Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ವಿದ್ಯುತ್ ಚಾಲಿತ ವಾಹನ ಬಳಕೆಯಲ್ಲಿ ಇತರೆ...

ವಿದ್ಯುತ್ ಚಾಲಿತ ವಾಹನ ಬಳಕೆಯಲ್ಲಿ ಇತರೆ ರಾಜ್ಯಗಳಿಗೆ ಕರ್ನಾಟಕ ಮಾದರಿ: ಸಚಿವ ಕೆ.ಜೆ.ಜಾರ್ಜ್

ವಾರ್ತಾಭಾರತಿವಾರ್ತಾಭಾರತಿ26 Feb 2019 7:59 PM IST
share
ವಿದ್ಯುತ್ ಚಾಲಿತ ವಾಹನ ಬಳಕೆಯಲ್ಲಿ ಇತರೆ ರಾಜ್ಯಗಳಿಗೆ ಕರ್ನಾಟಕ ಮಾದರಿ: ಸಚಿವ ಕೆ.ಜೆ.ಜಾರ್ಜ್

ಬೆಂಗಳೂರು, ಫೆ.26: ವಿದ್ಯುತ್ ಚಾಲಿತ ಮತ್ತು ಸುಸ್ಥಿರ ಸಂಚಾರ, ಚಾರ್ಜಿಂಗ್ ಮೂಲಸೌಕರ್ಯ ಹಾಗೂ ಬ್ಯಾಟರಿ ತಂತ್ರಜ್ಞಾನದಲ್ಲಿ ಕರ್ನಾಟಕ ಕ್ರಾಂತಿಕಾರಕ ಬದಲಾವಣೆಗಳನ್ನು ತಂದು ಇತರೆ ರಾಜ್ಯಗಳಿಗೆ ಮಾದರಿಯಾಗಲಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಕೆ.ಜೆ.ಜಾರ್ಜ್ ತಿಳಿಸಿದರು.

ಮಂಗಳವಾರ ನಗರದಲ್ಲಿ ಕಾನ್ಫಿಡರೇಷನ್ ಆಫ್ ಇಂಡಿಯನ್ ಇಂಡಸ್ಟ್ರೀಸ್(ಸಿಐಐ) ಆಯೋಜಿಸಿದ್ದ ಭವಿಷ್ಯದ ಸಂಚಾರ ಪ್ರದರ್ಶನ(ಎಫ್‌ಎಂಎಸ್) ಸಮ್ಮೇಳನ-2019ನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಕರ್ನಾಟಕ ಹಂತಹಂತವಾಗಿ ಎಲೆಕ್ಟ್ರಿಕ್ ವಾಹನಗಳ ಉತ್ಪಾದನಾ ಕಾರ್ಯತಂತ್ರವನ್ನು ಹಾಕಿಕೊಂಡಿದೆ. ಇದು ಸ್ಥಳೀಯ ಉತ್ಪಾದನೆಯ ನೆಲೆ ಬಲಗೊಳ್ಳಲು ಮತ್ತು ಎಲೆಕ್ಟ್ರಿಕ್ ವಾಹನಗಳ ಸ್ಥಳೀಯ ಪೂರೈಕೆ ಸರಣಿಯನ್ನು ಬಲಗೊಳಿಸಲು ಪೂರಕವಾಗಿದ್ದು, ಎಲೆಕ್ಟ್ರಿಕ್ ಚಾಲಿತ ತಂತ್ರಜ್ಞಾನಗಳಿಗೆ ಇದು ಒತ್ತು ನೀಡುತ್ತದೆ. ಎಲೆಕ್ಟ್ರಿಕ್ ವಾಹನಗಳಿಗೆ ಸಬ್ಸಿಡಿ ಘೋಷಿಸಿದ ಮೊಟ್ಟಮೊದಲ ರಾಜ್ಯ ಕರ್ನಾಟಕವಾಗಿದೆ ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದರು.

