನಕ್ಕೆ ಸಂಘವು ಕೊಡಮಾಡುವ ಆರ್.ಎಲ್. ವಾಸುದೇವರಾವ್ ಪ್ರಶಸ್ತಿ ಇದಾಗಿದೆ.
ಕನ್ನಡಪ್ರಭ ಪತ್ರಿಕೆಯಲ್ಲಿ ಪ್ರಕಟಗೊಂಡಿದ್ದ ‘ಹಲಸಿನ ಹಣ್ಣು ತಿನ್ನಲು ಕಾಫಿ ತೋಟಕ್ಕೆ ಕಾಡಾನೆಗಳ ದಂಡು’ ಎಂಬ ವರದಿ ಆಯ್ಕೆಯಾಗಿದೆ. ಮಾ.2ರಂದು ಮೈಸೂರಿನ ಶ್ರೀಕ್ಷೇತ್ರ ಸುತ್ತೂರು ಮಠದಲ್ಲಿ ನಡೆಯಲಿರುವ ಪತ್ರಕರ್ತರ 34ನೇ ರಾಜ್ಯ ಸಮ್ಮೇಳನದಲ್ಲಿ ವಿಘ್ನೇಶ್ ಅವರು ಪ್ರಶಸ್ತಿ ಸ್ವೀಕರಿಸಲಿದ್ದಾರೆ ಎಂದು ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷೆ ಬಿ.ಆರ್. ಸವಿತಾ ರೈ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story





