ಫೆ. 28ರಿಂದ ಕಾನೂನು ಸಾಕ್ಷರತಾ ರಥ
ಉಡುಪಿ, ಫೆ.26: ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘ ಉಡುಪಿ, ಅಭಿಯೋಗ ಇಲಾಖೆ, ಪೊಲೀಸ್ ಇಲಾಖೆ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ಇವುಗಳ ಸಂಯುಕ್ತ ಆಶ್ರಯದಲ್ಲಿ ಕಾನೂನು ಸಾಕ್ಷರತಾ ರಥ (ಸಂಚಾರಿ ಜನತಾ ನ್ಯಾಯಾಲಯ ಮತ್ತು ಕಾನೂನು ಸಾಕ್ಷರತಾ ರಥ)ದ ಮೂಲಕ ಕಾನೂನು ಸಾಕ್ಷರತಾ ಕಾರ್ಯಕ್ರಮಗಳು ಫೆ.28 ರಿಂದ ಮಾರ್ಚ್ 2ರವರೆಗೆ ನಡೆಯಲಿದೆ.
ಫೆ.28ರ ಬೆಳಗ್ಗೆ 9:30ಕ್ಕೆ ನಗರದ ಕ್ರಿಶ್ಚಿಯನ್ ಪ್ರೌಢ ಶಾಲೆಯಲ್ಲಿ ಪ್ರದಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರೂ ಆದ ಸಿ.ಎಂ.ಜೋಶಿ ಕಾನೂನು ಸಾಕ್ಷರಥಾ ರಥಕ್ಕೆ ಚಾಲನೆ ನೀಡಿ ಉದ್ಘಾಟಿಸಲಿದ್ದಾರೆ.
ಕ್ರಿಶ್ಚಿಯನ್ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಹೆಲೆನ್ ವಿ. ಸಾಲಿನ್ಸ್ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
Next Story





