ದ.ಕ. ಜಿಲ್ಲಾ ಕಾಂಗ್ರೆಸ್‌ನಿಂದ ವಿಜಯೋತ್ಸವ

ಮಂಗಳೂರು, ಫೆ.26: ಭಯೋತ್ಪಾದಕರ ಶಿಬಿರಗಳ ಮೇಲೆ ವಾಯುಸೇನೆ ದಾಳಿ ನಡೆಸಿದ ಬಗ್ಗೆ ದ.ಕ. ಜಿಲ್ಲಾ ಕಾಂಗ್ರೆಸ್‌ನಿಂದ ನಗರದ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದ ಮುಂಭಾಗ ವಿಜಯೋತ್ಸವ ಆಚರಿಸಲಾಯಿತು.
ಈ ಸಂದರ್ಭ ನಗರಾಭಿವೃದ್ಧಿ ಸಚಿವ ಯು.ಟಿ.ಖಾದರ್, ಜಿಲ್ಲಾ ಕಾಂಗ್ರೆಸ್ ಘಟಕದ ಅಧ್ಯಕ್ಷ ಹರೀಶ್‌ಕುಮಾರ್, ಮುಖ್ಯಮಂತ್ರಿಯ ಸಂಸದೀಯ ಕಾರ್ಯದರ್ಶಿ ಐವನ್ ಡಿಸೋಜ, ಮಾಜಿ ಸಚಿವ ರಮಾನಾಥ ರೈ, ಮೇಯರ್ ಭಾಸ್ಕರ್ ಕೆ., ಶಶಿಧರ್ ಹೆಗ್ಡೆ, ಮಂಗಳೂರು ಮಹಾನಗರ ಪಾಲಿಕೆಯ ಸದಸ್ಯರಾದ ಡಿ.ಕೆ. ಅಶೋಕ್, ವಿನಯರಾಜ್, ಶಾಸಕಿ ಸೌಮ್ಯಾ ರೆಡ್ಡಿ, ಎಐಎಂಸಿ ಪ್ರಧಾನ ಕಾರ್ಯದರ್ಶಿಗಳಾದ ಅಪ್ಸರಾ ರೆಡ್ಡಿ, ಜೆನೆಟ್ ಡಿಸೋಜ, ಮಾಜಿ ಶಾಸಕಿ ಶಕುಂತಳಾ ಶೆಟ್ಟಿ, ಜಿಪಂ ಸದಸ್ಯೆ ಮಮತಾ ಗಟ್ಟಿ, ಮಾಜಿ ಮೇಯರ್ ಕವಿತಾ ಸನೀಲ್, ಜಿಲ್ಲಾ ಮಹಿಳಾ ಕಾಂಗ್ರೆಸ್ ಘಟಕದ ಅಧ್ಯಕ್ಷೆ ಶಾಲೆಟ್ ಪಿಂಟೊ ಮತ್ತಿತರರು ಉಪಸ್ಥಿತರಿದ್ದರು.
Next Story