ಎಲೆಕ್ಟ್ರಿಕ್ ವಾಹನಗಳನ್ನು ಜನಪ್ರಿಯಗೊಳಿಸಲು ಮತ್ತು ಎಲೆಕ್ಟ್ರಿಕ್ ವಾಹನಗಳ ಚಾರ್ಜಿಂಗ್ ಸ್ಥಳವನ್ನು ವೈವಿಧ್ಯಮಯಗೊಳಿಸಲು ಮತ್ತು ಆಕರ್ಷಕ ಲೋಗೊ ಮೂಲಕ ಅದನ್ನು ಜನಪ್ರಿಯಗೊಳಿಸಲು ಕ್ರಿಯಾಯೋಜನೆ ಸಿದ್ಧವಾಗುತ್ತಿದೆ. ಇದು ಎಲೆಕ್ಟ್ರಿಕ್ ವಾಹನಗಳಿಗೆ ನಗರದಲ್ಲಿ ಆದ್ಯತೆಯ ಪಾರ್ಕಿಂಗ್ ಸ್ಥಳಾವಕಾಶ ಒದಗಿಸುವ ಮತ್ತು ನಗರಾದ್ಯಂತ ಇದರ ಇರುವಿಕೆಯನ್ನು ಆಕರ್ಷಕವಾಗಿ ಹೆಚ್ಚಿಸಲು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಅವರು ಹೇಳಿದರು.

ಭಾರತದಲ್ಲೇ ಮೊಟ್ಟಮೊದಲ ಬಾರಿಗೆ ಬೆಂಗಳೂರು ನಗರದಾದ್ಯಂತ 108 ಸ್ಥಳಗಳಲ್ಲಿ (ಸರಕಾರಿ ಜಾಗದಲ್ಲಿ) ಇ-ಚಾರ್ಜಿಂಗ್ ಸ್ಟೇಷನ್‌ಗಳನ್ನು ಆರಂಭಿಸುವ ಸಲುವಾಗಿ ಗುರುತಿಸಲಾಗಿದ್ದು, ಬೆಸ್ಕಾಂ ಇದಕ್ಕೆ ಬಿಡ್‌ಗಳನ್ನು ಆಹ್ವಾನಿಸಲಿದೆ. ರಾಜ್ಯ ಸರಕಾರದ ಸಿಬ್ಬಂದಿ ಬಳಸುವ ಶೇ.50ರಷ್ಟು ಪೆಟ್ರೋಲ್ ಮತ್ತು ಡೀಸೆಲ್ ವಾಹನಗಳನ್ನು ಪರಿಸರ ಸ್ನೇಹಿ ಎಲೆಕ್ಟ್ರಿಕ್ ವಾಹನಗಳಾಗಿ 2019ರ ಅಂತ್ಯದ ಒಳಗಾಗಿ ಪರಿವರ್ತಿಸಲಾಗುತ್ತಿದೆ ಎಂದು ಅವರು ತಿಳಿಸಿದರು.

ಕರ್ನಾಟಕದ ನಗರಾಭಿವೃದ್ಧಿ ಇಲಾಖೆಯು, ಕಟ್ಟಡ ಬೈಲಾಗಳಿಗೆ ತಿದ್ದುಪಡಿ ತಂದು, ಶೇ.10-20ರಷ್ಟು ಪಾರ್ಕಿಂಗ್ ಸ್ಥಳವನ್ನು ಎಲೆಕ್ಟ್ರಿಕ್ ವಾಹನಗಳಿಗೆ ಮೀಸಲಿಡುವುದನ್ನು ಕಡ್ಡಾಯಪಡಿಸಲಿದೆ. ಎಲೆಕ್ಟ್ರಿಕ್ ವಾಹನಗಳ ಮಾಲಕರಿಗಾಗಿ ಹೊಸ ಆ್ಯಪ್ ಅಭಿವೃದ್ಧಿಪಡಿಸಲಾಗುತ್ತಿದ್ದು, ಇದರಲ್ಲಿ ಎಲೆಕ್ಟ್ರಿಕ್ ವಾಹನಗಳ ಮೂಲಸೌಕರ್ಯದ ಲಭ್ಯತೆಯನ್ನು ಗುರುತಿಸಲು ಮತ್ತು ಸ್ಥಳ ಗುರುತಿಸಲು ನೆರವು ನೀಡಲಾಗುತ್ತದೆ ಎಂದು ಅವರು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X